ಹಾವೇರಿ: ‘ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 5 ವರ್ಷದ ಬಾಲಕ ಚಾಂದ್ ಪೀರ್ ದೊಡ್ಡಮನಿ ಎಂಬಾತ, ಜಿಲ್ಲಾಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದಾಗಿ ಕೋಮಾ ಸ್ಥಿತಿಯಲ್ಲಿದ್ದಾನೆ. ಬಾಲಕನ ಜೀವಕ್ಕೆ ಕುತ್ತು ಬರಲು ವೈದ್ಯರ ನಿಷ್ಕಾಳಜಿಯೇ ಕಾರಣ’ ಎಂದು ಆರೋಪಿಸಿ ಬಾಲಕನ ಕುಟುಂಬಸ್ಥರು ಹಾಗೂ ಸಂಬಂಧಿಕರು ಮಂಗಳವಾರ ದಿಢೀರ್ ಪ್ರತಿಭಟನೆ ನಡೆಸಿದರು.

ನಗರದ ಕಾಗಿನೆಲೆ ರಸ್ತೆಯಲ್ಲಿರುವ ಜಿಲ್ಲಾಸ್ಪತ್ರೆಯ ಹೊರ ರೋಗಿಗಳ ವಿಭಾಗದ ಎದುರು ಸೇರಿದ್ದ ಪ್ರತಿಭಟನಕಾರರು, ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಘೋಷಣೆ ಕೂಗಿದರು. ‘ಬಾಲಕನಿಗೆ ಎದುರಾಗಿರುವ ಸ್ಥಿತಿಗೆ ಕಾರಣ ಯಾರು ಎಂಬುದನ್ನು ಪತ್ತೆ ಮಾಡಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ರಾಣೆಬೆನ್ನೂರು ತಾಲ್ಲೂಕಿನ ಚಾಂದ್ ಪೀರ್ ದೊಡ್ಡಮನಿಯ (5) ತಂದೆ ಹಲವು ವರ್ಷಗಳ ಹಿಂದೆಯೇ ಮೃತಪಟ್ಟಿದ್ದಾರೆ. ಅಂಗವಿಕಲರಾಗಿರುವ ತಾಯಿಯೇ ಚಾಂದ್ಪೀರ್ನನ್ನು ಸಾಕುತ್ತಿದ್ದಾರೆ. ಚಾಂದ್ಪೀರ್ ಹಲವು ತಿಂಗಳಿನಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ. ಜಿಲ್ಲಾಸ್ಪತ್ರೆಯಲ್ಲಿ ತಪಾಸಣೆ ನಡೆಸಿದಾಗ, ಹರ್ನಿಯಾ ಶಸ್ತ್ರಚಿಕಿತ್ಸೆ ಮಾಡಿಸಬೇಕೆಂದು ವೈದ್ಯರು ಸಲಹೆ ನೀಡಿದ್ದರು. ಅದಕ್ಕೆ ಒಪ್ಪಿದ್ದ ತಾಯಿ, ಏಪ್ರಿಲ್ 3ರಂದು ಮಗನನ್ನು ಬಸ್ನಲ್ಲಿ ಕರೆದುಕೊಂಡು ಬಂದು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು’ ಎಂದು ಪ್ರತಿಭಟನಾನಿರತರು ಹೇಳಿದರು.

‘ಬಾಲಕನ ಆರೋಗ್ಯ ಸ್ಥಿತಿಗತಿ ಬಗ್ಗೆ ತಿಳಿದುಕೊಂಡಿದ್ದ ವೈದ್ಯರು, ಹರ್ನಿಯಾ ಶಸ್ತ್ರಚಿಕಿತ್ಸೆ ಮಾಡಿ ಮುಗಿಸಿದ್ದರು. ಶಸ್ತ್ರಚಿಕಿತ್ಸೆಯ ನಂತರ ಬಾಲಕನಿಗೆ ಪ್ರಜ್ಞೆ ಬಂದಿರಲಿಲ್ಲ. ಎರಡು ದಿನ ನಿರಂತರವಾಗಿ ಚಿಕಿತ್ಸೆ ನೀಡಿದರೂ ಕಣ್ಣು ತೆರೆದಿರಲಿಲ್ಲ. ‘ಬಾಲಕನ ಆರೋಗ್ಯದ ಸಮಸ್ಯೆ ಬಿಗಡಾಯಿಸಿದೆ. ಈತನನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ಕರೆದೊಯ್ಯಿರಿ’ ಎಂದು ವೈದ್ಯರು ಸಲಹೆ ನೀಡಿದ್ದರು’ ಎಂದು ತಿಳಿಸಿದರು.

‘ಬಾಲಕನ ಜೀವ ಉಳಿದರೆ ಸಾಕು’ ಎಂಬ ಭಾವನೆಯಿಂದ ತಾಯಿಯೇ ಮಗನನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದರು. ಲಕ್ಷಾಂತರ ರೂಪಾಯಿ ಖರ್ಚು ಮಾಡಿದರೂ ಬಾಲಕನಿಗೆ ಪ್ರಜ್ಞೆ ಬಂದಿಲ್ಲ. ಆಸ್ಪತ್ರೆಯ ಶುಲ್ಕ ಹೆಚ್ಚಾಗಿದ್ದರಿಂದಾಗಿ, ಅದನ್ನು ಹೊಂದಿಸಲು ತಾಯಿಗೆ ಸಾಧ್ಯವಾಗಿಲ್ಲ. ಹೀಗಾಗಿ, ಬಾಲಕನನ್ನು ಹುಬ್ಬಳ್ಳಿಯ ಕೆಎಂ–ಸಿಆರ್ಐ ಆಸ್ಪತ್ರೆಗೆ (ಕಿಮ್ಸ್) ದಾಖಲಿಸಿದ್ದಾರೆ. ಆದರೆ, ಇಂದಿಗೂ ಬಾಲಕನಿಗೆ ಪ್ರಜ್ಞೆ ಬಂದಿಲ್ಲ. ಶಸ್ತ್ರಚಿಕಿತ್ಸೆ ಮಾಡಿರುವ ವೈದ್ಯರು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯವೇ ಬಾಲಕನ ಸ್ಥಿತಿಗೆ ಕಾರಣವೆಂದು ಕೆಎಂ–ಸಿಆರ್ಐ ಆಸ್ಪತ್ರೆಯ ವೈದ್ಯರು ಹೇಳುತ್ತಿದ್ದಾರೆ’ ಎಂದು ಪ್ರತಿಭಟನಕಾರರು ಮಾಹಿತಿ ನೀಡಿದರು.

ಜೀವಕ್ಕೆ ಕುತ್ತು: ‘ಹಾವೇರಿ ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ, ಬಾಲಕ ಇಂದು ಕೋಮಾ ಸ್ಥಿತಿಯಲ್ಲಿದ್ದಾನೆ. ಆತನ ಜೀವಕ್ಕೆ ಕುತ್ತು ಬಂದಿದೆ. ಬದುಕುವ ಸಾಧ್ಯತೆ ಕಡಿಮೆ ಇರುವುದಾಗಿ ವೈದ್ಯರು ಹೇಳುತ್ತಿದ್ದಾರೆ’ ಎಂದು ಪ್ರತಿಭಟನಕಾರರು ಅಳಲು ತೋಡಿಕೊಂಡರು.

‘ಈ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ವೈದ್ಯರು–ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಸರ್ಕಾರವೇ ಬಾಲಕನ ನೆರವಿಗೆ ಬಂದು, ಆತನಿಗೆ ಅಗತ್ಯವಿರುವ ಚಿಕಿತ್ಸೆ ಕೊಡಿಸಬೇಕು. ಬಾಲಕನ ಕುಟುಂಬಕ್ಕೂ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು. ಸಂಬಂಧಿ ಜಮಾಲಸಾಬ ಬಿಕರಿ, ಆಮ್ ಆದ್ಮಿ ಪಕ್ಷದ ಮುಖಂಡ ಎಂ.ಎನ್. ನಾಯಕ, ಶಿವಪ್ಪ ತುಪ್ಪದ ಹಾಗೂ ಇತರರು ಪ್ರತಿಭಟನೆಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-22-1963070011

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.