ಹಾವೇರಿ: ‘ನಿಂತ ನೀರಿನಲ್ಲಿ ಹುಟ್ಟುವ ಸೊಳ್ಳೆಗಳಿಂದ ಡೆಂಗಿ ಬರುತ್ತಿದೆ. ಜನರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ, ಡೆಂಗಿ ನಿಯಂತ್ರಣ ಸಾಧ್ಯ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ ಹೇಳಿದರು.

ತಾಲ್ಲೂಕಿನ ಗುತ್ತಲದ ಆರ್.ಕೆ. ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ರಾಷ್ಟ್ರೀಯ ಡೆಂಗಿ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಸಮುದಾಯ ಮಟ್ಟದಲ್ಲಿ ಡೆಂಗಿ ಜ್ವರ ನಿಯಂತ್ರಣ ಹಾಗೂ ಸಾಂಕ್ರಾಮಿಕ ರೋಗಗಳ ತಡೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅಗತ್ಯವಾಗಿದೆ. ಸಾರ್ವಜನಿಕರಲ್ಲಿ ಅರಿವು ಮೂಡಿಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ’ ಎಂದರು.

‘ಸೊಳ್ಳೆಗಳ ಜೀವನ ಚಕ್ರ, ಸೊಳ್ಳೆಗಳ ಉತ್ಪತ್ತಿ ತಾಣಗಳ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಂಡು, ಜನರಲ್ಲಿ ಜಾಗೃತಿ ಮೂಡಿಸಬೇಕು. ಸೊಳ್ಳೆಗಳ ನಿಯಂತ್ರಣ, ಸೊಳ್ಳೆಗಳಿಂದ ಹರಡುವ (ಕೀಟ ಜನ್ಯ ರೋಗಗಳು) ರೋಗಗಳಾದ ಮಲೇರಿಯಾ, ಡೆಂಗಿ, ಚಿಕ್ಯೂನ್ ಗುನ್ಯಾ, ಆನೇಕಾಲು ರೋಗ, ಮೆದುಳು ಜ್ವರದ ಬಗ್ಗೆ ಜಾಗೃತಿ ವಹಿಸಬೇಕು’ ಎಂದರು.

‘ಸಾರ್ವಜನಿಕರು ತಮ್ಮ ಮನೆಗಳಲ್ಲಿ ನೀರಿನ ಸಂಗ್ರಹಣೆ ಮಾಡುವುದು ಸಾಮಾನ್ಯವಾಗಿದೆ. ನೀರಿನಲ್ಲಿ ಸ್ವಲ್ಪ ದಿನಗಳ ನಂತರ ಲಾರ್ವ ಹುಳುಗಳು ಜನಿಸಿ ಸೊಳ್ಳೆಗಳಾಗಿರುವುದರಿಂದ, ಕೀಟ ಜನ್ಯ ರೋಗಗಳು ಹರಡುವ ಸಾಧ್ಯತೆ ಇರುತ್ತದೆ. ಗ್ರಾಮಗಳಲ್ಲಿ ನೀರಿನ ಸಂಗ್ರಹಣಾ ತೊಟ್ಟಿಗಳನ್ನು ಶುಚಿಗೊಳಿಸಿ, ಒಣಗಿಸಿದ ನಂತರ ನೀರು ಸಂಗ್ರಹಿಸಬೇಕು. ಮನೆಗಳಲ್ಲಿ ಸೊಳ್ಳೆ ಪರದೆ ಬಳಸಬೇಕು. ಮೈತುಂಬ ಬಟ್ಟೆ ಹಾಕಬೇಕು. ರೋಗದ ಲಕ್ಷಣ ಕಂಡುಬಂದಲ್ಲಿ ತಕ್ಷಣ ಸಮೀಪದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು’ ಎಂದು ಹೇಳಿದರು.

ಪ್ರಾಂಶುಪಾಲ ಅನಿಲಕುಮಾರ ಹೊಸಮನಿ, ಕಾಲೇಜು ವ್ಯವಸ್ಥಾಪಕ ಕರಾರೆ ನಾಯ್ಕ, ಉಷಾರಾಣಿ, ಪ್ರಭಾರ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣಪ್ಪ ಕನ್ನಮ್ಮನವರ, ಶಕುಂತಲಾ ಸಿ., ಮಂಜುಳಾ ಇಟಗಿ, ರೇಖಾ ಚಿಂದಿ, ಆರೋಗ್ಯ ನಿರೀಕ್ಷಣಾಧಿಕಾರಿ ಮಾಲತೇಶ ಪುಟ್ಟನಗೌಡರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-22-1293011408

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.