ಹಿರೇಕೆರೂರ: ‘ಮುಂಗಾರು ಹಂಗಾಮಿನಲ್ಲಿ ರೈತರ ಬಿತ್ತನೆ ಕಾರ್ಯಕ್ಕೆ ತೊಂದರೆಯಾಗದಂತೆ ಕೃಷಿ ಇಲಾಖೆ ಸಕಲ ಸಿದ್ಧತೆ ಮಾಡಿಕೊಳ್ಳಬೇಕು. ರೈತರಿಗೆ ಗುಣಮಟ್ಟದ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳನ್ನು ನಿಗದಿತ ದರದಲ್ಲಿ ಪೂರೈಸಬೇಕು’ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಭವನದಲ್ಲಿ ಈಚೆಗೆ ಕೃಷಿ ಇಲಾಖೆಯಿಂದ ಆಯೋಜಿಸಿದ್ದ ಮುಂಗಾರು ಹಂಗಾಮಿನ ಸಿದ್ಧತೆ ಹಾಗೂ ಕೃಷಿ ಪರಿಕರ ಮಾರಾಟಗಾರರ ಜಾಗೃತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೈತರಿಗೆ ಸಕಾಲದಲ್ಲಿ ಬೀಜ ಗೊಬ್ಬರ ತಲುಪಿಸಬೇಕು. ಕೃಷಿ ಪರಿಕರ ಮಾರಾಟಗಾರರು ಕಳಪೆ ಬೀಜ ವಿತರಣೆ ಹಾಗೂ ಹೆಚ್ಚಿನ ದರಕ್ಕೆ ಮಾರಾಟ ಮಾಡದಂತೆ ಕ್ರಮ ವಹಿಸಬೇಕು’ ಎಂದರು.

ರೈತರು ಪರ್ಯಾಯ ಹಾಗೂ ಸಂಯುಕ್ತ ರಸಗೊಬ್ಬರ ಬಳಸಬೇಕು. ಮಣ್ಣು ಪರೀಕ್ಷೆ ಆಧಾರದ ಮೇಲೆ ಪರ್ಯಾಯ ಕೃಷಿ ಪರಿಕರಗಳನ್ನು ಉಪಯೋಗಿಸಿ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು’ ಎಂದರು.

ಈ ವೇಳೆ ಸಂಯುಕ್ತ ರಸ ಗೊಬ್ಬರ ಬಳಕೆ ಕುರಿತು ಕರಪತ್ರ ಬಿಡುಗಡೆ ಮಾಡಲಾಯಿತು. ಕೃಷಿ ಇಲಾಖೆ ಉಪ ನಿರ್ದೇಶಕ ಕರಿಯಲ್ಲಪ್ಪ, ಸಿಪಿಐ ಮಂಜುನಾಥ ಪಂಡಿತ, ಜಾಗೃತ ದಳದ ಜಂಟಿ ಕೃಷಿ ನಿರ್ದೇಶಕ ಶಿವಲಿಂಗಪ್ಪ ವಿ.ಕೆ, ಕೃಷಿ ಪರಿಕರಗಳ ಮಾರಾಟಗಾರ ಸಂಘದ ತಾಲ್ಲೂಕು ಅಧ್ಯಕ್ಷ ಸಣ್ಣಗೌಡ ಪಾಟೀಲ, ರಟ್ಟಿಹಳ್ಳಿ ತಾಲ್ಲೂಕು ಅಧ್ಯಕ್ಷ ಬಸವರಾಜ ಹೊಸಮನಿ, ಪ.ಪಂ ಮಾಜಿ ಅಧ್ಯಕ್ಷ ಮಹೇಂದ್ರ ಬಡಳ್ಳಿ, ಕೃಷಿ ಅಧಿಕಾರಿ ರಾಮನಗೌಡ ಹಾದಿಮನಿ, ನಾಗರತ್ನಾ ಕಾರಿಕಂಟೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260427-22-623563595

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.