ಹಾವೇರಿ: ‘ಜಿಲ್ಲೆಯ ಹಲವು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಗಿದೆ. ನ್ಯಾಯಾಲಯಗಳಲ್ಲಿ ಬಾಕಿ ಉಳಿದಿದ್ದ ಕೌಟುಂಬಿಕ ವ್ಯಾಜ್ಯಗಳನ್ನು ಸಂಧಾನದ ಮೂಲಕ ಬಗೆಹರಿಸಿಕೊಂಡಿರುವ 15 ದಂಪತಿಗಳು, ವ್ಯಾಜ್ಯ ಮರೆತು ಪುನಃ ಒಂದಾಗಿದ್ದಾರೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿರಾದಾರ ದೇವಿಂದ್ರಪ್ಪ ಎನ್. ತಿಳಿಸಿದ್ದಾರೆ.

ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಇತ್ಯರ್ಥಕ್ಕೆ ಗುರುತಿಸಲಾಗಿದ್ದ 1,24,057 ಪ್ರಕರಣಗಳಲ್ಲಿ 1,10,876 ಪ್ರಕರಣಗಳು ಇತ್ಯರ್ಥಗೊಂಡಿವೆ. ₹ 56.83 ಕೋಟಿ ಮೊತ್ತದ ರಾಜಿಯಾಗಿದೆ’ ಎಂದಿದ್ದಾರೆ.

‘ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ ಇತ್ಯರ್ಥಕ್ಕೆ ಗುರುತಿಸಲಾದ 6,387 ಪ್ರಕರಣಗಳ ಪೈಕಿ 5,400 ಪ್ರಕರಣಗಳು ಇತ್ಯರ್ಥಗೊಂಡಿವೆ. ₹29,15 ಕೋಟಿ ಮೊತ್ತದ ರಾಜೀಯಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ಇತ್ಯರ್ಥಕ್ಕೆ ಗುರುತಿಸಲಾದ 1,17,670 ಪ್ರಕರಣಗಳಲ್ಲಿ 1,05,476 ಪ್ರಕರಣಗಳು ಇತ್ಯರ್ಥಗೊಂಡಿವೆ. ₹27.67 ಕೋಟಿ ಮೊತ್ತದ ರಾಜಿಯಾಗಿದೆ’ ಎಂದು ಹೇಳಿದ್ದಾರೆ.

‘ರಾಣೆಬೆನ್ನೂರಿನ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ, ಐದು ವರ್ಷಕ್ಕಿಂದ ಮೇಲ್ಪಟ್ಟ ದಾವೆಯನ್ನು ಅದಾಲತ್ನಲ್ಲಿ ರಾಜಿ ಸಂದಾನದ ಮೂಲಕ ಇತ್ಯರ್ಥವಾಗಿದೆ’ ಎಂದಿದ್ದಾರೆ.

‘ಜಿಲ್ಲಾ ಕೌಟುಂಬಿಕ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಆರು ಕೌಟುಂಬಿಕ ವ್ಯಾಜ್ಯಗಳು ಇತ್ಯರ್ಥವಾಗಿದ್ದು, ದಂಪತಿ ಒಂದಾಗಿದ್ದಾರೆ. ಅದೇ ರೀತಿಯಲ್ಲಿ ರಾಣೆಬೆನ್ನೂರಿನಲ್ಲಿ ಮೂರು, ಬ್ಯಾಡಗಿ, ಹಾನಗಲ್ ಹಾಗೂ ಶಿಗ್ಗಾವಿಯಲ್ಲಿ ತಲಾ ಎರಡು ಸೇರಿ ಒಟ್ಟು 15 ಕೌಟುಂಬಿಕ ಪ್ರಕರಣಗಳು ಇತ್ಯರ್ಥವಾಗಿವೆ’ ಎಂದು ತಿಳಿಸಿದ್ದಾರೆ.

‘ಜಿಲ್ಲಾ ವಕೀಲರ ಸಂಘದ ಸದಸ್ಯರು, ತಾಲ್ಲೂಕು ವಕೀಲರ ಸಂಘದ ಸದಸ್ಯರು, ಹಾವೇರಿ ಜಿಲ್ಲೆಯ ನ್ಯಾಯಾಧೀಶರು, ಅಭಿಯೋಜನೆ ಇಲಾಖೆ, ಪೊಲೀಸರು, ಇತರೆ ಇಲಾಖೆಯವರು ಹಾಗೂ ಕಕ್ಷಿದಾರರ ಸಹಕಾರದಿಂದ ಅದಾಲತ್ ಯಶಸ್ವಿಯಾಗಿದೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆಗಿರುವ ನ್ಯಾಯಾಧೀಶರಾದ ಶ್ರೀಶೈಲಜಾ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.