ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಹಿತಿ ಸಂಪರ್ಕ ಕೇಂದ್ರ ಆರಂಭ

Last Updated 15 ಫೆಬ್ರುವರಿ 2020, 13:46 IST
ಅಕ್ಷರ ಗಾತ್ರ

ಹಾವೇರಿ: ಕೆ.ಎಲ್‌.ಇ ಆಸ್ಪತ್ರೆಯಲ್ಲಿ ಲಭ್ಯವಿರುವ ಚಿಕಿತ್ಸೆಗಳ ಬಗ್ಗೆ ಮಾಹಿತಿ ಹಾಗೂ ಸಂಪರ್ಕ ಕಲ್ಪಿಸುವ ಕೇಂದ್ರವನ್ನು ನಗರದ ಪಂಡಿತ ಆಸ್ಪತ್ರೆಯಲ್ಲಿ ಆರಂಭಿಸಲಾಗಿದೆ ಎಂದು ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ ಹೇಳಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮಾಹಿತಿ ಹಾಗೂ ಸಂಪರ್ಕ ಕೇಂದ್ರಕ್ಕೆ ಮೂತ್ರಪಿಂಡ, ಹೃದಯ, ಕರಳು ಕಸಿ ಮಾಡುವ ಬಗ್ಗೆ ಚಿಕಿತ್ಸೆ ನೀಡಲಾಗುತ್ತದೆ. ಇಲ್ಲಿ ನುರಿತ ವೈದ್ಯರು ಬಂದು ಚಿಕಿತ್ಸೆ ನೀಡಲಿದ್ದಾರೆ. ಶಸ್ತ್ರ ಚಿಕಿತ್ಸೆ ಅವಶ್ಯಕತೆ ಇದ್ದರೇ, ರೋಗಿಯನ್ನು ಉಚಿತವಾಗಿ ಕರೆದುಕೊಂಡು ಹೋಗಲಾಗುವುದುಎಂದರು.

ಹುಬ್ಬಳ್ಳಿಯ ಮೂರುಸಾವಿರ ಮಠದವರು ಆಸ್ಪತ್ರೆ ನಿರ್ಮಾಣಕ್ಕೆ ಜಾಗವನ್ನು ನೀಡಿದ್ದಾರೆ. ಮುಂದಿನ ಮೂರು ರಿಂದ ನಾಲ್ಕು ತಿಂಗಳಲ್ಲಿ ₹600 ಕೋಟಿ ವೆಚ್ಚದಲ್ಲಿ 500 ಹಾಸಿಗೆಯ ಸೂಪರ್‌ ಸ್ಪೆಷಲಿಸ್ಟ್‌ ಆಸ್ಪತ್ರೆ ನಿರ್ಮಿಸಲಾಗುವುದು. ಇನ್ವೇಸ್ಟ್‌ಕರ್ನಾಟಕದಲ್ಲಿ ಈ ಯೋಜನೆಯನ್ನು ಇಡಲಾಗಿದೆ ಎಂದರು.

ಬೆಳಗಾವಿಯಲ್ಲಿ ಕ್ಯಾನ್ಸರ್‌ ಆಸ್ಪತ್ರೆ: ಕ್ಯಾನ್ಸರ್‌ಗೆ ಚಿಕಿತ್ಸೆ ಇದೆ. ಅದಕ್ಕಾಗಿ ಬೆಳಗಾವಿಯಲ್ಲಿ 250 ಹಾಸಿಗೆಯ ಕ್ಯಾನ್ಸರ್‌ ಆಸ್ಪತ್ರೆ ಹಾಗೂ ಹೋಮಿಯೋಪತಿಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದರು.

ಸಂಸದ ಶಿವಕುಮಾರ ಉದಾಸಿ ಮಾತನಾಡಿ, ಯಾವುದೇ ಕಾಯಿಲೆಗೆ ಚಿಕಿತ್ಸೆ ಪಡೆಯಬೇಕೆಂದರೆ ಮಂಗಳೂರು, ಬೆಂಗಳೂರಿಗೆ ಹೋಗುತ್ತಿದ್ದಾರೆ. ಇನ್ನು ಮುಂದೆ ಸಾರ್ವಜನಿಕರು ಇಲ್ಲಿಗೆ ಬರುವ ವೈದ್ಯರಿಂದ ಚಿಕಿತ್ಸೆ ಪಡೆಯಬಹುದಾಗಿದೆ ಎಂದರು.

ಶಾಸಕ ನೆಹರು ಓಲೇಕಾರ, ಶಂಕ್ರಣ್ಣ ಮುನವಳ್ಳಿ, ಡಾ. ವಿ. ಎಸ್. ಸಾಧುನವರ, ಎಸ್. ಸಿ. ಮೆಟಗುಡ್ಡ, ಬಿ. ಎಸ್. ತಟವಟಿ, ಕೆ.ಎಲ್.ಇ. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಎಂ. ವಿ. ಜಾಲಿ, ಡೈರೆಕ್ಟರ್ ಕ್ಲಿನಿಕಲ್ ಸರ್ವಿಸಸ್‍ನ ಡಾ.ಆರ್. ಬಿ. ನೇರ್ಲಿ, ಡಾ.ಸುದೀಪ ಪಂಡಿತ, ಡಾ.ಅಂಜು ಪಂಡಿತ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT