ಹಾವೇರಿ: ‘ಮಾನಸಿಕ ರೋಗಿಗಳನ್ನು ಹುಚ್ಚ ಎಂದು ಕರೆಯುವುದು ಸರಿಯಲ್ಲ. ಅವರೊಂದಿಗೆ ಸೌಜನ್ಯದಿಂದ ವರ್ತಿಸಬೇಕು’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಿರಾದಾರ ದೇವೇಂದ್ರಪ್ಪ ಎನ್ ಹೇಳಿದರು.

ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಆರೋಗ್ಯ ಇಲಾಖೆ ಸಹಯೋಗದಲ್ಲಿ ‘ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ’ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ‘ವಾಕ್ಥಾನ್’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಮಾನಸಿಕ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸಬಹುದಾಗಿದೆ. ನಾವೆಲ್ಲರೂ ಜವಾಬ್ದಾರಿಯುತ ಪ್ರಜೆಗಳಾಗಿದ್ದು, ಸಮಾಜದ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸುವುದು ನಮ್ಮ ಕರ್ತವ್ಯವಾಗಿದೆ. ಮಾನಸಿಕ ರೋಗಿಗಳಿಗೂ ಒಂದು ಬದುಕಿದೆ. ಅದನ್ನು ನಾವು ಅರಿತುಕೊಳ್ಳಬೇಕು’ ಎಂದರು.

ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆಗಿರುವ ನ್ಯಾಯಾಧೀಶರಾದ ಶ್ರೀಶೈಲಜಾ ಎಚ್.ವಿ., ಜಿಲ್ಲಾ ಪಂಚಾಯಿತಿ ಸಿಇಒ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ಎಸ್ಪಿ ಯಶೋಧಾ ಒಂಟಗೋಡಿ, ಜಿಲ್ಲಾ ಆರೋಗ್ಯಾಧಿಕಾರಿ (ಪ್ರಭಾರ) ಡಾ. ಎಂ. ಜಯಾನಂದ, ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ. ಪ್ರವೀಣಕುಮಾರ ಎಂ.ವಿ., ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಪಿ.ಆರ್. ಹಾವನೂರ, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ. ನೀಲೇಶ ಎನ್., ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ. ಸರಿತಾ, ಡಾ. ಚನ್ನಬಸಯ್ಯ ವಿರಕ್ತಮಠ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರು, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಮನೋವೈದ್ಯೆ ಡಾ. ಶೃತಿ ಎ., ಸರ್ಕಾರಿ ಶ್ರೂಶುಷಾ ಕಾಲೇಜ್ ಪ್ರಾಂಶುಪಾಲರಾದ ಸರಸ್ವತಿ ವೈ.ಎಚ್., ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಉಮೇಶ ಕರಮುಡಿ, ಅಬಕಾರಿ ಇಲಾಖೆ ಅಧಿಕಾರಿ ಬಸವರಾಜ ಮಾದರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.