ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಿರೇಕೆರೂರು | ಸಾಲ ಬಾಧೆ: ರೈತ ಆತ್ಮಹತ್ಯೆ

Published 12 ಜೂನ್ 2024, 14:20 IST
Last Updated 12 ಜೂನ್ 2024, 14:20 IST
ಅಕ್ಷರ ಗಾತ್ರ

ಹಿರೇಕೆರೂರು: ಸಾಲ ಬಾಧೆ ತಾಳದೇ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಬುಧವಾರ ಜರುಗಿದೆ.

ನಾಗರಾಜ ಪರಮೇಶಪ್ಪ ದೂದಿಹಳ್ಳಿ (35) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪಟ್ಟಣದ ಕೆವಿಜಿ ಬ್ಯಾಂಕ್‌ನಲ್ಲಿ ₹40 ಸಾವಿರ ಹಾಗೂ ಸಂಘ ಸಂಸ್ಥೆಗಳಲ್ಲಿ ₹10 ಲಕ್ಷ ಸಾಲ ಮಾಡಿಕೊಂಡಿದ್ದರು. ಕಳೆದ ವರ್ಷ ಅತಿವೃಷ್ಟಿಯಿಂದ ಬೆಳೆ ಸರಿಯಾಗಿ ಬಂದಿರಲಿಲ್ಲ. ಇದರಿಂದ ಸಾಲವನ್ನು ಹೇಗೆ ತೀರಿಸುವುದು ಎನ್ನುವ ಚಿಂತೆಯಲ್ಲಿ ಮುಳುಗಿದ್ದರು.

ಈ ಕುರಿತು ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT