ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾವೇರಿ ನಗರಸಭೆ ಕಾಂಗ್ರೆಸ್ ತೆಕ್ಕೆಗೆ

Last Updated 31 ಅಕ್ಟೋಬರ್ 2020, 10:25 IST
ಅಕ್ಷರ ಗಾತ್ರ

ಹಾವೇರಿ: ತೀವ್ರ ಕುತೂಹಲ ಕೆರಳಿಸಿದ್ದ ನಗರಸಭೆಯ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಸಂಜೀವಕುಮಾರ ನೀರಲಗಿ ಹಾಗೂ ಉಪಾಧ್ಯಕ್ಷೆಯಾಗಿ ಜಾಹೀದಾಬಾನು ಜಮಾದಾರ ಅವಿರೋಧವಾಗಿ ಆಯ್ಕೆಯಾದರು.

ಶನಿವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಸವರಾಜ ಬೆಳವಡಿ ಅವರು ನಾಮಪತ್ರ ಹಿಂಪಡೆದ ಕಾರಣ ಕಾಂಗ್ರೆಸ್ ಅಭ್ಯರ್ಥಿ ಸಂಜೀವಕುಮಾರ ನೀರಲಗಿ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಜಾಹೀದಾಬಾನು ಜಮಾದಾರ ಏಕೈಕ ನಾಮಪತ್ರ ಸಲ್ಲಿಸಿದ್ದರು.

31 ವಾರ್ಡ್‌ ಗಳ ಹಾವೇರಿ ನಗರಸಭೆಯಲ್ಲಿ 15 ಕಾಂಗ್ರೆಸ್, 09 ಬಿಜೆಪಿ ಹಾಗೂ 07 ಪಕ್ಷೇತರ ಸದಸ್ಯರು ಇದ್ದರು. ಇವರಲ್ಲಿ 4 ಪಕ್ಷೇತರರು ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದ ಕಾರಣ ಕಾಂಗ್ರೆಸ್ ಸಂಖ್ಯಾಬಲ 19 ಕ್ಕೆ ಏರಿಕೆಯಾಯಿತು.

ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಹೂಗಳನ್ನು ಎರಚಿ ಸಂಭ್ರಮ ಆಚರಿಸಿದರು.

144 ಸೆಕ್ಷನ್‌ ಜಾರಿ: ಚುನಾವಣೆ ಸಂಬಂಧ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಚುನಾವಣೆ ನಡೆಯುವ ಪ್ರದೇಶದ 500 ಮೀಟರ್ ಸುತ್ತಮುತ್ತ‌ ಪ್ರತಿಬಂಧಕಾಜ್ಞೆ (144 ಸೆಕ್ಷನ್‌) ಜಾರಿಗೊಳಿಸಿ ತಹಶೀಲ್ದಾರ್‌ ಶಂಕರ ಜಿ.ಎಸ್‌. ಆದೇಶ ಹೊರಡಿಸಿದ್ದರು. ಈ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT