ಹಾವೇರಿ: ಹಾನಗಲ್ ತಾಲ್ಲೂಕಿನ ತಿಳವಳ್ಳಿಯಲ್ಲಿ ನಾಯಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ತಲೆಗೆ ತೀವ್ರ ಪೆಟ್ಟು ಬಿದ್ದು ಮಂಜುಳಾ ಭೀಮೋಜಿ ಮುಳಗುಂದ (36) ಎಂಬುವವರು ಮೃತಪಟ್ಟಿರುವ ಬಗ್ಗೆ ಆಡೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಫೆ. 14ರಂದು ನಡೆದಿರುವ ಅಪಘಾತದಲ್ಲಿ ಗಾಯಗೊಂಡಿದ್ದ ಮಂಜುಳಾ, ಹುಬ್ಬಳ್ಳಿಯ ಆಸ್ಪತ್ರೆಯಲ್ಲಿ ಫೆ. 19ರಂದು ಮೃತಪಟ್ಟಿದ್ದಾರೆ. ಅತೀ ವೇಗ ಹಾಗೂ ಅಜಾಗರೂಕತೆ ಚಾಲನೆ ಆರೋಪದಡಿ ಪತಿ ಭೀಮೋಜಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಭೀಮೋಜಿಯವರು ಟಿವಿಎಸ್ ಎಕ್ಸೆಲ್ ದ್ವಿಚಕ್ರ ವಾಹನದ ಹಿಂಬದಿಯಲ್ಲಿ ಮಂಜುಳಾ ಅವರನ್ನು ಕೂರಿಸಿಕೊಂಡು ಔಷಧ ಅಂಗಡಿಗೆ ಹೊರಟಿದ್ದರು. ಮಾರ್ಗಮಧ್ಯೆ ನಾಯಿಗೆ ವಾಹನ ಡಿಕ್ಕಿಯಾಗಿತ್ತು. ನಾಯಿ ಸ್ಥಳದಿಂದ ಓಡಿ ಹೋಗಿದ್ದು, ರಸ್ತೆಯಲ್ಲಿಯೇ ದ್ವಿಚಕ್ರ ವಾಹನ ಉರುಳಿಬಿದ್ದು, ಮಂಜುಳಾ ಅವರ ತಲೆಗೆ ತೀವ್ರ ಪೆಟ್ಟಾಗಿತ್ತು. ಅವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ಕರೆದೊಯ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.