ಹಾವೇರಿ: ನಗರದ ಯಾಲಕ್ಕಿ ಓಣಿಯಲ್ಲಿರುವ ಹರಸೂರು ಬಣ್ಣದ ಮಠದ ಜಾತ್ರಾ ಮಹೋತ್ಸವಕ್ಕೆ ಶನಿವಾರ ಚಾಲನೆ ನೀಡಲಾಗಿದ್ದು, ಮೇ 4ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

ಮಠದ ಆವರಣದಲ್ಲಿ ಶನಿವಾರ ಬೆಳಿಗ್ಗೆ ಜಾತ್ರಾ ಮಹೋತ್ಸವ ನಿಮಿತ್ತ ಗೌರಿಮಠದ ಶಿವಯೋಗಿ ಶಿವಾಚಾರ್ಯರ ಸಮ್ಮುಖದಲ್ಲಿ ಜಗದ್ಗುರು ಪಂಚಾಚಾರ್ಯ ಧ್ವಜಾರೋಹಣ ನೆರವೇರಿತು. ಮಠದ ಪೀಠಾಧ್ಯಕ್ಷ ಅಭಿನವರುದ್ರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಹಾಜರಿದ್ದರು.

ಪ್ರಕಾಶ್ ಮುಂಜೋಜಿ, ಬಸವರಾಜ ಜಾಬಿನ್, ವೀರಣ್ಣ ಪಾಟೀಲ ಶ್ರೀ ಮಲ್ಲಿಕಾರ್ಜುನ್ ಕಟ್ಟಿಮನಿ, ಮಂಜುನಾಥ ತಾಂಡೂರ, ಬಸವರಾಜ್ ಹಲಗಣ್ಣವರ, ಮಮತಾ ಜಾಬಿನ್, ಸೌಭಾಗ್ಯ ಹಿರೇಮಠ, ಗಿರೀಜಾ ಸಾತೇನಹಳ್ಳಿ ಹಾಗೂ ಇತರರು ಪಾಲ್ಗೊಂಡಿದ್ದರು.

ಜನಜಾಗೃತಿ ಭಾವೈಕ್ಯ ಧರ್ಮ ಸಭೆ ಇಂದು: ಮೇ. 3ರ ಬೆಳಿಗ್ಗೆ 6.30 ಗಂಟೆಗೆ ವೀರಮಾಹೇಶ್ವರ ವಟುಗಳಿಗೆ ಶಿವದೀಕ್ಷೆ (ಅಯ್ಯಚಾರ) ಕಾರ್ಯಕ್ರಮ ಜರುಗಲಿದೆ. ಸಂಜೆ 6.30ಕ್ಕೆ ಜನ ಜಾಗೃತಿ ಭಾವೈಕ್ಯ ಧರ್ಮ ಸಮಾರಂಭ ನಡೆಯಲಿದೆ. ಹುಕ್ಕೇರಿಮಠದ ಸದಾಶಿವ ಸ್ವಾಮೀಜಿಯವರು ಸಭೆಯ ಸಾನ್ನಿಧ್ಯ ವಹಿಸಲಿದ್ದಾರೆ. ಗೌರಿಮಠದ ಶಿವಯೋಗಿ ಶಿವಾಚಾರ್ಯರು ಸಮ್ಮುಖ ವಹಿಸಲಿದ್ದಾರೆ. ಶಾಸಕ ರುದ್ರಪ್ಪ ಲಮಾಣಿ ಸಮಾರಂಭ ಉದ್ಘಾಟಿಸಲಿದ್ದಾರೆ. ಮಾಜಿ ಶಾಸಕ ನೆಹರು ಓಲೇಕಾರ, ಎಂ.ಎಂ ಹಿರೇಮಠ, ಸಂಜೀವಕುಮಾರ ನೀರಲಗಿ, ಎಸ್.ಎಫ್.ಎನ್. ಗಾಜೀಗೌಡ್ರ, ಕೊಟ್ರೇಶಪ್ಪ ಬಸೇಗಣ್ಣಿ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.

ಮೇ. 4ರಂದು ಬೆಳಿಗ್ಗೆ 7 ಗಂಟೆಗೆ ಸಂತಾನ ಪ್ರಾಪ್ತಿ, ವಿವಾಹ ಭಾಗ್ಯ, ಸರ್ಪದೋಷ, ಕಾಳಸರ್ಪ ದೋಷ ನಿವಾರಣೆಗಾಗಿ ಸರ್ಪಶಾಂತಿ-ಆಶ್ಲೇಷ ಬಲಿಪೂಜೆ ಹೋಮ ನಡೆಯಲಿದೆ.

ಆಸಕ್ತರು ಹೆಸರು ನೋಂದಾಯಿಸಬಹುದು. ನಂತರ, ಅಭಿನವರುದ್ರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿಗಳ ಪಟ್ಟಾಧಿಕಾರ ವರ್ಧಂತಿ ಮಹೋತ್ಸವ ನಡೆಯಲಿದೆ.

ಸಂಜೆ ಜನಜಾಗೃತಿ ಭಾವೈಕ್ಯ ಧರ್ಮ ಸಮಾರಂಭ ನಡೆಯಲಿದ್ದು, ನೆಗಳೂರಿನ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ, ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ, ಗವಿಸಿದ್ದಪ್ಪ ದ್ಯಾಮಣ್ಣನವರ, ಪವನಬಹದ್ದೂರ ದೇಸಾಯಿ, ಮಲ್ಲಿಕಾರ್ಜುನ ಕಟ್ಟಿಮನಿ, ವೆಂಕಟೇಶ ನಾರಾಯಣಿ, ಶಶಿಕಲಾ ರಾಮು ಮಾಳಗಿ ಇತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-22-1424250025

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.