ಬ್ಯಾಡಗಿ: ಪಟ್ಟಣದ ವರ್ತಕರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಾವೇರಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಮ್ಮೇಳನ, ಜಿಲ್ಲಾ ಘಟಕದ ಸುವರ್ಣ ಮಹೋತ್ಸವ ಮತ್ತು ಬ್ಯಾಡಗಿ ತಾಲ್ಲೂಕು ಘಟಕದ ಕಾರ್ಯಾಲಯದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಸೆ.13ರಂದು ಬೆಳಿಗ್ಗೆ 11 ಗಂಟೆಗೆ ಜರುಗಲಿದೆ.
ಈ ಕುರಿತು ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಿವಾನಂದ ಮಲ್ಲನಗೌಡ್ರ ಬುಧವಾರ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಮುಖ್ಯಮಂತ್ರಿ ಮಾದ್ಯಮ ಸಲಹೆಗಾರ ಕೆ.ವಿ.ಪ್ರಭಾಕರ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು ನೂತನ ಕಾರ್ಯಾಲಯ ಉದ್ಘಾಟಿಸುವರು. ಸಂಸದ ಬಸವರಾಜ ಬೊಮ್ಮಾಯಿ, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ಪುರಸಭೆ ಅಧ್ಯಕ್ಷ ಬಾಲಚಂದ್ರ ಪಾಟೀಲ, ಉಪಾಧ್ಯಕ್ಷ ಸುಭಾಸ ಮಾಳಗಿ, ಮಾಜಿ ಶಾಸಕರಾದ ಸುರೇಶಗೌಡ್ರ ಪಾಟೀಲ, ವಿರೂಪಾಕ್ಷಪ್ಪ ಬಳ್ಳಾರಿ, ನೆಹರು ಓಲೇಕಾರ, ಜಿಲ್ಲಾಧಿಕಾರಿ ವಿಜಯಕುಮಾರ ದಾನಮ್ಮನವರ, ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ, ಕಾನಿಪ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಕಾರ್ಯದರ್ಶಿ ನಿಂಗಪ್ಪ ಚಾವಡಿ, ಸದಸ್ಯ ಪರಶುರಾಮ ಸತ್ಯಪ್ಪನವರ, ಜಿಲ್ಲಾ ಘಟಕದ ಕಾರ್ಯದರ್ಶಿ ವೀರೇಶ ಮಡ್ಲೂರು ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ತಹಶೀಲ್ದಾರ್ ಫೀರೋಜ್‌ಷಾ ಸೋಮನಕಟ್ಟಿ, ತಾ.ಪಂ. ಇಒ ಕೆ.ಎಂ.ಮಲ್ಲಿಕಾರ್ಜುನ, ಸಿಪಿಐ ಮಹಾಂತೇಶ ಲಂಬಿ, ಪುರಸಭೆ ಮುಖ್ಯಾಧಿಕಾರಿ ವಿನಯಕುಮಾರ ಹೊಳೆಯಪ್ಪಗೋಳ, ಸದಸ್ಯ ಬಸವರಾಜ ಛತ್ರದ, ಸಾಹಿತಿ ಸಂಕಮ್ಮ ಸಂಕಣ್ಣನವರ, ಮುಖಂಡರಾದ ಗಂಗಣ್ಣ ಎಲಿ, ಚಿಕ್ಕಪ್ಪ ಛತ್ರದ, ದಾನಪ್ಪ ಚೂರಿ, ಶಿವಯೋಗಿ ಶಿರೂರು, ಶಂಕರ ಬಾರ್ಕಿ,ಪ್ರಕಾಶ ಬನ್ನಿಹಟ್ಟಿ, ನಾಗರಾಜ ಆನ್ವೇರಿ ಪಾಲ್ಗೊಳ್ಳುವರು ಅಧ್ಯಕ್ಷತೆಯನ್ನು ಕಾನಿಪ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಕುರುವತ್ತೇರ ವಹಿಸುವರು.
ಹಿರಿಯ ಪತ್ರಕರ್ತ ಪ್ರಕಾಶ ಜೋಶಿ, ರಾಜು ನದಾಫ್ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಜಮೀರ ರಿತ್ತಿ ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.