ಹಾವೇರಿ: ಜಿಲ್ಲೆಯಾದ್ಯಂತ ಪೂರ್ವ ಮುಂಗಾರು ಮಳೆ ಉತ್ತಮವಾಗಿ ಸುರಿದಿದ್ದು, ರೈತರು ಜಮೀನು ಹದಗೊಳಿಸಿ ಬಿತ್ತನೆಗೆ ಅಣಿಯಾಗುತ್ತಿದ್ದಾರೆ. ಬೀಜಗಳನ್ನು ಮುಂಗಡವಾಗಿ ಖರೀದಿಸಿಟ್ಟುಕೊಳ್ಳಲು ರೈತರು ಮುಂದಾಗಿದ್ದಾರೆ. ಆದರೆ, ಅವರಿಗೆ ಬೀಜ ತಲುಪಿಸುವಲ್ಲಿ ಆಡಳಿತ ವ್ಯವಸ್ಥೆಯ ವೈಫಲ್ಯ ಎದ್ದು ಕಾಣುತ್ತಿದೆ.

ರೈತಾಪಿ ನಾಡು ಎನಿಸಿಕೊಂಡಿರುವ ಹಾವೇರಿ ಜಿಲ್ಲೆ, ಕೃಷಿ ಅವಲಂಬಿತ ಜಿಲ್ಲೆ. ಬಹುಪಾಲು ಜನರು ಕೃಷಿಕರಿದ್ದಾರೆ. ಹೀಗಾಗಿ, ಇಲ್ಲಿ ಕೃಷಿ ಚಟುವಟಿಕೆಗಳು ಚುರುಕಿನಿಂದ ನಡೆಯುತ್ತವೆ. ರೈತರಿಗೆ ಬೀಜ ಪೂರೈಕೆ ಮಾಡಬೇಕಾದ ಕೃಷಿ ಇಲಾಖೆ, ಯಾವುದೇ ಮುಂಜಾಗ್ರತಾ ಕ್ರಮವಿಲ್ಲದೇ ‘ಬೀಜ ವಿತರಣೆ ಕಾರ್ಯಕ್ರಮ’ ಸಂಘಟಿಸುತ್ತಿದೆ.

ತಾಲ್ಲೂಕು ಕೇಂದ್ರಗಳು, ರೈತ ಸಂಪರ್ಕ ಕೇಂದ್ರಗಳು ಸೇರಿ ವಿವಿಧ ಕಡೆಗಳಲ್ಲಿ ಕಾಟಾಚಾರಕ್ಕೆ ಕಾರ್ಯಕ್ರಮ ಮಾಡುತ್ತಿರುವ ಕೃಷಿ ಇಲಾಖೆ ಅಧಿಕಾರಿಗಳು, ‘ಬೀಜ ವಿತರಣೆ ಆರಂಭಿಸಲಾಯಿತು’ ಎಂದು ಫೋಟೊ ಕ್ಲಿಕ್ಕಿಸಿಕೊಂಡು ಪ್ರಚಾರ ಪಡೆಯುತ್ತಿದ್ದಾರೆ. ಆದರೆ, ಕೆಲವರಿಗಷ್ಟೇ ಬೀಜ ವಿತರಿಸಿ ಶಟರ್ ಬಂದ್ ಮಾಡುತ್ತಿದ್ದಾರೆ.

ಬೀಜ ಸಿಗುವ ನಿರೀಕ್ಷೆಯಲ್ಲಿ ಕೇಂದ್ರಕ್ಕೆ ಬರುತ್ತಿರುವ ರೈತರು, ಗಂಟೆಗಟ್ಟಲೇ ಕಾದರೂ ಬೀಜ ಸಿಗುತ್ತಿಲ್ಲ. ಕಡಿಮೆ ಪ್ರಮಾಣದಲ್ಲಿ ಲಭ್ಯವಿರುವ ಬೀಜಕ್ಕಾಗಿ ರೈತರು ಮುಗಿಬೀಳುತ್ತಿದ್ದಾರೆ. ಇದರಿಂದಾಗಿ ಗಲಾಟೆ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸುತ್ತಿದ್ದಾರೆ.

ರೈತರು ನೂಕುನುಗ್ಗಲು ಹೆಚ್ಚಾಗುತ್ತಿದ್ದಂತೆ, ‘ನಾಳೆ ಬೀಜ ನೀಡಲಾಗುವುದು’ ಎಂಬ ಸಬೂಬು ನೀಡಿ ಕೇಂದ್ರವನ್ನೇ ಬಂದ್ ಮಾಡಲಾಗುತ್ತಿದೆ. ರೈತರಿಗೆ ಅಗತ್ಯವಿರುವಷ್ಟು ಬೀಜ ನೀಡಲು ಆಗದಿದ್ದರೆ, ಬೀಜ ವಿತರಣೆ ಆರಂಭವೆಂದು ಏಕೆ ಪ್ರಚಾರ ಮಾಡುತ್ತೀರಾ? ಕಾಟಾಚಾರಕ್ಕೆ ಕಾರ್ಯಕ್ರಮ ಬೇಡ. ನಮಗೆ ಬೀಜ ಕೊಡಿ ಎಂದು ರೈತರು ಆಕ್ರೋಶ ಹೊರಹಾಕುತ್ತಿದ್ದಾರೆ.

ರಟ್ಟೀಹಳ್ಳಿ ಹಾಗೂ ಶಿಗ್ಗಾವಿ ತಾಲ್ಲೂಕಿನ ಬಂಕಾಪುರದಲ್ಲಿ ಬುಧವಾರ ಬಿತ್ತನೆ ಬೀಜ ಖರೀದಿಸಲು ರೈತರು ಮುಗಿಬಿದ್ದರು. ಸಾಲಿನಲ್ಲಿ ನಿಂತರೂ ಬೀಜ ಸಿಗದೇ, ಹಲವರು ಹೊರಟು ಹೋದರು. ಇಲಾಖೆ ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-22-72423999

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.