ಹಾವೇರಿ: ‘ಜಿಲ್ಲೆಯಲ್ಲಿ ಪ್ರಸಕ್ತ ವರ್ಷದ ಜನವರಿಯಿಂದ ಮಾರ್ಚ್ ಅಂತ್ಯದವರೆಗೆ ಆರು ಡೆಂಗಿ ಹಾಗೂ ಮೂರು ಚಿಕೂನ್ ಗುನ್ಯಾ ಪ್ರಕರಣಗಳು ಪತ್ತೆಯಾಗಿವೆ’ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಜಗದೀಶ ಪಾಟೀಲ ಹೇಳಿದರು.

ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ‘ಅಂತರ್ ಇಲಾಖೆಗಳ ಸಮನ್ವಯ ಸಮಿತಿ ಸಭೆ’ಯಲ್ಲಿ ಪಾಲ್ಗೊಂಡಿದ್ದ ಅವರು, ಅಂಕಿ–ಅಂಶಗಳ ಸಮೇತ ರೋಗಗಳ ಮಾಹಿತಿ ನೀಡಿದರು.

‘ಈಡೀಸ್ ಈಜಿಪ್ತಿ ಸೊಳ್ಳೆಯು ಡೆಂಗಿ ಬರಲು ಕಾರಣ. ಈ ಸೊಳ್ಳೆ ಹಗಲು ಹೊತ್ತು ಕಚ್ಚುವುದರಿಂದ ಡೆಂಗಿ ಜ್ವರ ಬರುತ್ತದೆ. ಇದು ಸಂಗ್ರಹಿಸಿದ ಸ್ವಚ್ಛ ನೀರಿನಲ್ಲಿ ಉತ್ಪತ್ತಿಯಾಗುತ್ತದೆ. ಹೀಗಾಗಿ, ಸಾರ್ವಜನಿಕ ಸ್ಥಳಗಳು, ಕಚೇರಿ ಹಾಗೂ ಮನೆ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಮನೆಗಳಲ್ಲಿ ಡ್ರಮ್ಮು, ಬ್ಯಾರಲ್, ಸಿಮೆಂಟ್ ತೊಟ್ಟಿ, ಕಲ್ಲುಬಾನಿ, ಟೈಯರ್, ತೆಂಗಿನ ಚಿಪ್ಪು ಹಾಗೂ ಇತರೆ ಘನ ತ್ಯಾಜ್ಯ ವಸ್ತುಗಳಲ್ಲಿ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು’ ಎಂದರು.

‘ಕೆರೆ, ಹೊಂಡ, ಬಾವಿ, ಹಳ್ಳ ಮುಂತಾದ ನೀರಿನ ಮೂಲಗಳಿಗೆ ಡೆಂಗಿ ಲಾರ್ವಾಹಾರಿ ಗಪ್ಪಿ ಮತ್ತು ಗಂಬೂಸಿಯಾ ಮೀನುಗಳನ್ನು ಬಿಡಲಾಗುತ್ತಿದೆ. ಹೊಲ, ಗದ್ದೆ, ಕಟ್ಟಡ ನಿರ್ಮಾಣ ಪ್ರದೇಶ ಮತ್ತು ಇತರೆ ಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವವರಿಗೆ, ಅಂಗನವಾಡಿ–ಶಾಲೆಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಅಗತ್ಯ ಆರೋಗ್ಯ ಜಾಗೃತಿ ಮೂಡಿಸಲಾಗುತ್ತಿದೆ’ ಎಂದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಮಾತನಾಡಿ, ‘ನಿಂತ ನೀರಿನಲ್ಲಿ ಈಡೀಸ್ ಈಜಿಪ್ತಿ ಸೊಳ್ಳೆ ಉತ್ಪಾದನೆಯಿಂದ, ಡೆಂಗಿ ಸಾಧ್ಯತೆ ಹೆಚ್ಚು. ಅದರ ತಡೆಗೆ ಮುಂಜಾಗ್ರತಾ ಕ್ರಮಗಳ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಡೆಂಗಿ ನಿಂಯತ್ರಣಕ್ಕೆ ಆರೋಗ್ಯ ಇಲಾಖೆ ಜೊತೆಗೆ ಎಲ್ಲ ಇಲಾಖೆಗಳು ಸಮನ್ವಯದಿಂದ ಸಹಕಾರ ನೀಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳು, ಘನತ್ಯಾಜ್ಯ ವಸ್ತುಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಗಟಾರಗಳಲ್ಲಿ ನೀರು ಸರಿಯಾಗಿ ಹರಿದು ಹೋಗುವಂತೆ ಮಾಡಬೇಕು’ ಎಂದರು.

‘ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಚಾವಣಿ, ಕಲ್ಲು ಗಣಿಗಾರಿಕೆ ಮತ್ತು ಕೃಷಿ ಹೊಂಡಗಳಲ್ಲಿ, ಬಸ್ ಡಿಪೊಗಳಲ್ಲಿರುವ ಟಯರ್ಗಳಲ್ಲಿ ನೀರು ನಿಂತು ಅಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುತ್ತವೆ. ಆರೋಗ್ಯ ಇಲಾಖೆಯೊಂದಿಗೆ ಸಾರಿಗೆ ಇಲಾಖೆ, ಕೃಷಿ, ತೋಟಗಾರಿಕೆ, ಪಶು ಸಂಗೋಪನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೀನುಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಕೈಜೋಡಿಸಬೇಕು. ಎಲ್ಲರೂ ಸೇರಿ ಜಿಲ್ಲೆಯನ್ನು ಡೆಂಗಿ ಮುಕ್ತ ಮಾಡಬೇಕು’ ಎಂದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಜಯಾನಂದ, ಡಾ. ಚನ್ನಬಸಯ್ಯ ವಿರಕ್ತಮಠ, ಡಾ. ಸರಿತಾ, ಡಾ. ನೀಲೇಶ ಹಾಗೂ ಇತರರು ಇದ್ದರು.

‘ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡಿ’

ಹಾವೇರಿ: ‘ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಸಾರ್ವಜನಿಕರಿಗೆ, ಉತ್ತಮ ಆರೋಗ್ಯ ಸೇವೆ ನೀಡಬೇಕು. ಸ್ಥಳೀಯ ಮಟ್ಟದಲ್ಲೇ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಸಿಗುವಂತಾಗಬೇಕು’ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರು ತಾಲ್ಲೂಕು ಆರೋಗ್ಯಾಧಿಕಾರಿ ಹಾಗೂ ವೈದ್ಯರಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ‘ಜಿಲ್ಲಾ ಆರೋಗ್ಯ ಅಭಿಯಾನದ ಪ್ರಗತಿ ಪರಿಶೀಲನಾ ಸಭೆ’ ಹಾಗೂ ‘ಜಿಲ್ಲಾ ಕಣ್ಗಾವಲು ಸಮಿತಿ ಸಭೆ’ಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಗರ್ಭಿಣಿಯರು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕು’ ಎಂದರು.

‘ಗರ್ಭಿಣಿಯರು ಹಾಗೂ ಬಾಣಂತಿಯರ ಮಾಹಿತಿಯನ್ನು ವಿಳಂಬ ಮಾಡದೇ ಪೋರ್ಟಲ್ನಲ್ಲಿ ನೋಂದಣಿ ಮಾಡಬೇಕು. ಗಂಭೀರ ಸಮಸ್ಯೆ ಇರುವ ಗರ್ಭಿಣಿಯರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ತೀವ್ರ ಸಮಸ್ಯೆ ಇದ್ದರೆ ಆಸ್ಪತ್ರೆಯಲ್ಲಿ ಒಳರೋಗಿ ವಿಭಾಗಕ್ಕೆ ದಾಖಲಿಸಿಕೊಂಡು ಚಿಕಿತ್ಸೆ ನೀಡಬೇಕು’ ಎಂದು ಹೇಳಿದರು.

‘ತಾಲ್ಲೂಕು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿರುವ ಸಣ್ಣಪುಟ್ಟ ಸಮಸ್ಯೆಗಳನ್ನು ತಮ್ಮ ಹಂತದಲ್ಲೇ ಬಗೆಹರಿಸಿಕೊಳ್ಳಬೇಕು. ತಂತ್ರಜ್ಞಾನ ಬಹಳ ಬೆಳೆದಿದೆ. ಅಸಾಧ್ಯವಾಗದ ಕೆಲಸ ಯಾವುದೂ ಇಲ್ಲ. ಕೆಲಸ ಮಾಡುವ ಮನಸ್ಸು ಬೇಕು. ಕಾರಣ ಹೇಳುವುದನ್ನು ಬಿಟ್ಟು, ಕೆಲಸ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದರು.

‘ಕುಟುಂಬ ಕಲ್ಯಾಣ ಯೋಜನೆಯಡಿ ಪುರುಷರು ಹಾಗೂ ಮಹಿಳೆಯರ ಶಸ್ತ್ರಚಿಕಿತ್ಸೆಯಲ್ಲಿ ಶೇ 100ರಷ್ಟು ಸಾಧನೆ ಮಾಡಬೇಕು. ಸಾಧ್ಯವಿರುವ ಕಡೆಗಳಲ್ಲಿ ಶಿಬಿರ ಮಾಡಬೇಕು. ಜನರಲ್ಲಿ ತಿಳಿವಳಿಕೆ ಮೂಡಿಸಬೇಕು’ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ಹೇಳಿದರು.

‘ಗ್ರಾಮೀಣ ಭಾಗದಲ್ಲಿ ಹಾವು ಹಾಗೂ ನಾಯಿ ಕಡಿತ ಪ್ರಕರಣಗಳು ಕಂಡುಬರುತ್ತಿದೆ. ಇಂಥ ಸಂದರ್ಭದಲ್ಲಿ ವಿಳಂಬ ಮಾಡದೇ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಂತೆ ಜನರಲ್ಲಿ ತಿಳಿವಳಿಕೆ ಮೂಡಿಸಬೇಕು. ಆಶಾ ಕಾರ್ಯಕರ್ತರು ಹಾಗೂ ಆರೋಗ್ಯ ಸಹಾಯಕರು, ಹೆಚ್ಚಿನ ಕಾಳಜಿ ವಹಿಸಿ ಕೆಲಸ ಮಾಡಬೇಕು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಜಯಾನಂದ ಮಾತನಾಡಿ, ‘ಸರ್ಕಾರಿ ಆಸ್ಪತ್ರೆಗಳಲ್ಲಿ ಶೇ 75ರಷ್ಟು ಹಾಗೂ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಶೇ. 25ರಷ್ಟು ಹೆರಿಗೆಗಳು ಆಗುತ್ತಿವೆ’ ಎಂದು ಮಾಹಿತಿ ನೀಡಿದರು.

ಡಾ. ಚನ್ನಬಸಯ್ಯ ವಿರಕ್ತಮಠ, ಡಾ. ಸರಿತಾ, ಡಾ. ಜಗದೀಶ ಪಾಟೀಲ, ಡಾ. ನೀಲೇಶ ಹಾಗೂ ಇತರರು ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.