ಹಾವೇರಿ: ಜಿಲ್ಲೆಯ ಹಲವು ಕಡೆಗಳಲ್ಲಿ ಕಬ್ಬು ಹಾಗೂ ಇತರೆ ಬೆಳೆ ಬೆಳೆದಿರುವ ರೈತರು ಯೂರಿಯಾ ಗೊಬ್ಬರಕ್ಕಾಗಿ ಹುಡುಕಾಟ ನಡೆಸುತ್ತಿದ್ದು, ಹಲವು ಕಡೆಗಳಲ್ಲಿ ಗೊಬ್ಬರ ಸಿಗುತ್ತಿಲ್ಲವೆಂಬ ದೂರುಗಳು ಕೇಳಿಬರುತ್ತಿವೆ. ನಿಗದಿಗೆ ತಕ್ಕಷ್ಟು ಗೊಬ್ಬರ ಸರಬರಾಜಾದರೂ ಕೆಲವರು ಕೃತಕ ಅಭಾವ ಸೃಷ್ಟಿಸಿ ರೈತರಲ್ಲಿ ಆತಂಕವನ್ನುಂಟು ಮಾಡುತ್ತಿದ್ದು, ಇಂಥವರ ಮಾರಾಟ ಪರವಾನಗಿ ರದ್ದುಪಡಿಸುವುದಾಗಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಖಡಕ್ ಎಚ್ಚರಿಕೆ ನೀಡಿದ್ದಾರೆ.

‘ಜಿಲ್ಲೆಯಲ್ಲಿ ಯೂರಿಯಾ ಗೊಬ್ಬರ ಸಿಗುತ್ತಿಲ್ಲ’ ಎಂದು ಕೆಲ ರೈತರು ಅಳಲು ತೋಡಿಕೊಂಡಿದ್ದಾರೆ. ಇದರಿಂದ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ‘ಬಿತ್ತನೆ ಬೀಜ ಮತ್ತು ರಸಗೊಬ್ಬರ ಸರಬರಾಜು ಸಂಸ್ಥೆಯ ಪ್ರತಿನಿಧಿಗಳು, ಕೃಷಿ ಪರಿಕರ ಮಾರಾಟಗಾರರು ಹಾಗೂ ಕೃಷಿ ಇಲಾಖೆ ಅಧಿಕಾರಿಗಳ ಸಭೆ’ ನಡೆಸಿತು.

ಜಿಲ್ಲಾಧಿಕಾರಿ ವಿಜಯ ಮಹಾಂತೇಶ ಮಾತನಾಡಿ, ‘ರಸಗೊಬ್ಬರವನ್ನು ಅಕ್ರಮವಾಗಿ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿ ಮಾಡುವುದು, ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರುವುದು, ಬಿಲ್ ನೀಡದೇ ಇರುವುದು, ಅವಧಿ ಮೀರಿದ ಕೃಷಿ ಪರಿಕರಗಳನ್ನು ವಿತರಣೆ ಮಾಡುವುದು ಕಂಡುಬಂದಲ್ಲಿ ಅಂತಹ ಮಾರಾಟಗಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಪರವಾನಗಿ ರದ್ದು ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಯೂರಿಯಾ ವಿತರಣೆ ಮಾಡುವಾಗ ಕಡ್ಡಾಯವಾಗಿ ಪಾಯಿಂಟ್ ಆಪ್ ಸೇಲ್ ಯಂತ್ರದ ಮತ್ತು ಕೆ– ಕಿಸಾನ್ ತಂತ್ರಾಂಶದ ಮೂಲಕ ರೈತರಿಗೆ, ಎಫ್ಐಡಿ ಆಧಾರಿತ ಜಮೀನಿನ ವಿಸ್ತೀರ್ಣದ ಮೇಲೆ ಮಾರಾಟ ಮಾಡಬೇಕು. ಜಿಲ್ಲೆಯ ರಸಗೊಬ್ಬರ ಮಾರಾಟಗಾರರು ಈ ಕುರಿತು ರೈತರಿಗೆ ಸೂಕ್ತ ತಿಳಿವಳಿಕೆ ನೀಡಿ ಕಡ್ಡಾಯವಾಗಿ ಆಧಾರ ಸಂಖ್ಯೆಯನ್ನು ಪಡೆದು ರಸಗೊಬ್ಬರ ವಿತರಣೆ ಮಾಡಬೇಕು. ಜಿಲ್ಲೆಯ ರಸಗೊಬ್ಬರ ಮತ್ತು ಬಿತ್ತನೆ ಬೀಜ ಮಾರಾಟಗಾರರು ಮಾರಾಟ ಮಳಿಗೆಯಲ್ಲಿ ರೈತರಿಗೆ ಕಾಣುವಂತೆ ದರಪಟ್ಟಿ ಪ್ರದರ್ಶಿಸುವುದು ಕಡ್ಡಾಯ’ ಎಂದು ಹೇಳಿದರು.

3.28 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ: ಕೃಷಿ ಇಲಾಖೆಯ ಕೃಷಿ ನಿರ್ದೇಶಕ ಮಲ್ಲಿಕಾರ್ಜುನ ಮಾತನಾಡಿ, ‘ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 3.28 ಲಕ್ಷ ಹೆಕ್ರೇರ್ ಬಿತ್ತನೆ ಗುರಿ ಹೊಂದಲಾಗಿದೆ. ಗೋವಿನ ಜೋಳ, ಸೋಯಾ ಅವರೆ, ಶೇಂಗಾ ಮತ್ತು ಇತರೆ ಬೆಳೆಗಳ ವಿತರಣೆಗಾಗಿ 19 ರೈತ ಸಂಪರ್ಕ ಕೇಂದ್ರಗಳ ಜೊತೆಗೆ 23 ಹೆಚ್ಚುವರಿ ಬೀಜ ಮಾರಾಟ ಕೇಂದ್ರಗಳ ಮೂಲಕ ಬೀಜ ವಿತರಣೆ ಕ್ರಮ ಕೈಗೊಳ್ಳಲಾಗಿದೆ’ ಎಂದರು.

‘1,41,875 ಮೆ. ಟನ್ ರಸಗೊಬ್ಬರಗಳ ಬೇಡಿಕೆ ಇದೆ. ಜಿಲ್ಲೆಗೆ ಅವಶ್ಯಕವಿರುವ ಗೊಬ್ಬರವು ಹಂತ ಹಂತವಾಗಿ ಸರಬರಾಜಾಗುತ್ತಿದೆ. ರಸಗೊಬ್ಬರದ ಕೊರತೆ ಇಲ್ಲ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-22-316044788

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.