ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಾವೇರಿ | ವೃದ್ಧ ಸಾವು: ಇಲಿ ಜ್ವರ ಶಂಕೆ

Published 8 ಜುಲೈ 2024, 11:36 IST
Last Updated 8 ಜುಲೈ 2024, 11:36 IST
ಅಕ್ಷರ ಗಾತ್ರ

ಹಾವೇರಿ: ಹಾನಗಲ್ ತಾಲ್ಲೂಕಿನ ಅರಳೇಶ್ವರ ಗ್ರಾಮದ ಉಮೇಶ್ (72) ಎಂಬುವವರು ಮಂಗಳೂರಿನ ಆಸ್ಪತ್ರೆಯಲ್ಲಿ ಅಸುನೀಗಿದ್ದು, ಇವರು ಇಲಿ ಜ್ವರದಿಂದ ಬಳಲುತ್ತಿದ್ದರೆಂಬ ಶಂಕೆ ವ್ಯಕ್ತವಾಗಿದೆ.

ಉಮೇಶ್ ಅವರು ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಹಲವು ವೈದ್ಯರ ಬಳಿ ಚಿಕಿತ್ಸೆ ಪಡೆದುಕೊಂಡಿದ್ದರು. ಇತ್ತೀಚಿಗೆ ಆರೋಗ್ಯದಲ್ಲಿ ಏರುಪೇರು ಕಂಡುಬಂದಿತ್ತು. ಹೀಗಾಗಿ, ಅವರನ್ನು ಕುಟುಂಬಸ್ಥರು ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಉಮೇಶ್ ಮೃತಪಟ್ಟಿದ್ದಾರೆ.

ಸಾವಿನ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (ಪ್ರಭಾರಿ) ಡಾ. ಜಯಾನಂದ, ‘ಉಮೇಶ್ ಅವರು ಇಲಿ ಜ್ವರದಿಂದ ಬಳಲುತ್ತಿದ್ದ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಮಂಗಳೂರು ಆಸ್ಪತ್ರೆಯವರಿಂದ ಮಾಹಿತಿ ಪಡೆಯಲಾಗುತ್ತಿದೆ’ ಎಂದರು.

‘ಉಮೇಶ್ ಅವರು ಹಲವು ವರ್ಷಗಳಿಂದ ನಾನಾ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಅವರ ಕುಟುಂಬಸ್ಥರಿಂದಲೂ ಮಾಹಿತಿ ಪಡೆಯಲಾಗಿದೆ. ತಾಲ್ಲೂಕು ಆರೋಗ್ಯಾಧಿಕಾರಿಯಿಂದಲೂ ಪರಿಶೀಲನೆ ನಡೆಸಲಾಗಿದೆ. ಇದೊಂದು ಇಲಿ ಜ್ವರದ ಪ್ರಕರಣವಲ್ಲ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಸಾವಿಗೆ ನಿಖರ ಕಾರಣವೇನು ಎಂಬುದು ಮಂಗಳೂರು ಆಸ್ಪತ್ರೆ ವರದಿಯಿಂದ ತಿಳಿಯಬೇಕಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT