ಹಾವೇರಿ: ‘ಜಿಲ್ಲೆಯು ನಿತ್ಯವೂ ಸ್ವಚ್ಛವಾಗಿರಲು ಪೌರಕಾರ್ಮಿಕರು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದಾರೆ. ಇಂಥ ಪೌರಕಾರ್ಮಿಕರ ವೇತನ ಪಾವತಿ ವಿಳಂಬವಾಗುತ್ತಿರುವ ಬಗ್ಗೆ ದೂರುಗಳಿವೆ. ಸಂಬಂಧಪಟ್ಟ ಅಧಿಕಾರಿಗಳು ನಿಗದಿತ ಸಮಯದಲ್ಲಿ ವೇತನ ಪಾವತಿಗೆ ಗಮನ ಹರಿಸಬೇಕು’ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದರು.

ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ‘ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಎಸ್ಸಿಎಸ್ಪಿ-ಟಿಎಸ್ಪಿ) ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಸಫಾಯಿ ಕರ್ಮಚಾರಿಗಳ ಕುರಿರ ಜಿಲ್ಲಾ ಮಟ್ಟದ ಸಮಿತಿ ಸಭೆ’ಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪೌರಕಾರ್ಮಿಕರ ವೇತನ ವಿಳಂಬದ ವಿಷಯ ಪ್ರಸ್ತಾಪಿಸಿದ ಸಮಿತಿಯ ಸದಸ್ಯರು, ‘ಪೌರಕಾರ್ಮಿಕರ ವೇತನ ಪ್ರತಿ ತಿಂಗಳು ವಿಳಂವಾಗುತ್ತಿದೆ. ಇದರಿಂದ ಅವರ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ. ತಿಂಗಳ ಖರ್ಚು, ಮಕ್ಕಳ ಶಾಲಾ ಶುಲ್ಕ ಹಾಗೂ ಇತರೆ ಖರ್ಚಿಗೂ ಪೌರಕಾರ್ಮಿಕರು ಪರದಾಡುವಂತಾಗಿದೆ. ಪ್ರತಿ ತಿಂಗಳು ನಿಗದಿತ ಸಮಯಕ್ಕೆ ವೇತನ ನೀಡಬೇಕು. ಪೌರಕಾರ್ಮಿಕರ ಕುಂದುಕೊರತೆ ಆಲಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪ್ರತ್ಯೇಕ ಸಭೆ ನಡೆಸಬೇಕು’ ಎಂದು ಕೋರಿದರು.

ಅದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಪೌರಕಾರ್ಮಿಕರಿಗೆ ಪ್ರತಿ ತಿಂಗಳು ನಿಗದಿತ ಸಮಯಕ್ಕೆ ವೇತನ ಪಾವತಿ ಮಾಡಲು ಕ್ರಮವಹಿಸುವಂತೆ ನಗರಾಭಿವೃದ್ಧಿ ಕೋಶದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗುರಿ ಸಾಧನೆಗೆ ಸೂಚನೆ: ‘ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿ (ಎಸ್ಸಿಎಸ್ಪಿ-ಟಿಎಸ್ಪಿ) ಪ್ರಸಕ್ತ ಸಾಲಿಗೆ ಕ್ರಿಯಾಯೋಜನೆ ತಯಾರಿಸಿಕೊಂಡು ನಿರ್ದಿಷ್ಟ ಕಾಲಮಿತಿಯೊಳಗೆ ಯೋಜನೆಗಳ ಗುರಿ ಸಾಧನೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಹೇಳಿದರು.

‘ವಿವಿಧ ಯೋಜನೆಯಡಿ ಮಂಜೂರಾದ ಅನುದಾನವವನ್ನು ಆಯಾ ಸಾಲಿನಲ್ಲಿ ಕಾಲಮಿತಿಯೊಳಗೆ ಖರ್ಚು ಮಾಡಬೇಕು. ಅರ್ಹರಿಗೆ ವಿವಿಧ ವಸತಿ ಯೋಜನೆಗಡಿ ವಸತಿ ಸೌಲಭ್ಯ, ಸಹಾಯಧನ-ದಲ್ಲಿ ಸಾಲ ಸೌಲಭ್ಯ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ಆದ್ಯತೆ ನೀಡಬೇಕು. ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕು’ ಎಂದರು.

ಸಮಾಜ ಕಲ್ಯಾಣ ಇಲಾಖೆ ನಿರ್ದೇಶಕ ಪ್ರಶಾಂತ ವರಗಪ್ಪನವರ ಮಾತನಾಡಿ, ‘2024ರ ಏಪ್ರಿಲ್ನಿಂದ 2025ರ ಫೆಬ್ರುವರಿಯವರೆಗೆ ಎಸ್ಸಿಎಸ್ಪಿ-ಟಿಎಸ್ಪಿ ಯೋಜನೆಯಡಿ 66.68ರಷ್ಟು ಗುರಿ ಸಾಧನೆ ಮಾಡಲಾಗಿದೆ. ಅರ್ಹರಿಗೆ ಡಾ. ಬಿ.ಆರ್.ಅಂಬೇಡ್ಕರ್, ಪಿ.ಎಂ.ಎ.ವೈ ಹಾಗೂ ಜಿ+1 ಸೇರಿದಂತೆ ವಿವಿಧ ವಸತಿ ಯೋಜನೆಗಳಡಿ ಮನೆ ಹಂಚಿಕೆ ಮಾಡಲು ಕ್ರಮ ವಹಿಸಲಾಗಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ರುಚಿ ಬಿಂದಲ್, ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ ಇದ್ದರು.

ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಮಾಡಬಾರದು
ವಿಜಯ ಮಹಾಂತೇಶ ದಾನಮ್ಮನವರ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.