ಹಾವೇರಿ: ‘ಕರ್ನಾಟಕದ ಭಗತ್ಸಿಂಗ್ ಎಂದು ಕರೆಸಿಕೊಳ್ಳುವ ಹುತಾತ್ಮ ಮೈಲಾರ ಮಹಾದೇವಪ್ಪ ಅವರ ದೇಶಪ್ರೇಮ, ತ್ಯಾಗ ಮತ್ತು ಬಲಿದಾನ ನಮ್ಮೆಲ್ಲರಿಗೂ ಆದರ್ಶವಾಗಿದೆ. ಮೈಲಾರ ಮಹದೇವಪ್ಪನವರ ಹೆಸರಿನಲ್ಲಿ ಸ್ಥಾಪಿತವಾಗಿರುವ ಟ್ರಸ್ಟ್ ಮೂಲಕ ಅನೇಕ ಕೆಲಸಗಳು ನಡೆಯುತ್ತಿವೆ. ಕೊರಡೂರು ಸೇವಾಶ್ರಮವನ್ನೂ ನವೀಕರಿಸಲಾಗಿದ್ದು, ಜೂನ್ 8ರಂದು ಮಹದೇವಪ್ಪ ಅವರ ಜನ್ಮದಿನವನ್ನು ಅಲ್ಲಿಯೇ ಆಚರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಹೇಳಿದರು.

ನಗರದ ಹಳೇ ಪಿ.ಬಿ. ರಸ್ತೆಯಲ್ಲಿರುವ ಹುತಾತ್ಮರ ವೀರಸೌಧದಲ್ಲಿ ಹುತಾತ್ಮ ಮೈಲಾರ ಮಹಾದೇವಪ್ಪನವರ ರಾಷ್ಟ್ರೀಯ ಸ್ಮಾರಕ ಟ್ರಸ್ಟ್, ಮೋಟೆಬೆನ್ನೂರು ಬಳ್ಳಾರಿ ರುದ್ರಪ್ಪ ಬಿ.ಎಡ್. ಕಾಲೇಜು ಹಾಗೂ ಟಿ.ಎಂ.ಎ.ಇ.ಎಸ್ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ಹುತಾತ್ಮ ಮೈಲಾರ ಮಹಾದೇವಪ್ಪ, ವೀರಯ್ಯ ಹಿರೇಮಠ ಹಾಗೂ ತಿರಕಪ್ಪ ಮಡಿವಾಳ ಅವರು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದ ಸ್ಮರಣಾರ್ಥ ಬುಧವಾರ ಹಮ್ಮಿಕೊಂಡಿದ್ದ ‘83ನೇ ಹುತಾತ್ಮ ದಿನಾಚರಣೆ ಸಮಾರಂಭ’ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ಭಾರತದಲ್ಲಿ 1857ರಲ್ಲಿ ನಡೆದ ಸಿಪಾಯಿದಂಗೆ ದೇಶದ ಮೊದಲ ಸ್ವಾತಂತ್ರ್ಯ ಸಮರವಾಗಿವೆ. ಇದರಲ್ಲಿ ಅನೇಕ ಮಹಾನ್ ನಾಯಕರು ಪ್ರಾಣತ್ಯಾಗ ಮಾಡಿದರು. ನಂತರದ ದಿನಗಳಲ್ಲಿ ನಡೆದ ಸ್ವಾತಂತ್ರ್ಯ ಚಳವಳಿಯಲ್ಲಿ ಅನೇಕ ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದರು. ಹೋರಾಟದಲ್ಲಿ ಹಾವೇರಿ ಜಿಲ್ಲೆಯೂ ಮುಂಚೂಣಿಯಲ್ಲಿತ್ತು. ಈ ಚಳವಳಿಯಲ್ಲಿ ಮೈಲಾರ ಮಹಾದೇವಪ್ಪ, ವೀರಯ್ಯ ಹಿರೇಮಠ ಮತ್ತು ತಿರಕಪ್ಪ ಮಡಿವಾಳ ಅವರ ಹೆಸರು ಇತಿಹಾಸದಲ್ಲಿ ಅಚ್ಚಳಿಯದೇ ಉಳಿದಿವೆ’ ಎಂದರು.

‘ಮೈಲಾರ ಮಹದೇವಪ್ಪ ಬಹಳ ಸಾತ್ವಿಕ ವ್ಯಕ್ತಿಯಾಗಿದ್ದರು. ಹತ್ತು ವರ್ಷದ ಬಾಲಕನಾಗಿದ್ದಾಗಲೇ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು. ಮಹಾತ್ಮ ಗಾಂಧೀಜಿಯವರ ಅಹಿಂಸಾ ಮಾರ್ಗವನ್ನು ಅನುಸರಿಸಿ ಹೋರಾಟ ನಡೆಸಿದವರು. 43ನೇ ವಯಸ್ಸಿನಲ್ಲಿ ಬ್ರಿಟಿಷರ ಗುಂಡಿಗೆ ಬಲಿಯಾದ ಅವರು ದೇಶಪ್ರೇಮದ ಪ್ರತೀಕವಾಗಿದ್ದಾರೆ’ ಎಂದರು.

‘ಮಹಾತ್ಮಾ ಗಾಂಧೀಜಿಯವರು 1930ರಲ್ಲಿ ಹಮ್ಮಿಕೊಂಡಿದ್ದ ಉಪ್ಪಿನ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದ 78 ಜನರಲ್ಲಿ ಕರ್ನಾಟಕದ ಏಕೈಕ ಪ್ರತಿನಿಧಿ ಮೈಲಾರ ಮಹದೇವಪ್ಪನವರು. ಸಾಬರಮತಿ ಆಶ್ರಮದಲ್ಲಿ ತರಬೇತಿ ಪಡೆದು ಹಾವೇರಿ ಜಿಲ್ಲೆಯ ಹೊಸರಿತ್ತಿ ಹಾಗೂ ಕೊರಡೂರನ್ನು ಕರ್ಮಭೂಮಿಯನ್ನಾಗಿಸಿಕೊಂಡು ಹೋರಾಟ ನಡೆಸಿದರು. 1941ರಲ್ಲಿ ಸೆರೆಮನೆ ವಾಸ ಅನುಭವಿಸಿದ್ದರು. ಮರಳಿ ಬಂದು ಬ್ರಿಟಿಷರ ವಿರುದ್ಧ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದ್ದರು’ ಎಂದರು.

ಅಧ್ಯಕ್ಷತೆ ವಹಿಸಿದ್ದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜೀಗೌಡ್ರ ಮಾತನಾಡಿ, ‘ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸಿ ಬ್ರಿಟಿಷರ ಆಡಳಿತದ ವಿರುದ್ಧ ಧೈರ್ಯವಾಗಿ ಹೋರಾಡಿದ ಮಹಾನ್ ವ್ಯಕ್ತಿ ಮೈಲಾರ ಮಹಾದೇವಪ್ಪನವರು. ಅವರ ತ್ಯಾಗ, ಧೈರ್ಯ ಮತ್ತು ದೇಶಭಕ್ತಿ ಯುವಪೀಳಿಗೆಗೆ ಆದರ್ಶವಾಗಬೇಕು. ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು’ ಎಂದರು.

ಹರಿಹರದ ಲಿಂಗರಾಜ ಕಮ್ಮಾರ ಅವರು ಮೈಲಾರ ಮಹದೇವಪ್ಪನವರ ತ್ಯಾಗ, ಧೈರ್ಯ ಮತ್ತು ಸಾಧನೆಗಳ ಕುರಿತು ಉಪನ್ಯಾಸ ನೀಡಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಸಮಿತಿಯ ಅಧ್ಯಕ್ಷ ಎಂ.ಎಂ. ಮೈದೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ, ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರಾದ ಪರಿಮಳಾ ಜೈನ್, ಸತೀಶ ಕುಲಕರ್ಣಿ, ಎಚ್.ಎಸ್. ಮಹಾದೇವ, ವಿ.ಎನ್. ತಿಪ್ಪನಗೌಡ, ನಾಗೇಂದ್ರ ಕಟಕೋಳ, ಡಾ. ಎಸ್.ಕೆ. ಪ್ರಸಾದಿಮಠ, ಪ್ರಾಂಶುಪಾಲ ಸುರೇಶ ಎಂ., ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಹಿರೇಮಠ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260402-22-1451805712

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.