‘ಬೆಳೆ ಸಮೀಕ್ಷೆ ದತ್ತಾಂಶವನ್ನು ಬೆಳೆ ವಿಮೆ, ಬೆಂಬಲ ಬೆಲೆ, ಬೆಳೆ ನಷ್ಟ ಪರಿಹಾರ, ನೇರ ನಗದು ವರ್ಗಾವಣೆ ಹಾಗೂ ಇತರೆ ಯೋಜನೆಗಳ ಅನುಷ್ಠಾನಕ್ಕೆ ಬಳಕೆ ಮಾಡಲಾಗುತ್ತದೆ. ರೈತರು ಬೆಳೆ ಸಮೀಕ್ಷೆಯಿಂದ ವಂಚಿತರಾಗದೇ, ಬೆಳೆ ಸಮೀಕ್ಷೆಯಲ್ಲಿ ದಾಖಲಾದ ಬೆಳೆಯ ಮಾಹಿತಿಯನ್ನು ಬೆಳೆ ದರ್ಶಕ ಆ್ಯಪ್ ಮೂಲಕ ತಿಳಿಯಬಹುದು. ಇದರಲ್ಲಿ ಯಾವುದಾದರೂ ಸಮಸ್ಯೆ ಇದ್ದರೆ ಅಥವಾ ವ್ಯತ್ಯಾಸಗಳಿದ್ದರೆ, ಆಗಸ್ಟ್ 18ರೊಳಗೆ ಆಕ್ಷೇಪಣೆ ಸಲ್ಲಿಸಬೇಕು’ ಎಂದು ಕೋರಿದ್ದಾರೆ.