ಹಾವೇರಿ: ಹಾವೇರಿ ಗೋಲಿಬಾರ್ನಲ್ಲಿ ಇಬ್ಬರು ರೈತರು ಹುತಾತ್ಮರಾಗಿ 18 ವರ್ಷ ಗತಿಸಿದ್ದು, ಈ ದುರ್ಘಟನೆಯನ್ನು ನೆನೆದು ಇದೇ ಜೂನ್ 10ರಂದು ‘ರೈತ ಹುತಾತ್ಮ ದಿನಾಚರಣೆ’ ಹಮ್ಮಿಕೊಳ್ಳಲು ರೈತ ಸಂಘಟನೆಗಳು ತಯಾರಿ ಮಾಡಿಕೊಂಡಿವೆ.

2008ರ ಜೂನ್ 10ರಂದು ಬಿತ್ತನೆ ಬೀಜ ಹಾಗೂ ರಸಗೊಬ್ಬರಕ್ಕೆ ಆಗ್ರಹಿಸಿ ಹಾವೇರಿಯಲ್ಲಿ ರೈತರು ದೊಡ್ಡ ಮಟ್ಟದ ಪ್ರತಿಭಟನೆ ಆರಂಭಿಸಿದ್ದರು. ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸೇರಿದ್ದ ರೈತರನ್ನು ಚದುರಿಸಲು ಪೊಲೀಸರು ಗೋಲಿಬಾರ್ ಮಾಡಿದ್ದರು. ಈ ಸಂದರ್ಭದಲ್ಲಿ ಗುಂಡು ತಗುಲಿ ರೈತರಾದ ಸಿದ್ದಲಿಂಗಪ್ಪ ಚೂರಿ ಹಾಗೂ ಪುಟ್ಟಪ್ಪ ಹೊನ್ನತ್ತಿ ಮೃತಪಟ್ಟಿದ್ದರು.

ರೈತರ ಮೇಲೆ ನಡೆಸಿದ ಗೋಲಿಬಾರ್ ಖಂಡಿಸಿ ಹಲವು ಸಂಘಟನೆಗಳು ಪ್ರತಿ ವರ್ಷವೂ ಹುತಾತ್ಮ ದಿನ ಆಚರಿಸುತ್ತಿವೆ. ಈ ವರ್ಷವೂ ‘ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕ’ದ ಪದಾಧಿಕಾರಿಗಳು, ಜೂನ್ 10ರಂದು ಕಾರ್ಯಕ್ರಮ ಹಾಗೂ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ ಹಮ್ಮಿಕೊಳ್ಳಲು ತೀರ್ಮಾನಿಸಿದ್ದಾರೆ.

‘ಹಾವೇರಿ ಗೋಲಿಬಾರ್ ಘಟನೆಯು ವಿಷಾದನೀಯ. ಈ ಘಟನೆ ನಡೆದು 18 ವರ್ಷ ಪೂರೈಸಿದ್ದು, 19ನೇ ವರ್ಷಕ್ಕೆ ಕಾಲಿಟ್ಟಿದೆ. ಪ್ರತಿ ವರ್ಷದಂತೆ ಈ ವರ್ಷವೂ ಜೂನ್ 10ರಂದು ಧರಣಿಯ ಜೊತೆಯಲ್ಲಿ ರೈತ ಹುತಾತ್ಮ ದಿನ ಆಚರಿಸಲಾಗುತ್ತಿದೆ’ ಎಂದು ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ರೈತರ ವೀರಗಲ್ಲು ಇದೆ. ಬೆಳಿಗ್ಗೆ 10 ಗಂಟೆಗೆ ವಿಶೇಷ ಪೂಜೆ ಸಲ್ಲಿಸಲಾಗುವುದು. ಅದೇ ಸ್ಥಳದಲ್ಲಿ ಪೆಂಡಾಲ್ ಹಾಕಿ, ಧರಣಿ ಆರಂಭಿಸಲಾಗುವುದು’ ಎಂದು ಅವರು ಹೇಳಿದರು.

ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ‘ರೈತ ಹುತಾತ್ಮ ದಿನಾಚರಣೆ ದಿನದಂದು ರಸ್ತೆಗಳಲ್ಲಿ ವಾಹನಗಳ ಸಂಚಾರ ತಡೆದು ಪ್ರತಿಭಟನೆ ನಡೆಸಲಾಗುವುದು. ಜಿಲ್ಲಾಧಿಕಾರಿ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಮನವಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.

‘ದೇಶದ 140 ಕೋಟಿ ಜನರ ಹಸಿವು ನೀಗಿಸುವ ರೈತ, ಬಿತ್ತನೆ ಬೀಜ–ರಸಗೊಬ್ಬರಕ್ಕಾಗಿ ಇಂದಿಗೂ ಕಷ್ಟಪಡುವ ಸ್ಥಿತಿಯಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಯಾವ ಪಕ್ಷ ಅಧಿಕಾರಕ್ಕೆ ಬಂದರೂ ರೈತರ ಸಮಸ್ಯೆ ಬಗೆಹರಿಯುತ್ತಿಲ್ಲ. ರಾಜ್ಯದಾದ್ಯಂತ 157 ರೈತರನ್ನು ಗುಂಡು ಹಾರಿಸುವ ಮೂಲಕ ಕೊಲೆ ಮಾಡಿ, ಎಲ್ಲ ಸರ್ಕಾರಗಳು ದ್ರೋಹ ಮಾಡಿವೆ. ಯುದ್ಧದ ನೆಪದಲ್ಲಿ ರಸಗೊಬ್ಬರದ ಬೆಲೆ ಏರಿಸಲಾಗಿದೆ. ಮೆಕ್ಕೆಜೋಳ ಬಿತ್ತನೆ ಬೀಜದ ದರವನ್ನೂ ಬೇಕಾಬಿಟ್ಟಿಯಾಗಿ ನಿಗದಿಪಡಿಸಲಾಗುತ್ತಿದೆ. ರೈತರಿಗೆ ಅನ್ಯಾಯ ಆಗುತ್ತಿದ್ದರೂ ರಾಜಕೀಯ ಮುಖಂಡರು ಕಣ್ಮುಚ್ಚಿ ಕುಳಿತಿದ್ದಾರೆ. ಜಿಲ್ಲೆಯಲ್ಲಿ ನದಿಯಿಂದ ಕೆರೆ ತುಂಬಿಸುವ ಯೋಜನೆಗಳು ನೆನೆಗುದಿಗೆ ಬಿದ್ದಿವೆ’ ಎಂದು ದೂರಿದರು.

ಎಚ್.ಎಚ್. ಮುಲ್ಲಾ, ಮರಿಗೌಡ ಪಾಟಿಲ, ಶಿವಯೋಗಿ ಹೊಸಗೌಡ್ರ, ಚನ್ನಪ್ಪ ಮರಡೂರ, ಶಿವಬಸಪ್ಪ ಗೋವಿ, ಸುರೇಶ ಚಲವಾದಿ, ರಾಜು ತರ್ಲಗಟ್ಟ, ರುದ್ರಗೌಡ ಕಾಡನಗೌಡ್ರ, ಗುಡ್ಡನಗೌಡ ಪ್ಯಾಟಿಗೌಡ್ರ, ಅಬ್ದುಲ್ ಖಾದರ್ ಪತ್ರಿಕಾಗೋಷ್ಠಿಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260603-22-1392051295

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.