ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಾವೇರಿ | ಚುನಾವಣೆ ತಯಾರಿ ಶುರು: ಮತಯಂತ್ರದ ಪರಿಶೀಲನೆ

Published 4 ಜುಲೈ 2024, 16:24 IST
Last Updated 4 ಜುಲೈ 2024, 16:24 IST
ಅಕ್ಷರ ಗಾತ್ರ

ಹಾವೇರಿ: ನೂತನ ಸಂಸದ ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾವಿ–ಸವಣೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಆಯೋಗ ತಯಾರಿ ಶುರು ಮಾಡಿದ್ದು, ಮೊದಲ ಹಂತವಾಗಿ ಜುಲೈ 5ರಂದು ವಿದ್ಯುನ್ಮಾನ ಮತಯಂತ್ರಗಳ ಪ್ರಥಮ ಹಂತದ ಪರಿಶೀಲನಾ ಪ್ರಕ್ರಿಯೆ ಜರುಗಲಿದೆ.

‘ಚುನಾವಣಾ ಆಯೋಗದ ನಿರ್ದೇಶನದಂತೆ ಜುಲೈ 8ರಿಂದ 10ರವರೆಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಪ್ರಥಮ ಹಂತದ ಪರಿಶೀಲನಾ ಕಾರ್ಯ ನಡೆಯಲಿದೆ. ಎಲ್ಲ ರಾಜಕೀಯ ಪಕ್ಷದವರು ಗುರುತಿನ ಚೀಟಿ ಸಮೇತ ಕಡ್ಡಾಯವಾಗಿ ಹಾಜರಿರಬೇಕು’ ಎಂದು ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ರಘುನಂದಮೂರ್ತಿ ಕೋರಿದ್ದಾರೆ.

‘ಪರಿಶೀಲನಾ ಕಾರ್ಯಕ್ಕೆ ಬರುವ ರಾಜಕೀಯ ಪಕ್ಷದವರು ಪಕ್ಷದ ವತಿಯಿಂದ ನೀಡಲಾದ ಯಾವುದಾದರೂ ಒಂದು ಗುರುತಿನ ಚೀಟಿ, ಆಧಾರ, ಚುನಾವಣಾ ಗುರುತಿನ ಚೀಟಿ ಹಾಗೂ 2 ಪಾಸ್‌ಪೋರ್ಟ್‌ ಅಳತೆ ಭಾವಚಿತ್ರ ಹಾಜರುಪಡಿಸಬೇಕು’ ಎಂದು ತಿಳಿಸಿದ್ದಾರೆ.

‘ಪರಿಶೀಲನಾ ಕಾರ್ಯಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜುಲೈ 5ರಂದು ರಾಷ್ಟ್ರೀಯ ಪಕ್ಷದ ಜಿಲ್ಲಾಧ್ಯಕ್ಷರು, ಕಾರ್ಯದರ್ಶಿಗಳ ಸಭೆ ನಡೆಯಲಿದೆ’ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT