ಹಾವೇರಿ: ಅಪರಾಧ ಪ್ರಕರಣಗಳಲ್ಲಿ ಜೈಲು ಸೇರುವ ಆರೋಪಿಗಳು ಹಾಗೂ ಅವರ ಸಂಬಂಧಿಕರಿಗೆ ಉಚಿತವಾಗಿ ಕಾನೂನು ಸಲಹೆ ನೀಡಲು ನೆರವು ಕೇಂದ್ರವೊಂದನ್ನು ಸ್ಥಾಪಿಸಲಾಗಿದೆ.

ನಗರದ ಹೊರವಲಯದ ಕೆರಿಮತ್ತೀಹಳ್ಳಿಯಲ್ಲಿರುವ ಜಿಲ್ಲಾ ಕಾರಾಗೃಹದ ಆವರಣದಲ್ಲಿಯೇ ಈ ಕೇಂದ್ರ ಆರಂಭಿಸಲಾಗಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾರಾಗೃಹದ ಸಹಯೋಗದಲ್ಲಿ ಕೇಂದ್ರ ಕಾರ್ಯನಿರ್ವಹಿಸಲಿದೆ.

‘ಮುಲಾಕತ್ ಸೇ ನ್ಯಾಯತಕ್’ ಎಂಬ ಘೋಷವಾಕ್ಯದಡಿ ಕಾನೂನು ಅರಿವು ಹಾಗೂ ನೆರವು ಉಚಿತ ಕೇಂದ್ರ ಆರಂಭಿಸಲಾಗಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದನ್ವಯ ಕೇಂದ್ರ ಕಾರ್ಯನಿರ್ವಹಿಸಲಿದೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆಗಿರುವ ನ್ಯಾಯಾಧೀಶರಾದ ಶ್ರೀಶೈಲಜಾ ಎಚ್.ವಿ. ತಿಳಿಸಿದ್ದಾರೆ.

‘ಈ ಕೇಂದ್ರದಲ್ಲಿ ಬಂಧಿಗಳು, ಅವರ ಸಂಬಂಧಿಕರು, ಹಿತೈಷಿಗಳು, ಆರೋಪಿಗಳು ಹಾಗೂ ಇತರರು, ಉಚಿತ ಕಾನೂನು ಮಾಹಿತಿ ಹಾಗೂ ನೆರವು ಪಡೆಯಬಹುದು. ಈ ಕೇಂದ್ರಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪೆನಲ್ ವಕೀಲ ವಿ.ಎಂ. ನಾಡಗೌಡ್ರ, ಅರೆಕಾಲಿಕ ಸ್ವಯಂ ಸೇವಕರಾದ ಚಂದ್ರಶೇಖರ ಮಾಳಗಿ, ಗಂಗಾಧರ ನಾವೆ, ಜಿಲ್ಲಾ ಕಾರಾಗೃಹದ ವಾರ್ಡನ್ ವೃಷಭ ಖ್ಯಾತನವರ ಅವರನ್ನು ನೇಮಕ ಮಾಡಲಾಗಿದೆ. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಹಾಗೂ ಸಂಜೆ 4 ಗಂಟೆಯಿಂದ 5.30 ಗಂಟೆಯವರೆಗೆ ಕೇಂದ್ರ ತೆರೆದಿರುತ್ತದೆ’ ಎಂದು ಹೇಳಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-22-1890901864

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.