ಹಾವೇರಿ: ‘ಕಾರ್ಮಿಕರಿಗೆ ಉಚಿತವಾಗಿ ನೀಡಲಾಗುವ ಕಿಟ್ಗಳ ಹಂಚಿಕೆಯಲ್ಲಿ ತಾರತಮ್ಯ ಉಂಟಾಗಿದೆ. ಅರ್ಹ ಕಾರ್ಮಿಕರು ಕಿಟ್ಗಳಿಂದ ವಂಚಿತರಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಇತ್ತೀಚೆಗೆ ಸೇರಿದ್ದ ಕಾರ್ಮಿಕರು, ತಮಗಾದ ಅನ್ಯಾಯದ ವಿರುದ್ಧ ಆಕ್ರೋಶ ಹೊರಹಾಕಿದರು. ಜಿಲ್ಲಾಡಳಿತದ ಅಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸಿದರು. ಕರುನಾಡ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘಟನೆಯ ವತಿಯಿಂದ ಸಾಂಕೇತಿಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

‘ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಉಚಿತವಾಗಿ ಕಿಟ್ಗಳನ್ನು ವಿತರಿಸಲಾಗುತ್ತಿದೆ. ಆದರೆ, ಹಾವೇರಿ ಜಿಲ್ಲೆಯಲ್ಲಿ ಅರ್ಹ ಕಾರ್ಮಿಕರಿಗೆ ಕಿಟ್ ಸಿಗುತ್ತಿಲ್ಲ. ಹಂಚಿಕೆಯಲ್ಲಿ ಸಾಕಷ್ಟು ತಾರತಮ್ಯವಾಗಿದೆ. ಇದನ್ನು ಪ್ರಶ್ನಿಸಲು ಕಾರ್ಮಿಕ ಇಲಾಖೆಯ ನಿರೀಕ್ಷಕರಾದ ಲತಾ ಟಿ.ಎಸ್. ಅವರ ಕಚೇರಿಗೆ ಹೋದರೆ, ಅವರು ಕಚೇರಿಯಲ್ಲಿ ಇರುವುದಿಲ್ಲ. ಕಚೇರಿಗೆ ಅಲೆದು ಅಲೆದು ಸಾಕಾಗಿದೆ’ ಎಂದು ಕಾರ್ಮಿಕರು ದೂರಿದರು.

‘ಕಿಟ್ಗಳ ಬಗ್ಗೆ ವಿಚಾರಿಸಲು ಲತಾ ಅವರಿಗೆ ಕರೆ ಮಾಡಿದರೆ, ಕಾರ್ಮಿಕರಿಗೇ ಬೆದರಿಕೆ ಹಾಕುತ್ತಿದ್ದಾರೆ. ‘ಯಾರಿಗೂ ಕಿಟ್ ಕೊಡುವುದಿಲ್ಲ. ನನಗೆ ಶಾಸಕರು ಹಾಗೂ ಅಧಿಕಾರಿಗಳ ಬೆಂಬಲವಿದೆ. ನೀವು ಏನು ಮಾಡಿಕೊಳ್ಳುತ್ತೀರೋ ಮಾಡಿಕೊಳ್ಳಿ’ ಎಂದು ಬೆದರಿಸುತ್ತಿದ್ದಾರೆ. ಇಲಾಖೆಯಲ್ಲಿ ಏಜೆಂಟರ ಮೂಲಕ ಅವ್ಯವಹಾರಗಳು ನಡೆಯುತ್ತಿವೆ. ಅರ್ಹ ಫಲಾನುಭವಿಗಳಿಗೆ ಮಂಡಳಿಯಿಂದ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ತನಿಖೆ ನಡೆಸಬೇಕು. ಅರ್ಹ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯ ಕೊಡಿಸಬೇಕು. ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡಬೇಕು’ ಎಂದು ಕಾರ್ಮಿಕರು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.