ಹಾವೇರಿ: ‘ಪರಿಸರ ಸಂರಕ್ಷಣೆಯು ನಮ್ಮೆಲ್ಲರ ಮೂಲಭೂತ ಕರ್ತವ್ಯವಾಗಿದೆ. ಪರಿಸರ ರಕ್ಷಣೆಗಾಗಿ ಕೇವಲ ದಿನಾಚರಣೆ ಮಾಡಿದರೆ ಪ್ರಯೋಜನವಿಲ್ಲ. ಸಾಮಾಜಿಕವಾಗಿ ಸಂಘಟಿತ ಹೋರಾಟ ಮಾಡುವುದರ ಮೂಲಕ ಸುಂದರ ಪರಿಸರವನ್ನು ಸಂರಕ್ಷಣೆ ಮಾಡಬೇಕಿದೆ’ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿರಾದಾರ ದೇವಿಂದ್ರಪ್ಪಾ ಎನ್. ಅವರು ಹೇಳಿದರು.

ಪ್ರಾದೇಶಿಕ ಅರಣ್ಯ ವಿಭಾಗದ ಕಚೇರಿ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಅಂತರರಾಷ್ಟ್ರೀಯ ಭೂ ದಿನ–2026’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಮೂಲಭೂತ ಹಕ್ಕುಗಳಿಗಾಗಿ ಹೋರಾ ಡುವ ನಾವು, ಈ ಭೂಮಿಯನ್ನು ಸಂರಕ್ಷಿಸುವುದನ್ನು ಮರೆತು ಬಿಟ್ಟಿದ್ದೇವೆ. ವಿನಾಶದತ್ತ ಸಾಗುತ್ತಿರುವ ಮನುಕುಲ ಉಳಿಸಲು ಈಗಲಾದರೂ ಎಚ್ಚೆತ್ತುಕೊಳ್ಳಬೇಕಿದೆ’ ಎಂದರು.

‘ಜಾಗತಿಕ ತಾಪಮಾನ, ಅರಣ್ಯ ನಾಶ ಹಾಗೂ ಮಾಲಿನ್ಯದಂತಹ ಸವಾಲುಗಳನ್ನು ಮೆಟ್ಟಿನಿಲ್ಲಬೇಕಿದೆ. ಭವಿಷ್ಯದ ಪೀಳಿಗೆಗಾಗಿ ಭೂಮಿಯನ್ನು ಉಳಿಸಲು ತುರ್ತು ಕ್ರಮಗಳ ಅಗತ್ಯವಿದೆ’ ಎಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್.ಸಿ. ಸಿದ್ದನಗೌಡ್ರ ಮಾತನಾಡಿ, ‘ಮಾನವನ ದುರಾಸೆಗಳೇ ಇಂದಿನ ಪರಿಸರ ದುರಂತಗಳಿಗೆ ಬೀಜಗಳಾಗಿವೆ. ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಜೀವಿತಾವಧಿಯಲ್ಲಿ ಕನಿಷ್ಠ ಕೆಲವು ಸಸಿಗಳನ್ನಾದರೂ ನೆಟ್ಟು ಪೋಷಿಸಬೇಕು. ಈ ಮೂಲಕ ಭೂತಾಯಿಯ ಋಣ ತೀರಿಸಬೇಕು’ ಎಂದರು.

ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ಕರ್ ಅಕ್ಷಯ ಅಶೋಕ ಮಾತನಾಡಿ, ‘ನಮಗೆ ಇರುವುದೊಂದೇ ಭೂಮಿ. ಇದನ್ನು ಪಾಲನೆ ಪೋಷಣೆ ಮಾಡಿ, ಸುಂದರ ನಾಳೆಗಾಗಿ ಹಸಿರಾಗಿಸಬೇಕು. ಈ ಸುಂದರ ಪರಿಸರವನ್ನು ನಮ್ಮ ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಬೇಕು. ಜಿಲ್ಲೆಯ ಪ್ರತಿಯೊಂದು ಶಾಲೆ ಹಾಗೂ ಕಾಲೇಜಿನ ವಿದ್ಯಾರ್ಥಿಗಳು, ತಾವು ಸೇವಿಸುವ ಹಣ್ಣುಗಳ ಬೀಜಗಳನ್ನು ಸಂಗ್ರಹಿಸಿ ಅರಣ್ಯ ಇಲಾಖೆಗೆ ನೀಡುವುದರ ಮೂಲಕ ಹಸಿರು ವೃದ್ಧಿಗೆ ಸಹಕರಿಸಬೇಕು’ ಎಂದರು.

ನ್ಯಾಯಾಧೀಶರಾದ ಶ್ರೀಶೈಲಜಾ ಎಚ್.ವಿ., ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎಚ್. ಮಂಜುನಾಥ, ವಲಯ ಅರಣ್ಯ ಅಧಿಕಾರಿ ಸಿದ್ದಮ್ಮ ಕರಿಗಾರ, ಗಸ್ತು ಅರಣ್ಯ ಪಾಲಕ ಬಸವರಾಜ ಕುಲಕರ್ಣಿ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-22-1534913002

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.