ಭಾನುವಾರ, ಜನವರಿ 19, 2020
29 °C

‘ನಾನೂ ಸಚಿವ ಸ್ಥಾನದ ಆಕಾಂಕ್ಷಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: ಬಿಜೆಪಿ ಸರ್ಕಾರದಲ್ಲಿ ನಾನೂ ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದೇನೆ ಎಂದು ಶಾಸಕ ನೆಹರು ಓಲೇಕಾರ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ನಾನು ಮೂರು ಬಾರಿ ಗೆದ್ದಿದ್ದೇನೆ. ಈ ಬಾರಿ ಸಚಿವನಾಗುವ ಅವಕಾಶ ಸಿಗುತ್ತದೆ ಎಂಬ ನಿರೀಕ್ಷೆ ಇದೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಸಮಾಲೋಚನೆ ನಡೆಸಿದ್ದು, ಅವರು ಭರವಸೆಯನ್ನು ನೀಡಿದ್ದಾರೆ ಎಂದರು.

ಎರಡು ಬಾರಿ ಎಸ್ಸಿ ಎಸ್ಟಿ ಆಯೋಗದ ಅಧ್ಯಕ್ಷನಾಗಿ ಕೆಲಸ ಮಾಡಿದ ಅನುಭವವಿದೆ. ಸಚಿವ ಸ್ಥಾನ ನೀಡಿದರೆ ಆ ಇಲಾಖೆಯ ಸಮಸ್ಯೆ ನಿವಾರಿಸಿ, ಅಭಿವೃದ್ಧಿಗೆ ಒತ್ತು ನೀಡುತ್ತೇನೆ ಎಂದರು.

ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿ ಯಾವುದೇ ಗೊಂದಲವಿಲ್ಲ. ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವಂತೆ ರಾಜಕೀಯ ಪಕ್ಷಗಳು ಕುಮ್ಮಕ್ಕು ನೀಡುತ್ತಿವೆ. ಈ ಕಾಯ್ದೆಯಿಂದ ಯಾರಿಗೂ ತೊಂದರೆಯಾಗುವುದಿಲ್ಲ ಎಂದು ಹೇಳಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು