ಬ್ಯಾಡಗಿ: ‘ಕಾರ್ಯಾಂಗದ ಭಾಗವಾಗಿರುವ ಸರ್ಕಾರಿ ನೌಕರರು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ತಮ್ಮ ಕಾಯಕದಲ್ಲಿ ದಕ್ಷತೆ ಹೆಚ್ಚಿಸಿಕೊಳ್ಳಬೇಕಾಗಿದೆ’ ಎಂದು ಶಾಸಕ ಬಸವರಾಜ ಶಿವಣ್ಣನವರ ಸಲಹೆ ನೀಡಿದರು.

ಪಟ್ಟಣದ ಬೀರಲಿಂಗೇಶ್ವರ ಸಮೂದಾಯ ಭವನದಲ್ಲಿ ಸರ್ಕಾರಿ ನೌಕರರ ದಿನಾಚರಣೆ ಅಂಗವಾಗಿ ಮಂಗಳವಾರ ಏರ್ಪಡಿಸಿದ್ದ ನಿವೃತ್ತ ಹಾಗೂ ಸಾಧಕ ನೌಕರರ ಸನ್ಮಾನ ಹಾಗೂ ಸದಸ್ಯರ ಸಾಮಾನ್ಯ ಸಭೆಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಸರ್ಕಾರಿ ನೌಕರರಿಗೆ ಜನ ಸೇವೆ ಮಾಡಲು ಸರ್ಕಾರ ಅವಕಾಶ ಒದಗಿಸಿದ್ದು, ತಾವು ಮಾಡುತ್ತಿರುವ ಸೇವೆ ದೇವರಿಗೆ ಅರ್ಪಿತವಾಗಲಿದೆ. ನೌಕರರು ತಮ್ಮ ವೃತ್ತಿ ಜೀವನದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಬೇಕು’ ಎಂದರು.

ರಾಜ್ಯ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಮಾತನಾಡಿ, ‘ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸ ಸರ್ಕಾರಿ ನೌಕರರಾಗಿದ್ದು, ಉತ್ತಮವಾಗಿ ನಿರ್ವಹಿಸಬೇಕು’ ಎಂದರು.

ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎನ್.ಕಂಬಳಿ ಪ್ರಾಸ್ತಾವಿಕ ಮಾತನಾಡಿದರು. ಶಿರೀಶ ಜೋಷಿ ಮಾಹಿತಿ ಹಕ್ಕು ಕುರಿತು ಉಪನ್ಯಾಸ ನೀಡಿದರು. ಈ ವೇಳೆ ತಹಶೀಲ್ದಾರ್ ಚಂದ್ರಶೇಖರ ನಾಯಕ, ಪುರಸಭೆ ಮುಖ್ಯಾಧಿಕಾರಿ ವಿನಯಕುಮಾರ, ಸಂಘದ ಗೌರವಾಧ್ಯಕ್ಷ ಪ್ರಕಾಶ ಹಿರೇಮಠ, ಕಾರ್ಯದರ್ಶಿ ಗುರುರಾಜ ಚಂದ್ರಕೇರ, ಖಜಾಂಚಿ ವಿಶ್ವನಾಥ ಜುಮನಾಳ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಮಲ್ಲೇಶ ಕರಿಗಾರ, ತಾಲ್ಲೂಕು ಪಂಚಾಯಿತಿ ಇಒ ಮಲ್ಲಿಕಾರ್ಜುನ ಕೆ.ಎಂ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-22-1740004660

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.