ಹಾವೇರಿ: ರಾಷ್ಟ್ರೀಯ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಜಿಲ್ಲೆಯಾದ್ಯಂತ ಭಾನುವಾರ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಮೊದಲ ದಿನವೇ ಶೇ 95.56ರಷ್ಟು ಮಕ್ಕಳಿಗೆ ಲಸಿಕೆ ನೀಡಲಾಗಿದೆ.

ಜಿಲ್ಲೆಯಾದ್ಯಂತ ಅಭಿಯಾನವನ್ನು ಯಶಸ್ವಿಗೊಳಿಸಲು ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿತ್ತು. ಭಾನುವಾರ ಬೆಳಿಗ್ಗೆಯಿಂದಲೇ ಜಿಲ್ಲೆಯ ಎಲ್ಲ ಕಡೆಯೂ ಪೋಲಿಯೊ ಲಸಿಕೆ ಕಾರ್ಯಕ್ರಮ ಆರಂಭಿಸಲಾಯಿತು.

ಅಂಗನವಾಡಿ ಕೇಂದ್ರಗಳು, ಶಾಲಾ ಆವರಣ, ಬಸ್ ನಿಲ್ದಾಣ, ರೈಲು ನಿಲ್ದಾಣ, ಸಂತೆ, ಪೆಟ್ರೋಲ್ ಬಂಕ್ಗಳು, ಸಾರ್ವಜನಿಕ ಸ್ಥಳಗಳು ಸೇರಿ ಹಲವು ಕಡೆಗಳಲ್ಲಿ ಹಾಜರಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ, ಪ್ರತಿ ಮಗುವಿಗೆ ಎರಡು ಹನಿ ಲಸಿಕೆ ನೀಡಿದರು. ಲಸಿಕೆಯ ಗುರುತಿಗಾಗಿ ಎಡಗೈನ ಕಿರುಬೆರಳಿಗೆ ಮಸಿ ಹಚ್ಚಿದರು.

ಜಿಲ್ಲೆಯಲ್ಲಿ ಐದು ವರ್ಷದೊಳಗಿನ ವಯಸ್ಸಿನ 1,48,263 ಮಕ್ಕಳಿದ್ದಾರೆ. ಈ ಪೈಕಿ ಭಾನುವಾರ 1,41,673 ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಲಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಶೇ 95.56ರಷ್ಟು ಗುರಿ ಸಾಧನೆಯಾಗಿದೆ. ಹಾನಗಲ್ ಪಟ್ಟಣದಲ್ಲಿ 2,505 ಮಕ್ಕಳಿದ್ದಾರೆ. ಈ ಪೈಕಿ ಭಾನುವಾರ ಇಡೀ ದಿನ 2,665 ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಗುರಿಯನ್ನು ಮೀರಿ ಶೇ 106.39ರಷ್ಟು ಸಾಧನೆಯಾಗಿದೆ.

‘ಜಿಲ್ಲೆಯ ಹಾವೇರಿ, ಬ್ಯಾಡಗಿ, ರಾಣೆಬೆನ್ನೂರು, ಹಿರೇಕೆರೂರು, ಸವಣೂರು, ಶಿಗ್ಗಾವಿ, ಹಾನಗಲ್ ತಾಲ್ಲೂಕಿನಲ್ಲಿ ಪಲ್ಸ್ ಪೋಲಿಯೊ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಯಿತು. ಶೇ 95.56ರಷ್ಟು ಸಾಧನೆಯಾಗಿದೆ. ಉಳಿದ ಮಕ್ಕಳನ್ನು ಪತ್ತೆ ಮಾಡಿ ಲಸಿಕೆ ಹಾಕಲು ಸಿದ್ಧತೆ ಮಾಡಿಕೊಂಡಿದ್ದೇನೆ. ಅದಕ್ಕಾಗಿ ಮನೆ ಮನೆಗೂ ತೆರಳಲು ಸಿಬ್ಬಂದಿಗೆ ಸೂಚಿಸಲಾಗಿದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ (ಪ್ರಭಾರಿ) ಡಾ. ಎಂ. ಜಯಾನಂದ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಗ್ರಾಮೀಣ ಪ್ರದೇಶ (804) ಹಾಗೂ ನಗರ ಪ್ರದೇಶ (197) ಸೇರಿ 1001 ತಂಡಗಳನ್ನು ರಚಿಸಲಾಗಿದೆ. ತಂಡದ ಸದಸ್ಯರು ಮಕ್ಕಳನ್ನು ಗುರುತಿಸಿ ಲಸಿಕೆ ಹಾಕಲಿದ್ದಾರೆ. ಭಾನುವಾರ ಒಂದೇ ದಿನದಲ್ಲಿ 7,872 ಲಸಿಕೆ ವೈಲ್ಸ್ಗಳನ್ನು ಬಳಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.