ಬ್ಯಾಡಗಿ: ಇಂಗ್ಲಿಷ್ ಹಾಗೂ ಇನ್ನಿತರ ಭಾಷೆಗಳ ಪ್ರಭಾವಕ್ಕೆ ಒಳಗಾಗಿ ಕನ್ನಡ ಮರೆಯಾಗುತ್ತಿರುವುದು ನೋವಿನ ಸಂಗತಿಯಾಗಿದೆ. ಕನ್ನಡದ ಉಳಿವಿಗಾಗಿ ನಾವೆಲ್ಲ ಒಂದಾಗಬೇಕಾಗಿದೆ ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಎಂ.ಜಗಾಪೂರ ಹೇಳಿದರು.

ಪಟ್ಟಣದಲ್ಲಿ ಕಸಾಪ 112ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೂರದೃಷ್ಟಿ, ಸಮಾನತೆ ಮತ್ತು ಅಭಿವೃದ್ಧಿ ಒಡೆಯರ ಅವರ ಸಾಧನೆಯಾಗಿದೆ ಎಂದರು.

ಕನ್ನಡ ನಾಡು, ನುಡಿ, ಸಾಹಿತ್ಯ ಹಅಗೂ ಸಂಸ್ಕೃತಿಯ ರಕ್ಷಣೆಗಾಗಿ ಜನ್ಮ ತಾಳಿದ ಪ್ರಾತಿನಿಧಿಕ ಸಂಸ್ಥೆ ‘ಕನ್ನಡ ಸಾಹಿತ್ಯ ಪರಿಷತ್‘ ಏಳುಕೋಟಿ ಕನ್ನಡಿಗರ ಭಾವನಾತ್ಮಕ ಕೇಂದ್ರವಾಗಿದೆ. ಒಂದು ಶತಮಾನಕ್ಕೂ ಅಧಿಕ ಇತಿಹಾಸ ಹೊಂದಿರುವ ಸಂಸ್ಥೆ ಮಹಾವೃಕ್ಷವಾಗಿ ಇಂದು ಬೆಳೆದಿದೆ ಎಂದು ಹೇಳಿದರು.

ಕಸಾಪ ನಿಕಟಪೂರ್ವ ಅಧ್ಯಕ್ಷ ಮಾಲತೇಶ ಅರಳಿಮಟ್ಟಿ ಮಾತನಾ ಡಿದರು. ಶಿಕ್ಷಕ ಮಾಲತೇಶ ಚಳಗೇರಿ ಪರಿಷತ್ ನಡೆದು ಬಂದ ದಾರಿಯ ಕುರಿತು ಉಪನ್ಯಾಸ ನೀಡಿದರು.

ಗೌರವ ಕಾರ್ಯದರ್ಶಿ ಎಸ್.ಬಿ.ಇಮ್ಮಡಿ, ಸಂಘಟನಾ ಕಾರ್ಯದರ್ಶಿ ರಾಜಶೇಖರ ಹೊಸಳ್ಳಿ, ಸಂಧ್ಯಾರಾಣಿ ದೇಶಪಾಂಡೆ, ಆನಂದ ಮುದುಕಮ್ಮ ನವರ, ಜೀವರಾಜ ಛತ್ರದ, ಎಂ.ಎ. ಪಠಾಣ, ಕೃಷ್ಣ ಬಡಿಗೇರ, ವಿ.ಎನ್.ಮಾಳಪ್ಪನವರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-22-1748278482

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.