ಸವಣೂರು: ಪಟ್ಟಣದಲ್ಲಿ ಜರುಗುತ್ತಿರುವ ಹಾವೇರಿ ಜಿಲ್ಲಾ 15ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಸವಣೂರು ತಾಲ್ಲೂಕಿನ ಗುಂಡೂರು ಗ್ರಾಮದ ನಿವಾಸಿ, ಬೆಳಗಾವಿ ಅಂಜುಮನ್ ಪದವಿ ಮಹಾವಿದ್ಯಾಲಯ ನಿವೃತ್ತ ಪ್ರಾಚಾರ್ಯ ಹಜರೆಸಾಬ್ ಐ ತಿಮ್ಮಾಪುರ ಅವರನ್ನು ಆಯ್ಕೆಗೊಳಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಅಧ್ಯಕ್ಷ ಲಿಂಗಯ್ಯ ಹಿರೇಮಠ ಅವರನ್ನು ಘೋಷಣೆ ಮಾಡಿದರು.

ಜ. 10. ಮತ್ತು 11 ರಂದು ಜರುಗಬೇಕಿದ್ದ 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕಾರಣಾಂತರಗಳಿಂದ ಜ. 24 ಮತ್ತು 25ಕ್ಕೆ ಮುಂದುಡಲಾಗಿದೆ ಎಂದು ಕಸಾಪ ಜಿಲ್ಲಾ ಘಟಕ ಅಧ್ಯಕ್ಷ ಲಿಂಗಯ್ಯ ಹಿರೇಮಠ ಹೇಳಿದರು.

ಪಟ್ಟಣದ ಪದ್ಮಶ್ರೀ ವಿ.ಕೃ.ಗೋಕಾಕ ಸಾಂಸ್ಕøತಿಕ ಭವನದಲ್ಲಿ ಶನಿವಾರ ಜರುಗಿದ 15ನೇ ಕಸಾಪ ಜಿಲ್ಲಾ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತಾಡಿದರು.
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಅರ್ಥಪೂರ್ಣವಾಗಿ ಜರುಗಬೇಕು. ಕನ್ನಡಾಭಿಮಾನಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಬೇಕು. ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಕನ್ನಡದ ತೇರನ್ನು ಸವಣೂರು ನಗರದಲ್ಲಿ ಎಳೆಯಬೇಕು ಎನ್ನುವ ಉದ್ದೇಶದಿಂದ ವಿದ್ಯಾರ್ಥಿಗಳ ಪೂರ್ವಸಿದ್ದತಾ ಪರೀಕ್ಷೆ ಇರುವದರಿಂದ ಸಮ್ಮೇಳನದ ದಿನಾಂಕವನ್ನು ಬದಲಾಯಿಸಲಾಗಿದೆ. ಅದೇ ರೀತಿ, ಮಜೀದ ಪದವಿಪೂರ್ವ ಕಾಲೇಜು ಆವರಣದಲ್ಲಿ ಸಮ್ಮೇಳನ ಆಯೋಜನೆಗೆ ಸ್ಥಳ ನಿಗದಿಪಡಿಸಲಾಗಿತ್ತು. ಆದರೆ, ನಿರಂತರವಾಗಿ ವಿದ್ಯಾರ್ಥಿಗಳ ಪರೀಕ್ಷೆ ಬಂದಿರುವದರಿಂದ ಅಲ್ಲಿ ಜರುಗಬೇಕಿದ್ದ ಸಮ್ಮೇಳನವನ್ನು ಪಟ್ಟಣದ ಸುಪ್ರಸಿದ್ಧ ದೊಡ್ಡಹುಣಸೇ ಕಲ್ಮಠದ ಕಲ್ಯಾಣ ಮಂಟಪದಲ್ಲಿ ಸಮಾರಂಭ, ವಾಹನ ನಿಲುಗಡೆಗೆ ಸೇರಿದಂತೆ ಅಂಗಡಿ ಮುಗ್ಗಟ್ಟುಗಳನ್ನು ಹಾಕುವಂತ ವ್ಯಾಪಾರಸ್ಥರಿಗೆ ಮತ್ತು ವಸ್ತು ಪ್ರದರ್ಶನಕ್ಕೆ ತಾಲ್ಲೂಕು ಕ್ರೀಡಾಂಗಣವನ್ನು ಗುರುತಿಸಲಾಗಿದೆ. 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆ ಪಟ್ಟಣದ ಭರಮಲಿಂಗೇಶ್ವರ ವೃತ್ತದಿಂದ ಪ್ರಾರಂಭಗೊಂಡು ಪಟ್ಟಣದ ರಾಜ ಬೀದಿಯಲ್ಲಿ ಸಂಚರಿಸಿ ಸಮ್ಮೇಳನ ಸ್ಥಳಕ್ಕೆ ಸಂಪನ್ನಗೊಳ್ಳಲಿದೆ. ಮೆರವಣಿಗೆಯಲ್ಲಿ ಡೊಳ್ಳು, ಜಾಂಜಮೇಳ, ಕೋಲಾಟ, ನೃತ್ಯ, ಗೊಂಬೆಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳು ಪ್ರದರ್ಶನ ನೀಡಿ ಮೆರವಣಿಗೆಗೆ ಮೆರಗು ನೀಡಲಿವೆ ಎಂದರು.

ಕಸಾಪ ತಾಲ್ಲೂಕು ಘಟಕ ಅಧ್ಯಕ್ಷ ಸಿ.ಎನ್.ಪಾಟೀಲ ಮಾತನಾಡಿ, 15ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಪುಸ್ತಕ ಮಾರಾಟ ಮಳಿಗೆ, ವಸ್ತು ಪ್ರದರ್ಶನ, ಸ್ವದೇಶಿ ಉಡುಗೆ, ದಿನಸಿ ಅಂಗಡಿ ಮುಗ್ಗಟ್ಟುಗಳನ್ನು ಹಾಕುವಂತ ವ್ಯಾಪಾರಸ್ಥರಿಗೆ ಸ್ಥಳಾವಕಾಶವನ್ನು ಕಲ್ಪಿಸಲಾಗಿದೆ. ಆದ್ದರಿಂದ, ವ್ಯಾಪಾರಸ್ಥರು ಮುಂಗಡವಾಗಿ ತಮ್ಮ ಹೆಸರನ್ನು ಕಸಾಪ ತಾಲ್ಲೂಕು ಘಟಕದಲ್ಲಿ ನೊಂದಣಿ ಮಾಡಿಕೊಳ್ಳಬೇಕು ಎಂದರು.

ಕಸಾಪ ಜಿಲ್ಲಾ ಕಾರ್ಯದರ್ಶಿ ಪ್ರಭು ಅರಗೋಳ, ಜಿಲ್ಲಾ ಕೋಶಾಧ್ಯಕ್ಷ ಎಸ್.ಎನ್.ದೊಡ್ಡಗೌಡ್ರ, ಹಾವೇರಿ ತಾಲ್ಲೂಕು ಕಸಾಪ ಅಧ್ಯಕ್ಷ ವಾಯ್.ಬಿ.ಆಲದಕಟ್ಟಿ, ಬ್ಯಾಡಗಿ ತಾಲ್ಲೂಕು ಕಸಾಪ ಅಧ್ಯಕ್ಷ ಬಿ.ಎಂ.ಜಗಾಪುರ, ಮಲ್ಲಾರಪ್ಪ ತಳ್ಳಿಹಳ್ಳಿ, ಗಂಗಾಧರ ಬಾಣದ, ಹಿರಿಯ ಪತ್ರಕರ್ತ ಜಯತೀರ್ಥ ದೇಶಪಾಂಡೆ, ವಿ.ಎಸ್.ಹಾವಣಗಿ, ಹರೀಶಗೌಡ ಪಾಟೀಲ, ಪರಶುರಾಮ ಈಳಗೇರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.