ಹಾವೇರಿ: ಗಾಂಧಿ ಜಯಂತಿ ಅಂಗವಾಗಿ ಇಲ್ಲಿಯ ಜಿಲ್ಲಾಡಳಿತದ ಅಧಿಕಾರಿಗಳು ಇತ್ತೀಚೆಗೆ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡು ಶ್ರಮದಾನ ಮಾಡಿದರು.

ನಗರದ ಎಂ.ಜಿ. ರಸ್ತೆಯಲ್ಲಿರುವ ಗಾಂಧೀಜಿ ವೃತ್ತದಲ್ಲಿ ಸೇರಿದ್ದ ಅಧಿಕಾರಿಗಳು, ಅಲ್ಲಿಯೇ ಶ್ರಮದಾನಕ್ಕೆ ಚಾಲನೆ ನೀಡಿದರು. ಗಾಂಧಿ ಪ್ರತಿಮೆ ಸುತ್ತಲೂ ಕಸಗೂಡಿಸಿದ ಅಧಿಕಾರಿಗಳು, ತ್ಯಾಜ್ಯವನ್ನು ಆಯ್ದುಕೊಂಡು ವಾಹನದಲ್ಲಿ ಸಾಗಿಸಿದರು.

ಜೆ.ಎಚ್. ಪಟೇಲ್ ವೃತ್ತ, ವಿ.ಕೃ. ಗೋಕಾಕ ವೃತ್ತ, ಬಸವೇಶ್ವರ ವೃತ್ತ, ಸುಭಾಷ್ ವೃತ್ತ, ಜೆ.ಪಿ. ವೃತ್ತ, ಮೈಲಾರ ಮಹದೇವಪ್ಪ ವೃತ್ತ, ಹೊಸಮನಿ ಸಿದ್ದಪ್ಪ ವೃತ್ತ, ಕಿತ್ತೂರ ರಾಣಿ ಚನ್ನಮ್ಮ ವೃತ್ತ, ಮಹರ್ಷಿ ವಾಲ್ಮೀಕಿ ವೃತ್ತ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿಯೂ ಸ್ವಚ್ಛತೆ ಮಾಡಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ್, ‘ನಾವೆಲ್ಲರೂ ಸ್ವಚ್ಛತೆಗೆ ಆದ್ಯತೆ ನೀಡಬೇಕು. ನಗರದ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸುಂದರ ನಗರ ನಿರ್ಮಾಣಕ್ಕೆ ಎಲ್ಲರೂ ಕೈ ಜೋಡಿಸಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.