ಹಾವೇರಿ: ಇಲ್ಲಿಯ ಮುನ್ಸಿಪಲ್ ಹೈಸ್ಕೂಲ್ ಮೈದಾನ ಬಳಿಯ ವಿದ್ಯಾ ನಗರದ ರಸ್ತೆಯಲ್ಲಿ ಮಹಿಳೆಯೊಬ್ಬರ ಚಿನ್ನದ ಮಾಂಗಲ್ಯ ಸರ ಕಿತ್ತುಕೊಂಡು ಆರೋಪಿಗಳು ಪರಾರಿಯಾಗಿದ್ದು, ಈ ಸಂಬಂಧ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಏಪ್ರಿಲ್ 30ರಂದು ರಾತ್ರಿ 10.50 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಬೈಕ್ನಲ್ಲಿ ಬಂದು ಕೃತ್ಯ ಎಸಗಿದ್ದ ಇಬ್ಬರು ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಸ್ಥಳೀಯ ನಿವಾಸಿ ಸುಮಾ ಅವರು, ರಾತ್ರಿ ಊಟ ಮುಗಿಸಿ ಮನೆ ಬಳಿ ವಾಯುವಿಹಾರ ಮಾಡುತ್ತಿದ್ದರು. ಪತಿಯೂ ಜೊತೆಗಿದ್ದರು. ಅದೇ ಸಂದರ್ಭದಲ್ಲಿ ಇಬ್ಬರು ಆರೋಪಿಗಳು, ಬೈಕ್ನಲ್ಲಿ ಬಂದಿದ್ದರು. ಅದರಲ್ಲಿ ಒಬ್ಬಾತ, ಚಿನ್ನದ ಸರ ಕಿತ್ತುಕೊಂಡಿದ್ದ. ಅದೇ ಸಂದರ್ಭದಲ್ಲಿ ಪತಿ, ಆರೋಪಿಗಳನ್ನು ಹಿಡಿಯಲು ಮುಂದಾಗಿದ್ದರು. ಅವರನ್ನೇ ತಳ್ಳಿ ಬೀಳಿಸಿ ಗಾಯಗೊಳಿಸಿ ಆರೋಪಿಗಳು ಪರಾರಿಯಾಗಿದ್ದಾರೆ’ ಎಂದು ತಿಳಿಸಿದರು.

‘₹ 7 ಲಕ್ಷ ಮೌಲ್ಯದ 55 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಳುವಾಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಗಾಯಗೊಂಡಿರುವ ಮಹಿಳೆಯ ಪತಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260504-22-711496455

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.