ಹಾವೇರಿ: ‘ಹಾವೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕುಡಿಯುವ ನೀರು ಹಾಗೂ ಇತರೆ ಕಾಮಗಾರಿಗಳು ಸಮರ್ಪಕವಾಗಿ ನಡೆಯುತ್ತಿಲ್ಲ’ ಎಂದು ಆರೋಪಿಸಿದ ಶಾಸಕ ರುದ್ರಪ್ಪ ಲಮಾಣಿ ಅವರು ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು.

ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ‘ಕರ್ನಾಟಕ ಜಲ ಮಂಡಳಿ, ನಗರಾಭಿವೃದ್ಧಿ ಕೋಶ, ನಗರಸಭೆ ಹಾಗೂ ಕೆಯುಐಡಿಎಫ್ಸಿ, ಕೆ.ಯು.ಡಬ್ಲ್ಯು.ಎಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಟೆಂಡರ್ನಲ್ಲಿ ನಿಗದಿಪಡಿಸಿದ್ದ ಅವಧಿ ಮುಗಿದರೂ ಕಾಮಗಾರಿ ಮುಗಿಸದಿರುವುದು ನಿಮ್ಮ ಬೇಜವಾಬ್ದಾರಿ ತೋರಿಸುತ್ತದೆ. ಕಾಮಗಾರಿ ಮುಗಿಸದಿರುವುದಕ್ಕೆ ನಿಮಗೆ ನಾಚಿಕೆಯಾಗಬೇಕು. ಕೆಲಸ ಮಾಡಲು ಸಾಧ್ಯವಿಲ್ಲದಿದ್ದರೆ, ಟೆಂಡರ್ನಲ್ಲಿ ಏಕೆ ಭಾಗವಹಿಸಬೇಕಿತ್ತು’ ಎಂದು ಶಾಸಕ ರುದ್ರಪ್ಪ ಅವರು ಗುತ್ತಿಗೆದಾರರಿಗೆ ಬಿಸಿ ಮುಟ್ಟಸಿದರು.

‘ಹಾವೇರಿ ನಗರಕ್ಕೆ ನಿರಂತರ ನೀರು ಸರಬರಾಜು ಮಾಡುವ ಯೋಜನೆಯ ಕಾಮಗಾರಿ ಆದೇಶ ಪಡೆದು 3 ವರ್ಷಗಳಾದರೂ ಭೌತಿಕವಾಗಿ ಪೂರ್ಣಗೊಂಡಿಲ್ಲ. ಇನ್ನು ಎಷ್ಟು ವರ್ಷಗಳಲ್ಲಿ ಕೆಲಸ ಮುಗಿಸುತ್ತೀರಿ? ಕೂಡಲೇ ಹೆಚ್ಚಿನ ಕಾರ್ಮಿಕರನ್ನು ನಿಯೋಜಿಸಿ ಕೆಲಸಕ್ಕೆ ವೇಗ ನೀಡಬೇಕು. ಇಲ್ಲದಿದ್ದರೆ, ನಾನು ಸಹಿವುದಿಲ್ಲ’ ಎಂದು ಖಡಕ್ ಎಚ್ಚರಿಕೆ ನೀಡಿದರು.

ಕಾಮಗಾರಿಗಳ ವಿವರಗಳನ್ನು ಸರಿಯಾಗಿ ನೀಡದ ಮತ್ತು ಮೇಲ್ವಿಚಾರಣೆಯಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧವೂ ಹರಿಹಾಯ್ದ ಶಾಸಕ, ‘ಕರ್ತವ್ಯ ಲೋಪ ಎಸಗುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

₹ 10 ಕೋಟಿ ಅನುದಾನ: ‘ಹಾವೇರಿ ನಗರದ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಮುಖ್ಯಮಂತ್ರಿಯವರು ಹಾಗೂ ಸಚಿವರೊಂದಿಗೆ ಚರ್ಚಿಸಲಾಗಿದೆ. ನಗರದ ನೀರಿನ ವ್ಯವಸ್ಥೆ ಸರಿಪಡಿಸಲು ಸರ್ಕಾರದಿಂದ ₹ 10 ಕೋಟಿ ವಿಶೇಷ ಅನುದಾನ ನೀಡಲು ಒಪ್ಪಿಗೆ ದೊರೆತಿದೆ’ ಎಂದು ರುದ್ರಪ್ಪ ಹೇಳಿದರು.

ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ಮುಖ್ಯ ಇಂಜಿನಿಯರ್ ಸುಭಾಷ್ ನಾಯಕವಾಡ್ ಹಾಗೂ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-22-964364080

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.