ಹಾವೇರಿ: ತಾಲ್ಲೂಕಿನ ಹಂದಿಗನೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಉಮೇಶ ದ್ಯಾವಣ್ಣನವರ (52) ಅವರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘ಹೊಸರಿತ್ತಿ ಗ್ರಾಮದಲ್ಲಿ ವಾಸವಿದ್ದ ಉಮೇಶ ಅವರು ಗುರುವಾರ ಬೆಳಿಗ್ಗೆ ವಿಷ ಕುಡಿದಿದ್ದರು. ಅಸ್ವಸ್ಥಗೊಂಡಿದ್ದ ಅವರನ್ನು ಹಾವೇರಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಯೇ ಅವರು ಮೃತಪಟ್ಟಿದ್ದಾರೆ’ ಎಂದು ಗುತ್ತಲ ಠಾಣೆ ಪೊಲೀಸರು ಹೇಳಿದರು.

‘ಉಮೇಶ ಅವರಿಗೆ ಇಬ್ಬರು ಪುತ್ರರಿದ್ದಾರೆ. ಆತ್ಮಹತ್ಯೆಗೆ ಕಾರಣವೇನು ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ. ಆತ್ಮಹತ್ಯೆ ಬಗ್ಗೆ ದೂರು ನೀಡುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ದೂರು ನೀಡಿದ ಬಳಿಕ, ಮರಣೋತ್ತರ ಪರೀಕ್ಷೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.