ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುದ್ಧ ಮತದಾರರ ಪಟ್ಟಿ ಸಿದ್ಧತೆಗೆ ಸೂಚನೆ

ವಿವಿಧ ಮತಗಟ್ಟೆಗಳಿಗೆ ವೀಕ್ಷಕರಾದ ತ್ರಿಲೋಕಚಂದ್ರ ಭೇಟಿ
Last Updated 6 ಫೆಬ್ರುವರಿ 2020, 10:37 IST
ಅಕ್ಷರ ಗಾತ್ರ

ಹಾವೇರಿ: ಮತದಾರರ ಲಿಂಗಾನುಪಾತ ವ್ಯತ್ಯಾಸ ಸರಿಪಡಿಸಿ ಶುದ್ಧ ಪರಿಷ್ಕೃತ ಪಟ್ಟಿ ತಯಾರಿಸಿ ಅಂತಿಮಗೊಳಿಸುವಂತೆ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕ ಐಎಎಸ್‌ ಅಧಿಕಾರಿ ತ್ರಿಲೋಕಚಂದ್ರ ಅಧಿಕಾರಿಗಳಿಗೆ ಸೂಚಿಸಿದರು.

ಬ್ಯಾಡಗಿ ತಹಶೀಲ್ದಾರ್‌ ಕಚೇರಿಯಲ್ಲಿ ಮಂಗಳವಾರ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ರಾಜಕೀಯ ಮುಖಂಡರು, ಉಪ ವಿಭಾಗಾಧಿಕಾರಿ, ತಹಶೀಲ್ದಾರ್‌ರ ಸಭೆಯಲ್ಲಿ ಅವರು ಮಾತನಾಡಿದರು.

ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಸಾರ್ವಜನಿಕರಿಂದ ಸ್ವೀಕರಿಸಿದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು. ಇತರ ಕಾರಣಗಳಿಗಾಗಿ ಬಾಕಿ ಉಳಿಸಿಕೊಂಡರೆ ಅಂತಹ ಬಿಎಲ್‌ಒಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು

ಲಿಂಗಾನುಪಾತ ವ್ಯತ್ಯಯವಿರುವ ಬೂತ್‌ಗಳಿಗೆ ಖುದ್ದಾಗಿ ಭೇಟಿ ನೀಡಿ, ಪುರುಷ ಮತದಾರರಿಗಿಂತ ಮಹಿಳಾ ಮತದಾರರ ಸಂಖ್ಯೆ ಕಡಿಮೆ ನೋಂದಣಿಗೆಕಾರಣಗಳನ್ನು ಗುರುತಿಸಿ ಅರ್ಹರಾದ ಯಾವುದೇ ಮಹಿಳಾ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಕ್ರಮವಹಿಸಲು ತಹಶೀಲ್ದಾರ್‌ಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕನಿಷ್ಠ 36ರಿಂದ 40 ಸಾವಿರ ಮಹಿಳೆಯರು ಮತದಾರರಾಗಿ ನೋಂದಾಯಿಸದೇ ಇರುವುದನ್ನು ಅಂದಾಜಿಸಲಾಗಿದೆ. ಯಾವ ಕಾರಣಕ್ಕಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗದೇ ಹೊರಗುಳಿದಿದ್ದಾರೆ ಎಂಬ ಕಾರಣಗಳನ್ನು ಗುರುತಿಸಬೇಕಾಗಿದೆ. ಮಹಿಳೆಯರು ಕಡಿಮೆ ನೋಂದಣಿಯಾಗಿರುವ ಮತಗಟ್ಟೆ ವಾರುವಾಸ್ತವ ದತ್ತಾಂಶಗಳನ್ನು ಮನೆ–ಮನೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಬೇಕು ಎಂದರು.

ರಾಜಕೀಯ ಪಕ್ಷಗಳ ಮುಖಂಡರ ಸಭೆ ನಡೆಸಿದ ಅವರು, ಮತದಾರರ ಪಟ್ಟಿ ಬಗ್ಗೆ ದೂರುಗಳು ಹಾಗೂ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದು. ಜಿಲ್ಲೆಯ ಪ್ರತಿ ಮತಗಟ್ಟೆಗೂ ಬೂತ್ ಮಟ್ಟದ ಏಜೆಂಟರುಗಳನ್ನು ನೇಮಕ ಮಾಡುವಂತೆ ಪಕ್ಷದ ಮುಖಂಡರಿಗೆ ಸಲಹೆ ನೀಡಿದರು.

ಜಿಲ್ಲಾ ಮತದಾರರ ಪಟ್ಟಿ ವೀಕ್ಷಕರು ಬ್ಯಾಡಗಿ ತಾಲ್ಲೂಕಿನ ಮೊಟೇಬೆನ್ನೂರು ಹಾಗೂ ಹಿರೇಕೆರೂರ ತಾಲ್ಲೂಕಿನ ಲಿಂಗಾಪುರ ಗ್ರಾಮಗಳ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ, ಉಪವಿಭಾಗಾಧಿಕಾರಿಗಳಾದ ಎನ್‌.ತಿಪ್ಪೇಸ್ವಾಮಿ, ಅನ್ನಪೂರ್ಣ ಮುದಕಮ್ಮನವರ, ಚುನಾವಣಾ ತಹಶೀಲ್ದಾರ ಪ್ರಶಾಂತ ನಾಲವಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT