ಹಾವೇರಿ: ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಗಳಿಸಿದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು, ಅರ್ಹ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಬಗ್ಗೆ ಪ್ರಕಟಣೆ ನೀಡಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ಹಾವೇರಿ ಶಾಖೆ ಜಿಲ್ಲಾಧ್ಯಕ್ಷ ಮಲ್ಲೇಶ ಕರಿಗಾರ, ‘ಅರ್ಹರು ಮೇ 31ರೊಳಗಾಗಿ ಆನ್ಲೈನ್ (https://ksgeanews.blogspot.com) ಮೂಲಕ ಅರ್ಜಿ ಸಲ್ಲಿಸಬೇಕು’ ಎಂದಿದ್ದಾರೆ.

‘ವಿದ್ಯಾರ್ಥಿಗಳು ಮೊದಲ ಪ್ರಯತ್ನದಲ್ಲೇ 2025ನೇ ಸಾಲಿನ ಎಸ್ಎಸ್ಎಲ್ಸಿ ಅಥವಾ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತೀರ್ಣರಾಗಿರಬೇಕು. ವಿದ್ಯಾರ್ಥಿಯ ತಂದೆ ಅಥವಾ ತಾಯಿ, ರಾಜ್ಯ ಸರ್ಕಾರದ ಯಾವುದೇ ಇಲಾಖೆಯಲ್ಲಿ ಶಾಶ್ವತ ಸರ್ಕಾರಿ ಉದ್ಯೋಗಿಯಾಗಿರಬೇಕು. ನಿಗಮಗಳು, ಮಂಡಳಿಗಳು, ಪ್ರಾಧಿಕಾರಗಳು, ವಿಶ್ವವಿದ್ಯಾಲಯಗಳು, ಖಾಸಗಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ನೌಕರರ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಲ್ಲ’ ಎಂದು ತಿಳಿಸಿದ್ದಾರೆ.

‘ವಿದ್ಯಾರ್ಥಿಯ ಪಾಸ್ಪೋರ್ಟ್ ಛಾಯಾಚಿತ್ರ ಮತ್ತು ಪ್ರಮಾಣಿಕೃತ ಅಂಕಪಟ್ಟಿ, ಇಲಾಖೆಯ ಸೇವಾ ದೃಢೀಕರಣ ಪತ್ರ, ಜಿಲ್ಲಾ, ತಾಲ್ಲೂಕು, ಯೋಜನಾ ಶಾಖೆಯ ಅಧ್ಯಕ್ಷರು, ಸಂಘದ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರಿಂದ ಪಡೆದ ದೃಢೀಕರಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಂಘ ಪದಾಧಿಕಾರಿಗಳು ಹಾಗೂ ಕಚೇರಿಗಳನ್ನು ಸಂಪರ್ಕಿಸಬಹುದು’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.