ಹಾವೇರಿ: ‘ಮಡಿವಾಳ ಮಾಚಿದೇವರು, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಹರಿಕಾರರು. ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲ ಸಮುದಾಯದವರು ಸೇರಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆ ಮಾಡಬೇಕು. ಅಂದಾಗ ಮಾತ್ರ ಅವರಿಗೆ ನಿಜವಾದ ಗೌರವ ಸಲ್ಲಿಕೆಯಾಗುತ್ತದೆ’ ಎಂದು ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜೀಗೌಡ್ರ ಹೇಳಿದರು.

ನಗರದ ರೈಲ್ವೆ ನಿಲ್ದಾಣ ಬಳಿ ಇರುವ ಗಾಂಧಿಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಮಡಿವಾಳ ಮಾಚಿದೇವ ಸಮಾಜ ಸೇವಾ ಸಂಘದ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ‘ಮಡಿವಾಳ ಮಾಚಿದೇವರ ಜಯಂತಿ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಜನಿಸಿದ ಮಡಿವಾಳ ಮಾಚಿದೇವರು, 346 ವಚನಗಳನ್ನು ಬರೆದಿದ್ದಾರೆ. ಮಾಚಿದೇವರ ತತ್ವಗಳು ಇಂದಿನ ಯುವ ಪೀಳಿಗೆಗೆ ದಾರಿದೀಪವಾಗಿವೆ’ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಸಮಿತಿ ಅಧ್ಯಕ್ಷ ಎಂ.ಎಂ. ಹೀರೆಮಠ ಮಾತನಾಡಿ, ‘ಮಡಿವಾಳ ಮಾಚಿದೇವರು, ವಚನ ಸಾಹಿತ್ಯದ ಮೂಲಕ ಸಮಾಜಕ್ಕೆ ಅರಿವು ಮೂಡಿಸಿದ್ದರು. ವಿದ್ಯಾರ್ಥಿಗಳು ಅವರ ತತ್ವಾದರ್ಶಗಳನ್ನು ತಿಳಿದುಕೊಳ್ಳಬೇಕು. ಉತ್ತಮ ವಿದ್ಯಾಭ್ಯಾಸ ಹೊಂದುವ ಮೂಲಕ ಎಲ್ಲ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಬೇಕು’ ಎಂದರು.

ತಹಶೀಲ್ದಾರ್ ಶರಣಮ್ಮ ಮಾತನಾಡಿ, ‘ಮಡಿವಾಳ ಮಾಚಿದೇವರು ಮೇಲು–ಕೀಳು ಹಾಗೂ ಮೂಡನಂಭಿಕೆಗಳನ್ನು ದಿಕ್ಕರಿಸಿ ಸಮಾಜಕ್ಕೆ ಸಮಾನತೆಯ ಸಂದೇಶ ಸಾರಿದ್ದಾರೆ. ಅವರ ಜೀವನ ಸಂದೇಶಗಳನ್ನು ಅರಿತು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ’ ಎಂದರು.

‘ಮಾಚಿದೇವರು ಬಸವಣ್ಣನವರ ಅನುಭವ ಮಂಟಪದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಕಲಿ ದೇವರದೇವ ಎಂಬ ಅಂಕಿತನಾಮದೊಂದಿಗೆ ವಚನಗಳನ್ನು ರಚಿಸಿದ ಅವರು, ಬಟ್ಟೆಯ ಮೇಲಿನ ಕೊಳೆಯನ್ನಷ್ಟೇ ಅಲ್ಲದೆ ಸಮಾಜದಲ್ಲಿದ್ದ ಅನಿಷ್ಟ ಪದ್ಧತಿಗಳು ಮತ್ತು ಜನರ ಮನಸ್ಸಿನ ಮಲಿನವನ್ನು ತೊಳೆಯುವ ಕಾಯಕದಲ್ಲಿ ತೊಡಗಿದ್ದ ಮಹಾನ ವ್ಯಕ್ತಿ’ ಎಂದರು.

ಚಳ್ಳಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರೊ. ಗಂಗಾನಾಯ್ಕ ಎಲ್. ಅವರು ಮಡಿವಾಳ ಮಾಚಿದೇವರ ಜೀವನದ ಕುರಿತು ಉಪನ್ಯಾಸ ನೀಡಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಅಧ್ಯಕ್ಷ ಎಂ.ಎಂ. ಮೈದೂರು, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲೇಶ ಕರಿಗಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ವೀರಯ್ಯಸ್ವಾಮಿ ಬಿ. ಹಿರೇಮಠ, ಮುಖಂಡ ಸುರೇಶ ಮಡಿವಾಳ ಇದ್ದರು.

‘ಮಾಚಿದೇವ ಯುವ ಬ್ರಿಗೇಡ್’ನಿಂದ ಆಚರಣೆ

ಮಾಚಿದೇವ ಯುವ ಬ್ರಿಗೇಡ್ ವತಿಯಿಂದ ನಗರದ ಹುತಾತ್ಮ ಮೈಲಾರ ಮಹದೇವಪ್ಪ ವೃತ್ತದಲ್ಲಿ ಸೋಮವಾರ ‘ಮಡಿವಾಳ ಮಾಚಿದೇವರ ಜಯಂತಿ’ ಆಚರಿಸಲಾಯಿತು. ಮಾಚಿದೇವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ‘ಮಡಿವಾಳ ಮಾಚಿದೇವರು ಸಮಾಜದಲ್ಲಿರುವ ಮೌಢ್ಯತೆ ಕಂದಾಚಾರ ವರ್ಣಭೇದಗಳಂತಹ ಕೊಳಕನ್ನು ತೊಳೆಯಲು ಹೊರಾಟ ನಡೆಸಿದ ಶ್ರೇಷ್ಠ ಶರಣರು. ಬಸವಣ್ಣನವರ ನೇತೃತ್ವದಲ್ಲಿ ಸರ್ವ ಸಮಾನತೆಗಾಗಿ ಕಲ್ಯಾಣದಲ್ಲಿ ನಡೆದ ಕ್ರಾಂತಿಯಲ್ಲಿ ಮುಂಚೂಣಿಯಲ್ಲಿದ್ದರು’ ಎಂದರು. ಮಾಚಿದೇವ ಯುವ ಬ್ರಿಗೇಡ್ ಅಧ್ಯಕ್ಷ ಸತೀಶ ಮಡಿವಾಳರ ಮಾತನಾಡಿ ‘ಮಡಿವಾಳ ಸಮಾಜ ಆರ್ಥಿಕ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕಿದೆ. ಮಹಾಪುರುಷರನ್ನು ಕೇವಲ ಜಯಂತಿಗಳಿಗೆ ಸೀಮಿತಗೊಳಿಸದೇ ಅವರ ದಾರಿಯಲ್ಲಿ ಸಾಗಬೇಕಿದೆ’ ಎಂದರು. ಜಯಂತಿ ಅಂಗವಾಗಿ ನಂ.2 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ನೋಟ್ಬುಕ್ ವಿತರಿಸಲಾಯಿತು. ಮುಖಂಡರಾದ ಬಸವರಾಜ ಹಾಲಪ್ಪನವರ ಸುಭಾಸ ಬೆಂಗಳೂರ ಅಶೋಕ ಮರಿಯಣ್ಣನವರ ಶಿವರಾಜ ಪಾಟೀಲ ಚನ್ನವೀರಪ್ಪ ಮಡಿವಾಳರ ಶೆಟ್ಟಿ ವಿಭೂತಿ ಮುನೀಶ ಗೌಡ್ರು ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.