ಹಾವೇರಿ: ‘ಹಾವೇರಿ ಜಿಲ್ಲೆ ಮಾತ್ರವಲ್ಲದೇ ಇಡೀ ದೇಶದಾದ್ಯಂತ ರೈತರು ಮೆಕ್ಕೆಜೋಳ ಬೆಳೆಯುತ್ತಿದ್ದಾರೆ. ಮೆಕ್ಕೆಜೋಳಕ್ಕೆ ₹3,000 ಬೆಂಬಲ ಬೆಲೆ ನೀಡಬೇಕು. ರೈತರು ಬೆಳೆದಿರುವ ಮೆಕ್ಕೆಜೋಳವನ್ನು ಖರೀದಿಸಲು ಕೇಂದ್ರ ಸ್ಥಾಪಿಸಬೇಕೆಂದು ಒತ್ತಾಯಿಸಿ ನ. 24ರಿಂದ ಅಹೋರಾತ್ರಿ ಧರಣಿ ಆರಂಭಿಸಲಾಗುವುದು’ ಎಂದು ‘ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ’ಯ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ ಹೇಳಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ರೈತ ಸಂಘಟನೆಗಳ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಹಾವೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರೈತರು ಪಾಲ್ಗೊಳ್ಳಲಿದ್ದಾರೆ’ ಎಂದರು.

‘ಅತೀವೃಷ್ಠಿ ಹಾಗೂ ಅನಾವೃಷ್ಠಿಯಿಂದಾಗಿ ಹಲವು ವರ್ಷಗಳಿಂದ ಬೆಳೆ ಹಾನಿ ಅನುಭವಿಸುತ್ತಿರುವ ರೈತರು, ಆರ್ಥಿಕವಾಗಿ ಕಂಗಾಲಾಗಿದ್ದಾರೆ. ಈ ಬಾರಿಯ ಮುಂಗಾರಿನಲ್ಲೂ ಮೆಕ್ಕೆಜೋಳ ಬೆಳೆ ಹಾಳಾಗಿದ್ದು, 30 ಕ್ವಿಂಟಲ್ನಿಂದ 40 ಕ್ವಿಂಟಲ್ ಬೆಳೆಯುವ ಜಾಗದಲ್ಲಿ ಕೇವಲ 6ರಿಂದ 7 ಕ್ವಿಂಟಲ್ ಮೆಕ್ಕೆಜೋಳ ಬಂದಿದೆ. ಇಂಥ ಸಂದರ್ಭದಲ್ಲಿಯೇ ಮೆಕ್ಕೆಜೋಳದ ಬೆಲೆ ₹ 1600ಕ್ಕೆ ಕುಸಿದಿದೆ. ಸಾಲ ಮಾಡಿ ಬಿತ್ತನೆ ಮಾಡಿದ್ದ ರೈತರು, ಈಗ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ಹೇಳಿದರು.

‘ಮೆಕ್ಕೆಜೋಳ ಖರೀದಿಸಲು ಎಫ್ಆರ್ಪಿ ಪ್ರಕಾರ ಕೇಂದ್ರ ಸರ್ಕಾರದಿಂದ ₹2,400 ನೀಡಬೇಕು. ರಾಜ್ಯ ಸರ್ಕಾರವು ತನ್ನ ಪಾಲಿನಿಂದ ₹ 600 ನೀಡಬೇಕು. ಎರಡೂ ಕಡೆಯಿಂದ ಪ್ರತಿ ಕ್ವಿಂಟಲ್ ಮೆಕ್ಕೆಜೋಳಕ್ಕೆ ₹ 3,000 ನೀಡಬೇಕು. ಈ ಪ್ರಮುಖ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ ಆರಂಭಿಸಲಾಗುತ್ತಿದೆ’ ಎಂದರು.

‘ರೈತರು ಏನೇ ಪಡೆಯಬೇಕಾದರೂ ಹೋರಾಟ ಮಾಡಲೇ ಬೇಕಾದ ಸ್ಥಿತಿ ಬಂದಿದೆ. ನ. 24ರಂದು ಕಾಗಿನೆಲೆ ಕ್ರಾಸ್ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. ಮೊದಲ ದಿನ ಶಾಂತಿಯುತ ಧರಣಿ ಇರಲಿದೆ. ನಮ್ಮ ಬೇಡಿಕೆ ಈಡೇರಿಸದಿದ್ದರೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ತಡೆಯಲಾಗುವುದು. ರೈತರ ಸ್ವಾತಂತ್ರ್ಯಕ್ಕೆ ಧಕ್ಕೆ ಬಂದರೆ, ನಾವು ಸಹಿಸುವುದಿಲ್ಲ. ಜೈಲಿಗೆ ಹೋಗಲು ಸಹ ಸಿದ್ಧರಿದ್ದೇವೆ’ ಎಂದು ಎಚ್ಚರಿಕೆ ನೀಡಿದರು.

‘ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭಿಸಬೇಕು. ಅತೀವೃಷ್ಟಿ ಮಳೆಯಿಂದ ಬೆಳೆ ಕಳೆದುಕೊಂಡ ರೈತರಿಗೆ ಪ್ರತಿ ಎಕರೆಗೆ ₹25,000- ಪರಿಹಾರ ನೀಡಬೇಕು. ವರದಾ ಹಾಗೂ ಬೇಡ್ತಿ ನದಿ ಜೋಡಣೆ ಮಾಡಬೇಕು. ಹೆಸ್ಕಾಂ ಕಂಪನಿಯವರು, ವಿದ್ಯುತ್ ಕಂಬ ಹಾಗೂ ತಂತಿಯನ್ನು ರೈತರೇ ಖರೀದಿಸುವಂತೆ ನಿಯಮ ಮಾಡಿದೆ. ಈ ನಿಯಮ ರದ್ದುಪಡಿಸಬೇಕು. ಹೆಸ್ಕಾಂ ಕಂಪನಿಯವರು ವಿಧಿಸುತ್ತಿರುವ ಶುಲ್ಕ ದುಬಾರಿಯಾಗಿದ್ದು, ಅದನ್ನು ಕೈ ಬಿಡಬೇಕು. ಬೆಳೆ ವಿಮೆಯಲ್ಲಾದ ತಾರತಮ್ಯ ಸರಿಪಡಿಸಬೇಕು’ ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ, ಮಾಲತೇಶ ಪೂಜಾರ, ಎಚ್.ಎಚ್. ಮುಲ್ಲಾ, ಮರಿಗೌಡ್ರ ಪಾಟಿಲ, ಪ್ರಭುಗೌಡ ಪ್ಯಾಟಿ, ಚನ್ನಪ್ಪ ಮರಡೂರ. ಶಿವಯೋಗಿ ಹೊಸಗೌಡ್ರ, ರಾಜು ತರ್ಲಗಟ್ಟ ಪತ್ರಿಕಾಗೋಷ್ಠಿಯಲ್ಲಿದ್ದರು.

- ಆಮದು ಒಪ್ಪಂದ; ರೈತರಿಗೆ ಸಂಕಷ್ಟ ‘ಹೊರ ದೇಶಗಳಿಂದ ಮೆಕ್ಕೆಜೋಳ ಸೇರಿ ವಿವಿಧ ಕೃಷಿ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಲು ಸಿದ್ದತೆ ನಡೆಸಿದೆ’ ಎಂದು ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಈ ಒಪ್ಪಂದ ಜಾರಿಗೆ ಬಂದರೆ ಕುಲಾಂತರಿ ತಳಿಗಳು ದೇಶದೊಳಗೆ ಬರಲಿವೆ. ದೇಶದೊಳಗಿನ ರೈತರ ಕೃಷಿ ಉತ್ಪನ್ನಕ್ಕೆ ಬೇಡಿಕೆ ಕುಸಿಯಲಿದೆ. ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದ್ದಾರೆ’ ಎಂದರು. ‘ಈಗಾಗಲೇ ಹತ್ತಿಯ ಕುಲಾಂತರಿ ತಳಿ ದೇಶದೊಳಗೆ ಬಂದು ರೈತರು ಹತ್ತಿಯಿಂದ ವಿಮುಖವಾಗಿದ್ದಾರೆ. ಎಲ್ಲ ಬೆಳೆಗಳೂ ಕುಲಾಂತರಿ ತಳಿಗಳಾದರೆ ಸ್ಥಳೀಯ ರೈತರ ಆರ್ಥಿಕ ಮಟ್ಟ ಕುಸಿಯಲಿದೆ. ಈ ಒಪ್ಪಂದದ ಬಗ್ಗೆ ಚರ್ಚೆ ನಡೆಯಬೇಕಿದೆ’ ಎಂದರು.

ಆತ್ಮಹತ್ಯೆ ತಡೆಗೆ ಸಹಾಯವಾಣಿ

‘ಕೃಷಿಯಲ್ಲಿ ಉಂಟಾಗುತ್ತಿರುವ ಆರ್ಥಿಕ ಸಂಕಷ್ಟದಿಂದಾಗಿ ರೈತರು ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದಾರೆ. ಇಂಥ ರೈತರನ್ನು ಆತ್ಮಹತ್ಯೆ ಮಾಡಿಕೊಳ್ಳದಂತೆ ತಡೆಯಲು ಹಾಗೂ ರೈತರ ಸಮಸ್ಯೆಗಳನ್ನು ಬಗೆಹರಿಸಲು ಸಹಾಯವಾಣಿ (9480124365 9483124365) ಆರಂಭಿಸಲಾಗಿದೆ. ಯಾರೇ ರೈತರು ತೊಂದರೆಯಿದ್ದರೆ ಸಹಾಯವಾಣಿಗೆ ಕರೆ ಮಾಡಬಹುದು’ ಎಂದು ರಾಮಣ್ಣ ಕೆಂಚಳ್ಳೇರ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.