ಹಾವೇರಿ: ಜಿಲ್ಲೆಯ ಹಾನಗಲ್ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಪೂರೈಸಬೇಕಿದ್ದ ₹ 33 ಲಕ್ಷ ಮೌಲ್ಯದ ಹಾಲಿನ ಪೌಡರ್ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿ ಹಣ ದುರುಪಯೋಗಪಡಿಸಿಕೊಂಡ ಬಗ್ಗೆ ವಿಚಾರಣೆ ಮುಕ್ತಾಯಗೊಂಡಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸೇರಿ ನಾಲ್ವರ ವಿರುದ್ಧ ದೋಷಾರೋಪ ಹೊರಿಸಲಾಗಿದೆ.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ‘ಅಂಗನವಾಡಿ ಕಾರ್ಯಕರ್ತೆಯರು– ಸಹಾಯಕಿಯರ ಸಂಘಟನೆಯ ಅಹವಾಲು ಸ್ವೀಕಾರ ಸಭೆ’ಯಲ್ಲಿ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ರೇವತಿ ಹೊಸಮಠ, ‘2025ರ ಆಗಸ್ಟ್ನಲ್ಲಿ ನಡೆದ ಅಕ್ರಮದ ಬಗ್ಗೆ ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದ ಸಮಿತಿಯಿಂದ ತನಿಖೆ ನಡೆದಿದೆ. ಮೇಲ್ನೋಟಕ್ಕೆ ಆರೋಪ ಸಾಬೀತಾಗಿದೆ. ಸಿಡಿಪಿಒ (ಶಿಶು ಅಭಿವೃದ್ಧಿ ಯೋಜನಾಧಿಕಾರಿ), ಕಾರ್ಯಕ್ರಮ ಅಧಿಕಾರಿ, ಅಂದಿನ ಉಪನಿರ್ದೇಶಕ ಹಾಗೂ ಅಧೀಕ್ಷಕರ ವಿರುದ್ಧ ಆರೋಪ ಹೊರಿಸಲಾಗಿದೆ’ ಎಂದು ಹೇಳಿದರು.

ವಿಷಯ ಪ್ರಸ್ತಾಪಿಸಿದ ಮುಖಂಡ ಹೊನ್ನಪ್ಪ ಮರಿಯಮ್ಮನವರ, ‘ಹಾನಗಲ್ ತಾಲ್ಲೂಕಿನಲ್ಲಿ ಸುಮಾರು 8,000 ಕೆ.ಜಿ. ತೂಕದ ಹಾಲಿನ ಪೌಡರ ಅಂಗನವಾಡಿ ಕೇಂದ್ರಕ್ಕೆ ಹೋಗಿಲ್ಲ. ಹೋಗಿರುವುದಾಗಿ ಸುಳ್ಳು ಲೆಕ್ಕ ತೋರಿಸಲಾಗಿದೆ. ಅಕ್ರಮದ ಬಗ್ಗೆ ನಾನೂ ದೂರು ನೀಡಿದ್ದೆ. ಆರೋಪಿತ ಸಿಡಿಪಿಒ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಬದಲಿಗೆ ಶಿರಸಿಗೆ ವರ್ಗಾವಣೆ ಮಾಡಲಾಗಿದೆ’ ಎಂದು ತಿಳಿಸಿದರು.

ಸಚಿವ ಶಿವಾನಂದ ಪಾಟೀಲ, ‘ಆರೋಪ ಸಾಬೀತಾದರೆ, ವರ್ಗಾವಣೆ ಮಾತ್ರ ಕ್ರಮವಲ್ಲ. ತಪ್ಪು ಮಾಡಿದ್ದರೆ, ಕಾನೂನು ಪ್ರಕಾರ ಅಮಾನತು ಮಾಡಿ ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾಧಿಕಾರಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ‘ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಈಗ ಆರೋಪ ಹೊರಿಸಲಾಗಿದೆ. ಅವರಿಗೆ ನೋಟಿಸ್ ಕೊಟ್ಟು ವಿಚಾರಣೆ ನಡೆಯಲಿದೆ. ನಂತರವೇ, ಅವರ ಮೇಲೆ ಶಿಸ್ತುಕ್ರಮವಾಗಲಿದೆ’ ಎಂದು ತಿಳಿಸಿದರು.

ಕಳಪೆ ಮಟ್ಟದ ವಸ್ತುಗಳು ಪೂರೈಕೆ: ‘ಸವಣೂರು ತಾಲ್ಲೂಕಿನ ಹಲವು ಶಾಲೆಗಳಲ್ಲಿ ಅಕ್ಷರ ದಾಸೋಹದ ಸಿಬ್ಬಂದಿಗೆ ಕಳಪೆ ಮಟ್ಟದ ಸಮವಸ್ತ್ರ ನೀಡಲಾಗಿದೆ’ ಎಂದು ಮರಿಯಮ್ಮನವರ ಆರೋಪಿಸಿದರು.

ಜಿ.ಪಂ. ಉಪ ಕಾರ್ಯದರ್ಶಿ ಪುನೀತ್, ‘ಸಮವಸ್ತ್ರದ ಬಗ್ಗೆ ತನಿಖೆ ಮಾಡಿದ್ದೇನೆ. ಒಬ್ಬ ಸಿಬ್ಬಂದಿಗೆ ₹2,500 ಖರ್ಚು ಮಾಡಲಾಗಿದೆ. ಎಲ್ಲವೂ ಕಳಪೆ ಮಟ್ಟದ್ದಾಗಿದೆ. ಸಿಇಒ ಅವರಿಗೆ ವರದಿ ನೀಡಲಾಗಿದೆ’ ಎಂದರು.

ಜಿಲ್ಲಾ ಎಸ್.ಪಿ. ಯಶೋದಾ ವಂಟಗೋಡಿ ಸಭೆಯಲ್ಲಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260412-22-1684604836

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.