ಹಾವೇರಿ: ರಾಜ್ಯ ಮಟ್ಟದ ಕಂದಾಯ ಇಲಾಖೆಯ ಹಕ್ಕುಪತ್ರ ವಿತರಣಾ ಕಾರ್ಯಕ್ರಮ ಫೆ.13 ರಂದು ಹಾವೇರಿಯಲ್ಲಿ ಜರುಗಲಿದ್ದು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಯಾವುದೇ ಲೋಪದೋಷಗಳು ಉಂಟಾಗದಂತೆ ಕಾರ್ಯಕ್ರಮದ ಯಶಸ್ಸಿಗೆ ಎಲ್ಲ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಾವೇರಿ ನಗರದಲ್ಲಿ ಜರುಗಲಿರುವ ರಾಜ್ಯ ಮಟ್ಟದ ಕಂದಾಯ ಇಲಾಖೆಯ ಹಕ್ಕುಪತ್ರ ವಿತರಣಾ ಕಾರ್ಯಕ್ರಮ ಆಯೋಜನೆ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಿಧ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಕಂದಾಯ ಗ್ರಾಮಗಳ -20,186, ಇ-ಪೋಡಿ -7,825, ದರಖಾಸ್ತ್ ಪೋಡಿ- 502, ಪಿಎಂ.ಜಿ.ಎ- 1,675 ಹಾಗೂ ಬಗರಹುಕುಂ 16 ಸೇರಿದಂತೆ 30,204 ಹಕ್ಕುಪತ್ರಗಳನ್ನು ನೀಡಲಾಗುತ್ತಿದೆ. ಜಿಲ್ಲೆಯ ಫಲಾನುಭವಿಗಳು ಹಾಗೂ ಅವರ ಸಂಗಡಿಗರು ಸೇರಿ 60 ಸಾವಿರ ಜನರು ಭಾಗವಹಿಸುವ ಸಾಧ್ಯತೆ ಇದೆ. ಜಿಲ್ಲೆ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಅಂದಾಜು 1.20 ಲಕ್ಷ ಫಲಾನುಭವಿಗಳು
ಆಗಮಿಸುವ ಸಂಭವವಿದೆ. ಸುಗಮ ಸಂಚಾರ, ಫಲಾನುಭವಿಗಳಿಗೆ ಆಸನ, ಊಟ, ಕುಡಿಯುವ ನೀರು, ಶೌಚಾಲಯ, ಸ್ವಚ್ಛತೆ ಸೇರಿದಂತೆ ಮೂಲ ಸೌಕರ್ಯ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ: ವಸತಿ, ವೇದಿಕೆ ನಿರ್ಮಾಣ, ನಿರ್ವಹಣೆ, ಕುಡಿಯುವ ನೀರು, ವಾಹನ ನಿಲುಗಡೆ, ಹೆಲಿಪ್ಯಾಡ್ ವ್ಯವಸ್ಥೆ, ವಿ.ಐ.ಪಿ ವಾಹನಗಳ ಸಂಚಾರ ಹಾಗೂ ನಿಲುಗಡೆ, ಫಲಾನುಭವಿಗಳ ವಾಹನಗಳ ನಿಲುಗಡೆ, ಬಂದೋಬಸ್ತ್ ವಿದ್ಯುತ್, ತುರ್ತು ಆರೋಗ್ಯ ಚಿಕಿತ್ಸೆ ವ್ಯವಸ್ಥೆ ಸೇರಿದಂತೆ ವಿವಿಧ ಸಮಿತಿಗಳಿಗೆ ನಿಯೋಜಿಸಲಾದ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಹೇಳಿದರು.

ವೇದಿಕೆಯ ಪಕ್ಕದಲ್ಲಿ ಅಗ್ನಿಶಾಮಕ ವಾಹನ, ಅಂಬ್ಯುಲೆನ್ಸ್ ವ್ಯವಸ್ಥೆ ಸೇರಿದಂತೆ ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಗತ್ಯ ಮುಂಜಾಗ್ರತೆ ವ್ಯವಸ್ಥೆ ಮಾಡಿಕೊಳ್ಳಬೇಕು. ಸಾರಿಗೆ, ವಸತಿ, ವಾಹನ ನಿಲುಗಡೆ, ಊಟದ ವ್ಯವಸ್ಥೆಗೆ ಆಯಾ ಸಮಿತಿಗಳನ್ನು ಸಂಪರ್ಕಿಸಬೇಕು ಎಂದರು.

ಫಲಾನುಭವಿಗಳಿಗೆ, ಗಣ್ಯ ವ್ಯಕ್ತಿಗಳಿಗೆ, ಮಾಧ್ಯಮದವರಿಗೆ ಪ್ರತ್ಯೇಕ ಆಸನ ವ್ಯವಸ್ಥೆ, ಕಾರ್ಯಕ್ರಮಕ್ಕೆ ಆಗಮಿಸುವ ಅಧಿಕಾರಿಗಳಿಗೆ, ವಾಹನಗಳಿಗೆ, ಮಾಧ್ಯಮದವರಿಗೆ, ವಿ.ಐ.ಪಿ ಗಳಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಮಾಡುವ ಕುರಿತು ಚರ್ಚಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯೋಶಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್, ಜಿ.ಪಂ.ಉಪ ಕಾರ್ಯದಶಿ ಡಾ.ಪುನಿತ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪೂಜಾರ
ವೀರಮಲ್ಲಪ್ಪ, ಉಪ ವಿಭಾಗಾಧಿಕಾರಿಗಳಾದ ಶುಭಂ ಶುಕ್ಲಾ, ಕಲ್ಯಾಣಿ ಕಾಂಬ್ಳೆ, ಜಂಟಿ ಕೃಷಿ ನಿದರ್ೆಶಕ ಡಾ.ಮಲ್ಲಿಕಾಜರ್ುನ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಸಿದ್ದರಾಮಯ್ಯ
ಬರಗಿಮಠ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಪ್ರಶಾಂತ ವರಗಪ್ಪನವರ, ತಹಶೀಲ್ದಾರ ಶರಣಮ್ಮ ಇದ್ದರು.

ವಿವಿಧ ಸಮಿತಿ ರಚನೆ

ಕಾರ್ಯಕ್ರಮದ ಯಶಸ್ಸಿಗಾಗಿ ಕಾರ್ಯನಿರ್ವಹಣೆ ಸಮಿತಿ ಹಣಕಾಸು ಸಮಿತಿ ಕಾನೂನು ಸುವ್ಯವಸ್ಥೆ ಹಾಗೂ ಭದ್ರತಾ ಸಮಿತಿ ಮುಖ್ಯ ವೇದಿಕೆ ನಿರ್ಮಾಣ ಸಮಿತಿ ಆಹಾರ ಮತ್ತು ಕುಡಿಯುವ ನೀರಿನ ನಿರ್ವಹಣಾ ಸಮಿತಿ ಸಾರಿಗೆ ಮತ್ತು ಪಾರ್ಕಿಂಗ್ ವ್ಯವಸ್ಥೆ ಸಮಿತಿ ಹೆಲಿಪ್ಯಾಡ್ ನಿರ್ಮಾಣ/ ಮೂಲ ಸೌಕರ್ಯ ಸಮಿತಿ ಕಾರ್ಯಕ್ರಮ ನಿರ್ವಹಣಾ ಮತ್ತು ಮುಖ್ಯ ವೇದಿಕೆ ಶಿಷ್ಟಾಚಾರ ಸಮಿತಿ ಫಲಾನುಭವಿಗಳಿಗೆ ಆಸನದ ವ್ಯವಸ್ಥೆ ಸಮಿತಿ ಡಿ.ವಿ ವಾಹನಗಳ ಖಾಸಗಿ ಬಸ್ಸುಗಳು ಹಾಗೂ ಹಾಗೂ ಇತರೆ ವಾಹನಗಳ ವ್ಯವಸ್ಥೆ ಮತ್ತು ವಾಹನಗಳಿಗೆ ಇಂಧನ ಪೂರೈಕೆ ಸಮಿತಿ ಗಣ್ಯರ ಉಪಾಹಾರ ಆಹಾರ ಮತ್ತು ಕುಡಿಯುವ ನೀರಿನ ವ್ಯವಸ್ಥೆ ತುರ್ತು ಆರೋಗ್ಯ ಸೇವೆಗಳ ಸಮಿತಿ ವಸತಿ ವ್ಯವಸ್ಥೆ ಸಮಿತಿ ಹಾಗೂ ಮಾಧ್ಯಮ ಸಮನ್ವಯ ಸಮಿತಿಗಳನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.