ಹಾವೇರಿ: ‘ಜಿಲ್ಲೆಯಲ್ಲಿರುವ ಜಿಮ್ಗಳಲ್ಲಿ ಮಹಿಳೆಯರ ಸುರಕ್ಷತೆ ಹಾಗೂ ಭದ್ರತೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾ ಘಟಕದ ಪದಾಧಿಕಾರಿಗಳು, ಹಾವೇರಿ ಶಹರ ಠಾಣೆ ಇನ್ಸ್ಪೆಕ್ಟರ್ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

ನಗರದ ಹಳೇ ಪಿ.ಬಿ.ರಸ್ತೆಯಲ್ಲಿರುವ ಶಹರ ಠಾಣೆಗೆ ನಿಯೋಗದ ಮೂಲಕ ಭೇಟಿ ನೀಡಿದ ಪದಾಧಿಕಾರಿಗಳು, ಇನ್ಸ್ಪೆ್ಕ್ಟರ್ ಮೋತಿಲಾಲ್ ಪವಾರ ಅವರಿಗೆ ಮನವಿ ಪತ್ರ ನೀಡಿದರು. ‘ರಾಜ್ಯದ ಹಲವು ಜಿಮ್ಗಳಲ್ಲಿ ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ಶೋಷಣೆ, ಕಿರುಕುಳ ಹಾಗೂ ದೌರ್ಜನ್ಯಗಳು ನಡೆಯುತ್ತಿವೆ. ವ್ಯಾಯಾಮ ಕಲಿಸುವ ನೆಪದಲ್ಲಿ ಮಹಿಳೆಯರನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಹೀಗಾಗಿ, ಪ್ರತಿಯೊಂದು ಜಿಮ್ನಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಪದಾಧಿಕಾರಿಗಳು ಒತ್ತಾಯಿಸಿದರು.

‘ಜಿಮ್ಗಳಲ್ಲಿ ಅನುಚಿತ ವರ್ತನೆ ಘಟನೆಗಳು ಕಂಡುಬಂದರೆ, ಅಂಥ ಜಿಮ್ಗಳನ್ನು ಶಾಶ್ವತವಾಗಿ ಮುಚ್ಚಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು. ಬಿಜೆಪಿ ಮುಖಂಡರಾದ ವಿರುಪಾಕ್ಷಪ್ಪ ಬಳ್ಳಾರಿ, ಗವಿಸಿದ್ದಪ್ಪ ದ್ಯಾಮಣ್ಣವರ, ರೋಹಿಣಿ ಪಾಟೀಲ, ಕಿರನ ಕೊಳ್ಳಿ, ವಿಜಯಕುಮಾರ ಚಿನ್ನಿಕಟ್ಟಿ, ಜ್ಯೋತಿ ಸಾತೇನಹಳ್ಳಿ, ಅನುಪಮಾ ವಾಲಿಶೆಟ್ಟರ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-22-1278805432

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.