ಹಾವೇರಿ: ‘ಪ್ರಸಕ್ತ ಹಿಂಗಾರು ಹಂಗಾಮಿನಲ್ಲಿ ಬೆಳೆದಿರುವ ಜೋಳವನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿ ಮಾಡಲು ಜಿಲ್ಲೆಯ ಏಳು ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಕೇಂದ್ರ ಆರಂಭಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಸರ್ಕಾರ ನಿಗಧಿಪಡಿಸಿದ ಬೆಂಬಲ ಬೆಲೆ ಹಾಗೂ ಮಾರ್ಗಸೂಚಿ ಅನ್ವಯ ಗುಣಮಟ್ಟದ ಜೋಳ ಖರೀದಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

‘ಬಿಳಿಜೋಳ (ಮಾಲ್ದಂಡಿ) ಪ್ರತಿ ಕ್ವಿಂಟಲ್ಗೆ ₹ 3421 ಹಾಗೂ ಜೋಳ (ಹೈಬ್ರಿಡ್) ಪ್ರತಿ ಕ್ವಿಂಟಲ್ಗೆ ₹ 3371ರಂತೆ ಖರೀದಿಸಲು ಸರ್ಕಾರ ಆದೇಶ ಹೊರಡಿಸಿದೆ. ಮಾರ್ಚ್ 25ರಿಂದ ರೈತರ ನೋಂದಣಿ ಆರಂಭಿಸಬೇಕು. ಏಪ್ರಿಲ್ 1ರಿಂದ ಮೇ 31ರವರೆಗೆ ರಾಜ್ಯ ಸಹಕಾರ ಮಾರಾಟ ಮಂಡಳಿ ನಿಯಮಿತ ಸಂಸ್ಥೆಯ ಮೂಲಕ ಜೋಳ ಖರೀದಿಗೆ ಕ್ರಮ ವಹಿಸಬೇಕು’ ಎಂದು ಅಧಿಕಾರಿಗಳಿಗೆ ತಿಳಿಸಿದರು.

‘ಬೆಂಬಲ ಬೆಲೆ ಯೋಜನೆಯಡಿ ಜೋಳವನ್ನು ಪ್ರತಿ ರೈತರಿಂದ ಪ್ರತಿ ಎಕರೆಗೆ 20 ಕ್ವಿಂಟಲ್ನಂತೆ ಗರಿಷ್ಠ 150 ಕ್ವಿಂಟಲ್ ಖರೀದಿಸಲು ಅವಕಾಶವಿದೆ. ಜೋಳ ಖರೀದಿ ಮೊತ್ತವನ್ನು ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಯಾದ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕು. ಕೇಂದ್ರಗಳ ಪ್ರಕ್ರಿಯೆ ಮೇಲೆ ನಿಗಾ ವಹಿಸಲು ಆಯಾ ತಾಲ್ಲೂಕಿನ ತಹಶೀಲ್ದಾರಗಳು ನೋಡಲ್ ಅಧಿಕಾರಿಯಾಗಿ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರು ಜಿಲ್ಲಾ ನೋಡಲ್ ಅಧಿಕಾರಿಯಾಗಿ ಕೆಲಸ ಮಾಡಬೇಕು’ ಎಂದು ಹೇಳಿದರು.

ಕೃಷಿ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಮಾತನಾಡಿ, ‘ಹಿಂಗಾರು ಹಂಗಾಮಿನಲ್ಲಿ ಹಾವೇರಿ ತಾಲೂಕಿನಲ್ಲಿ 7695 ಹೆಕ್ಟೇರ್, ರಾಣೆಬೆನ್ನೂರಿನಲ್ಲಿ 12,022 ಹೆಕ್ಟೇರ್, ಹಾನಗಲ್ನಲ್ಲಿ 3,105 ಹೆಕ್ಟೇರ್, ಬ್ಯಾಡಗಿ ತಾಲ್ಲೂಕಿನಲ್ಲಿ 7,270 ಹೆಕ್ಟೇರ್, ಸವಣೂರಿನಲ್ಲಿ 7,902 ಹೆಕ್ಟೇರ್, ಶಿಗ್ಗಾವಿಯಲ್ಲಿ 6,923 ಹೆಕ್ಟೇರ್, ಹಿರೇಕೆರೂರಿನಲ್ಲಿ 2,760 ಹಾಗೂ ರಟ್ಟಿಹಳ್ಳಿ ತಾಲ್ಲೂಕಿನಲ್ಲಿ 2,548 ಹೆಕ್ಟೇರ್ ಸೇರಿ ಒಟ್ಟು 50,225 ಹೆಕ್ಟೇರ್ ಪ್ರದೇಶದಲ್ಲಿ ಜೋಳ ಬೆಳೆಯಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.