ಹಾವೇರಿ: ನೊಳಂಬ ಲಿಂಗಾಯತ ಸಂಘ ರಾಜ್ಯ ಘಟಕ ಮತ್ತು ಹಾವೇರಿ ಉಪಸಮಿತಿ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪೋತ್ಸಾಹಿಸಲು, ಪ್ರತಿ ವರ್ಷದಂತೆ ಈ ವರ್ಷವೂ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ.

2026ರ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಹಾವೇರಿ, ಕಾರವಾರ, ದಾವಣಗೇರಿ ಹಾಗೂ ಧಾರವಾಡ ಜಿಲ್ಲೆಯಲ್ಲಿರುವ ನೊಳಂಬ ಲಿಂಗಾಯತ ಸಮಾಜದ ವಿದ್ಯಾರ್ಥಿ–ವಿದ್ಯಾರ್ಥಿನಿಯರು ಸ್ವ–ವಿವರ, ಫೋಟೊ, ಆಧಾರ್ ಕಾರ್ಡ್, ಮೊಬೈಲ್ ನಂಬರ್ ಹಾಗೂ ಅಂಕಪಟ್ಟಿಯ ನಕಲು ಪ್ರತಿಗಳ ಸಮೇತ ಅರ್ಜಿ ಸಲ್ಲಿಸಬಹುದು.

ಆಸಕ್ತಿ ವಿದ್ಯಾರ್ಥಿಗಳು, ‘ನೊಳಂಬ ಲಿಂಗಾಯತ ಸಂಘ, ಉಪಸಮಿತಿ, ಹಾವೇರಿ, ನಂದಿಕೇಶ್ವರ ಸೌಹಾರ್ದ ಸಹಕಾರಿ ನಿಯಮಿತ (ಬ್ಯಾಂಕ್), ಕಲ್ಲುಮಂಟಪ ರಸ್ತೆ, ಹಾವೇರಿ’ ವಿಳಾಸಕ್ಕೆ ಮೇ 31ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹಾವೇರಿಯ ಗುರುಸಿದ್ಧರಾಮೇಶ್ವರ ಸಮುದಾಯ ಭವನದಲ್ಲಿ ಜೂನ್ 7ರಂದು ಬೆಳಿಗ್ಗೆ ‘ಪ್ರತಿಭಾ ಪುರಸ್ಕಾರ ಕಾರ್ಯಕ್ರಮ’ ಜರುಗಲಿದೆ. ಮಾಹಿತಿಗಾಗಿ; 8050868273, 6360325047, 9008929426 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-22-2068444121

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.