ಹಾವೇರಿ: ಜಿಲ್ಲೆಯಾದ್ಯಂತ ಕೆಲ ದಿನಗಳಿಂದ ಬಿಡುವು ನೀಡುತ್ತಲೇ ಗುಡುಗು–ಸಿಡಿಲು ಸಹಿತವಾಗಿ ಜೋರು ಮಳೆ ಸುರಿಯುತ್ತಿದೆ. ಭಾನುವಾರ (ಮೇ 17) ಬೆಳಿಗ್ಗೆ 8.30 ಗಂಟೆಯಿಂದ ಸೋಮವಾರ (ಮೇ 18) ಬೆಳಿಗ್ಗೆ 8.30 ಗಂಟೆಯವರೆಗೆ ವಾಡಿಕೆಗಿಂತಲೂ ಶೇ 528.57ರಷ್ಟು ಹೆಚ್ಚಿನ ಪ್ರಮಾಣದ ಮಳೆಯಾಗಿದೆ.

ಜಿಲ್ಲೆಯಲ್ಲಿ ಪೂರ್ವ ಮುಂಗಾರು ಉತ್ತಮ ರೀತಿಯಲ್ಲಿ ಆರಂಭಗೊಂಡಿದ್ದು, ಇನ್ನು ಹಲವು ದಿನಗಳವರೆಗೆ ಮಳೆ ಮುಂದುವರಿಯುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ಭಾನುವಾರ 0.21 ಸೆಂ.ಮೀ ವಾಡಿಕೆ ಮಳೆಯಾಗಬೇಕಿತ್ತು. ಆದರೆ, 24 ಗಂಟೆಯ ಅವಧಿಯಲ್ಲಿ 1.32 ಸೆಂ.ಮೀ ಮಳೆಯಾಗಿದೆ. ವಾಡಿಕೆಗಿಂತ ಶೇ 528.57ರಷ್ಟು ಹೆಚ್ಚುವರಿ ಮಳೆಯಾಗಿದ್ದು, ಜಿಲ್ಲೆಯ ಹಲವು ಕಡೆಗಳಲ್ಲಿ ಅವಘಡಗಳೂ ಸಂಭವಿಸಿವೆ.

‘ಮಾರ್ಚ್ 1ರಿಂದ ಜಿಲ್ಲೆಯಾದ್ಯಂತ ಪೂರ್ವ ಮುಂಗಾರು ಶುರುವಾಗಿದೆ. ಮಾ 1ರಿಂದ ಮೇ 18ರ ವರೆಗೆ ವಾಡಿಕೆಗಿಂತ ಶೇ 42.71ರಷ್ಟು ಹೆಚ್ಚಿನ ಮಳೆಯಾಗಿದೆ. ಮೇ 12ರಿಂದ 18ರ ವರೆಗೆ 1.59 ಸೆಂ.ಮೀ. ವಾಡಿಕೆ ಮಳೆಯಿತ್ತು. ಆದರೆ, 4.96ರಷ್ಟು ಮಳೆಯಾಗಿದೆ. ಶೇ 211.95ರಷ್ಟು ಹೆಚ್ಚುವರಿ ಮಳೆಯಾದಂತಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ.

ಬ್ಯಾಡಗಿ ತಾಲ್ಲೂಕಿನಲ್ಲಿ ಅತೀ ಹೆಚ್ಚು ಮಳೆ: ಜಿಲ್ಲೆಯ ತಾಲ್ಲೂಕುವಾರು ಅಂಕಿ–ಅಂಶಗಳನ್ನು ಗಮನಿಸಿದರೆ, ಮೇ 12ರಿಂದ ಮೇ 18ರವರೆಗೆ ಬ್ಯಾಡಗಿ ತಾಲ್ಲೂಕಿನಲ್ಲಿ ಅತೀ ಹೆಚ್ಚು ಮಳೆಯಾಗಿದೆ. ನಂತರದ ಸ್ಥಾನದಲ್ಲಿ, ಹಾನಗಲ್ ಹಾಗೂ ಹಾವೇರಿ ತಾಲ್ಲೂಕುಗಳಿವೆ. ಅಲ್ಲಿಯೂ ಉತ್ತಮ ಮಳೆಯಾಗಿದೆ. ರಟ್ಟೀಹಳ್ಳಿ ತಾಲ್ಲೂಕಿನಲ್ಲೂ ಉತ್ತಮ ಮಳೆಯಾಗಿದ್ದು, ಇತರೆ ತಾಲ್ಲೂಕುಗಳ ಪೈಕಿ ಕೊನೆಯ ಸ್ಥಾನದಲ್ಲಿದೆ.

127 ಮನೆಗಳಿಗೆ ಹಾನಿ: ‘ಅಕಾಲಿಕ ಮಳೆಯಿಂದಾಗಿ ಜಿಲ್ಲೆಯ 127 ಮನೆಗಳಿಗೆ ಹಾನಿಯಾಗಿದೆ. ಪರಿಹಾರ ಕೋರಿ ಮನೆಯ ಮಾಲೀಕರು ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಪೈಕಿ 13 ಅರ್ಜಿಗಳನ್ನು ಈಗಾಗಲೇ ತಿರಸ್ಕರಿಸಲಾಗಿದೆ. 114 ಮನೆಗಳ ಪರಿಶೀಲನೆ ಬಾಕಿಯಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ.

ಸಿಡಿಲು ಬಡಿದು ಜಾನುವಾರು ಸಾವು: ರಾಣೆಬೆನ್ನೂರು ತಾಲ್ಲೂಕಿನ ಕೂನಬೇವು ಗ್ರಾಮದಲ್ಲಿ ಭಾನುವಾರ (ಮೇ 17) ಮಳೆ ಸುರಿದ ಸಂದರ್ಭದಲ್ಲಿ ಸಿಡಿಲು ಬಡಿದು ಎತ್ತು ಮೃತಪಟ್ಟಿದೆ. ಹಿರೇಕೆರೂರು ತಾಲ್ಲೂಕಿನ ಕೊಡ ಗ್ರಾಮದಲ್ಲಿ ಮೇ 16ರಂದು ಸಿಡಿಲು ಬಡಿದು ಹಸು ಮೃತಪಟ್ಟಿದೆ.

20.06 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿ: ಜಿಲ್ಲೆಯಾದ್ಯಂತ ಸುರಿದ ಅಕಾಲಿಕ ಮಳೆಯಿಂದಾಗಿ 20.06 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಕಲ್ಲಂಗಡಿ, ಪಪ್ಪಾಯಿ, ಬಿನ್ಸ್, ಬಾಳೆ, ಮೆಣಸಿನಕಾಯಿ, ಸೌತೆಕಾಯಿ, ಟೊಮೆಟೊ, ಹಿರೇಕಾಯಿ ಬೆಳೆಗಳಿಗೆ ಹಾನಿಯಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-22-1259398509

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.