ಹಾವೇರಿ: ಇಲ್ಲಿಯ ಕ.ವಿ.ಪ್ರ.ನಿ. ನೌಕರರ ಸಂಘದ (ಕೆ.ಇ.ಬಿ) ಸಭಾಭವನದಲ್ಲಿ ಹಾವೇರಿ ತಾಲ್ಲೂಕು ಶ್ರೀ ಕನಕ ನೌಕರರ ಸಂಘದ ವತಿಯಿಂದ ಅಕ್ಟೋಬರ್ 12ರಂದು ಬೆಳಿಗ್ಗೆ 11 ಗಂಟೆಗೆ ‘ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ–2025’ ಸಮಾರಂಭ ಜರುಗಲಿದೆ.

ಭಕ್ತಶ್ರೇಷ್ಠ ಕನಕದಾಸರ 538ನೇ ಜಯಂತ್ಯುತ್ಸವ ಅಂಗವಾಗಿ ಈ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಅವರು ಸಮಾರಂಭ ಉದ್ಘಾಟಿಸಲಿದ್ದಾರೆ.

ಹಾವೇರಿ ತಾಲ್ಲೂಕು ಶ್ರೀ ಕನಕ ನೌಕರರ ಸಂಘದ ಅಧ್ಯಕ್ಷ ಎಸ್.ಎನ್. ಕಂಬಳಿ ಅವರು ಅಧ್ಯಕ್ಷತೆ ವಹಿಸಲಿದ್ದು, ಶಾಸಕ ರುದ್ರಪ್ಪ ಲಮಾಣಿ ಭಾಗವಹಿಸಲಿದ್ದಾರೆ. ಬೆಂಗಳೂರಿನ ಇನ್ಸೈಟ್ಸ್ ಐಎಎಸ್ ತರಬೇತಿ ಸಂಸ್ಥೆಯ ಸಂಸ್ಥಾಪಕ ವಿನಯಕುಮಾರ ಜಿ.ಬಿ. ಅವರು ಉಪನ್ಯಾಸ ನೀಡಲಿದ್ದಾರೆ.

ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜೀಗೌಡ್ರ, ಜಿಲ್ಲಾ ಹೆಚ್ಚುವರಿ ಎಸ್.ಪಿ. ಎಲ್.ವೈ. ಶಿರಕೋಳ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ನಿಂಗನಗೌಡ ಪಾಟೀಲ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ. ಮಲ್ಲಿಕಾರ್ಜುನ, ಸಂಘದ ಮಹಾಪೋಷಕ ವಿಜಯಕುಮಾರ ಮುದಕಣ್ಣನವರ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ನುಗ್ಗಲಿ, ಹಾವೇರಿ ಹಿಮ್ಸ್ ಆಡಳಿತಾಧಿಕಾರಿ ಚನ್ನಪ್ಪ ಎಚ್.ಬಿ., ತಹಶೀಲ್ದಾರ್ರಾದ ಕೆ. ಶರಣಮ್ಮ, ರೇಣುಕಾ ಎಸ್.ಕೆ., ಯಲ್ಲಪ್ಪ ಗೋಣೆಣ್ಣನವರ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲೇಶ ಕರಿಗಾರ, ಡಾ. ಪರಸಪ್ಪ ಚುರ್ಚಿಹಾಳ, ಡಾ. ರಾಘವೇಂದ್ರ ಜಿಗಳಿಕೊಪ್ಪ, ಅಶೋಕ ಭೀಮನಹಳ್ಳಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಸ್.ಜಿ. ಕೋಟಿ, ಎಚ್.ಎಂ. ಪಡ್ನೇಶಿ, ಪಿಎಸ್ಐಗಳಾದ ಡಿ. ರವಿಕುಮಾರ, ನಿಂಗರಾಜ ಕರಕಣ್ಣನವರ, ಭಾರತಿ ಕುರಿ, ಡಿ.ಎನ್. ಕೂಡಲ ಹಾಗೂ ಇತರರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.