ಹಾವೇರಿ: ತಾಲ್ಲೂಕಿನ ನೆಗಳೂರು ಬಳಿ ವಾಕರಸಾಸಂ (ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ) ಬಸ್ ಉರುಳಿಬಿದ್ದು ಅಪಘಾತ ಸಂಭವಿಸಿದ್ದು, ಬಸ್ ನಿರ್ವಾಹಕ ಹಾಗೂ ಆರು ಪ್ರಯಾಣಿಕರು ಗಾಯಗೊಂಡಿದ್ದಾರೆ.

‘ಮೇ 14ರಂದು ಬೆಳಿಗ್ಗೆ 9.30ಕ್ಕೆ ಅಪಘಾತ ಸಂಭವಿಸಿದೆ. ಗಾಯಾಳುಗಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಕೆಲವರಿಗೆ ತೀವ್ರ ಪೆಟ್ಟು ಬಿದ್ದಿದೆ’ ಎಂದು ಪೊಲೀಸರು ಹೇಳಿದರು.

‘ಬಸ್ ನಿರ್ವಾಹಕ ಹುಲಿಗೆಪ್ಪ ಗಂಗಣ್ಣನವರ ತಲೆ ಹಾಗೂ ಸೊಂಟಕ್ಕೆ ಗಾಯವಾಗಿದೆ. ಅವರು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ’ ಎಂದರು. ಹಾವೇರಿ ಡಿಪೊದ ಬಸ್ (ಕೆಎ 42 ಎಫ್ 1223), ಹಾವೇರಿ–ಕೊಡಬಾಳ ಮಾರ್ಗದಲ್ಲಿ ಹೊರಟಿತ್ತು. ನೆಗಳೂರು ಬಳಿ ಎಮ್ಮೆಗಳು ಅಡ್ಡ ಬಂದಿದ್ದವು. ಅವುಗಳಿಗೆ ಬಸ್ ಡಿಕ್ಕಿ ಹೊಡೆಯುವುದನ್ಪು ತಪ್ಪಿಸಲು ಹೋಗಿ, ಚಾಲಕನ ನಿಯಂತ್ರಣ ತಪ್ಪಿತ್ತು. ರಸ್ತೆಯಲ್ಲಿಯೇ ಬಸ್ ಉರುಳಿಬಿದ್ದಿತ್ತು. ಬಸ್ ಹಳೆಯದ್ದಾಗಿದ್ದರಿಂದ, ಸರಿಯಾಗಿ ನಿರ್ವಹಣೆ ಮಾಡಿರಲಿಲ್ಲ. ಅದೇ ಕಾರಣಕ್ಕೆ ಅಪಘಾತವಾಗಿರುವುದಾಗಿ ಜನರು ದೂರುತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-23-800608026

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.