ಹಾವೇರಿ: ‘ಇತ್ತೀಚಿನ ದಿನಗಳಲ್ಲಿ ಫ್ಲೋರೈಡ್ಯುಕ್ತ ನೀರು ಸೇವಿಸಿ ಅನೇಕ ಜನರು ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆಗಿರುವ ನ್ಯಾಯಾಧೀಶೆ ಶ್ರೀಶೈಲಜಾ ಎಚ್.ವಿ. ಹೇಳಿದರು.

ತಾಲ್ಲೂಕಿನ ಕಳ್ಳಿಹಾಳ ಗ್ರಾಮದಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಸತಿಯುತ ಸರ್ಕಾರಿ ಪ್ರಥಮ ದರ್ಜೆ ವಿದ್ಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ವಿಶ್ವ ಜಲ ದಿನಾಚರಣೆ ಅಂಗವಾಗಿ ಇತ್ತೀಚೆಗೆ ಹಮ್ಮಿಕೊಂಡಿದ್ದ ‘ಪ್ರಾಣಿ, ಪಕ್ಷಿಗಳಿಗೆ ನೀರಿನ ಮಹತ್ವ, ಬಾಲ್ಯ ವಿವಾಹ ನಿಷೇಧ, ಪೋಕ್ಸೊ ಕಾಯ್ದೆ, ವರದಕ್ಷಿಣೆ ನಿಷೇಧ, ಮಾದಕ ವಸ್ತುಗಳ ಅಕ್ರಮ ಸಾಗಣೆ ಹಾಗೂ ಮನೆ ಮನೆಯಲ್ಲಿ ನ್ಯಾಯದ ಜಾಗೃತಿ’ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಬಾಲ್ಯ ವಿವಾಹ ಹಾಗೂ ಪೋಕ್ಸೊ ಪ್ರಕರಣಗಳು ಕಂಡುಬಂದಲ್ಲಿ ಅಥವಾ ಮಕ್ಕಳಿಗೆ ತೊಂದರೆಯಾದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ–1098ಕ್ಕೆ ಕರೆ ಮಾಡಬೇಕು ’ ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯಕ ಕಾನೂನು ನೆರವು ಅಭಿರಕ್ಷಕ ಎನ್.ಎನ್. ಡಿಳ್ಳೆಪ್ಪನವರ ಅವರು, ಬಾಲ್ಯ ವಿವಾಹ ನಿಷೇಧ, ಪೋಕ್ಸೊ ಕಾಯ್ದೆ, ವರದಕ್ಷಿಣೆ ನಿಷೇಧ, ಮಾದಕ ವಸ್ತುಗಳ ಅಕ್ರಮ ಸಾಗಣೆ ಹಾಗೂ ನ್ಯಾಯದ ಜಾಗೃತಿ’ ವಿಷಯದ ಕುರಿತು ಉಪನ್ಯಾಸ ನೀಡಿದರು.

ವಿದ್ಯಾಲಯದ ಉಪನ್ಯಾಸಕ ಡಿ.ಟಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-22-1148411282

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.