ಹಾವೇರಿ: ‘ರಸಗೊಬ್ಬರ ನೀಡಲು ರೈತರಿಗೆ ಎಫ್ಐಡಿ ಕಡ್ಡಾಯಗೊಳಿಸಿರುವ ನಿಯಮವನ್ನು ರದ್ದುಪಡಿಸಬೇಕು’ ಎಂದು ಆಗ್ರಹಿಸಿ ರೈತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ನಗರದ ಹಳೇ ಪಿ.ಬಿ. ರಸ್ತೆಯಲ್ಲಿರುವ ಆಂಜನೇಯ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಬಳಿಕ, ಎಂ.ಜಿ. ರಸ್ತೆಯಲ್ಲಿ ಬಹಿರಂಗ ಸಭೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

‘ಮಳೆ ಪ್ರಾರಂಭವಾಗುವ ಮುನ್ನವೇ, ರೈತರಿಗೆ ರಸಗೊಬ್ಬರ ನೀಡುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಎಫ್ಐಡಿ ಕಡ್ಡಾಯಗೊಳಿಸಿ, ರಸಗೊಬ್ಬರವನ್ನು ಮಿತಿಗೊಳಿಸಿದ್ದಾರೆ. ಇದರಿಂದ ರೈತರಿಗೆ ಸರಿಯಾಗಿ ಗೊಬ್ಬರ ಸಿಗುತ್ತಿಲ್ಲ. ಗೊಬ್ಬರವಿಲ್ಲದೇ ಬೆಳೆ ಹಾಳುವ ಸ್ಥಿತಿ ಬಂದಿದೆ. ಎಫ್ಐಡಿ ಮೂಲಕ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. ಕೂಡಲೇ ಎಫ್ಐಡಿ ರದ್ದುಪಡಿಸಬೇಕು’ ಎಂದು ರೈತರು ಆಗ್ರಹಿಸಿದರು.

‘ಅರಣ್ಯ, ಬಗರ್ ಹುಕುಂ ಹಾಗೂ ಇತರೆ ಸರ್ಕಾರಿ ಜಮೀನಿನಲ್ಲಿ ರೈತರು ಸಾಗುವಳಿ ಮಾಡುತ್ತಿದ್ದಾರೆ. ಹಾವೇರಿ ಜಿಲ್ಲೆಯಲ್ಲಿರುವ 25,000 ಹೆಕ್ಟೇರ್ ಸಾಗುವಳಿ ಜಮೀನಿಗೆ ಹಕ್ಕು ಪತ್ರ ನೀಡಬೇಕು. ಹಕ್ಕು ಪತ್ರವಿಲ್ಲದಿದ್ದರಿಂದ, ರೈತರಿಗೆ ಸೂಕ್ತ ಸೌಲಭ್ಯಗಳು ಸಿಗುತ್ತಿಲ್ಲ’ ಎಂದು ದೂರಿದರು.

ಬೆಳೆ ವಿಮೆಯಲ್ಲಿ ಅನ್ಯಾಯ: ‘ಜಿಲ್ಲೆಯಲ್ಲಿ 2025–26ನೇ ಸಾಲಿನಲ್ಲಿ ರೈತರು ಬೆಳೆ ವಿಮೆ ತುಂಬಿದ್ದಾರೆ. ಆದರೆ, ಜಿಲ್ಲೆಯ 38 ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರಿಗೆ ಮಾತ್ರ ವಿಮೆ ಹಣ ಜಮೆಯಾಗಿದೆ. ಉಳಿದ ಗ್ರಾಮಗಳ ರೈತರಿಗೆ ವಿಮೆ ಬಂದಿಲ್ಲ. ವಿಮೆಯಲ್ಲಿ ರೈತರಿಗೆ ದೊಡ್ಡ ಅನ್ಯಾಯವಾಗಿದೆ’ ಎಂದು ಪ್ರತಿಭಟನಕಾರರು ಆರೋಪಿಸಿದರು.

‘ಹಾವೇರಿ ಜಿಲ್ಲೆಯ ಅರ್ಹ ರೈತರಿಗೆ ಬಿಪಿಎಲ್ ಪಡಿತರ ಚೀಟಿಗಳನ್ನು ನೀಡಬೇಕು. ಚೀಟಿ ಇಲ್ಲದಿದ್ದರಿಂದ ರೈತರಿಗೆ ಹಾಗೂ ಅವರ ಮಕ್ಕಳ ಶಿಕ್ಷಣಕ್ಕೆ ಸೌಲಭ್ಯಗಳು ಸಿಗುತ್ತಿಲ್ಲ. ಅಕಾಲಿಕ ಮಳೆಯಿಂದಾಗಿರುವ ಹಾನಿಗೆ ಪರಿಹಾರ ನೀಡಬೇಕು. ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿಗಳ ಬಾಕಿ ಹಣ ಬಿಡುಗಡೆ ಮಾಡಬೇಕು. ರೈತರ ಎಲ್ಲ ಬಗೆಯ ಸಾಲವನ್ನು ಮನ್ನಾ ಮಾಡಬೇಕು. ರೈತರಿಗೆ ಸಿಬಿಲ್ ಸ್ಕೋರ್ ಅನ್ವಯಿಸಬಾರದು’ ಎಂದು ಆಗ್ರಹಿಸಿದರು.

ಅಖಿಲ ಕರ್ನಾಟಕ ರೈತ ಸಂಘದ ಹನುಮಂತಪ್ಪ ದೀವಿಗಿಹಳ್ಳಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-22-438270392

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.