ರಾಣೆಬೆನ್ನೂರು: ‘ಮುಂಗಾರು ಪೂರ್ವ ಮಳೆಯಿಂದಾಗಿ ಹಾವೇರಿ ಜಿಲ್ಲೆಯಾದ್ಯಂತ ಇದುವರೆಗೆ ಒಟ್ಟು 99 ಮನೆಗಳಿಗೆ ಹಾನಿಯಾಗಿದ್ದು, 1235 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆಗೆ ಹಾನಿಯಾಗಿದೆ. ಜೊತೆಗೆ ಮೂವರು ಹಾಗೂ 5 ಕುರಿ ಸಾವನ್ನಪ್ಪಿವೆ. ರೈತರಿಗೆ ಬೆಳೆಹಾನಿ ಪರಿಹಾರವನ್ನು ಶೀಘ್ರದಲ್ಲಿ ವಿತರಿಸಲಾಗುವುದು’ ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಹೇಳಿದರು.

ತಾಲ್ಲೂಕಿನ ಹಿರೇಬಿದರಿ ಗ್ರಾಮದಲ್ಲಿ ಸೋಮವಾರ ಅಕಾಲಿಕ ಮಳೆಗೆ ಹಾನಿಯಾದ ಪ್ರದೇಶವನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಬೆಳೆಹಾನಿ, ಜೀವಹಾನಿ ಕುರಿತು ವರದಿಯಾಗಿದೆ. ರಾಣೆಬೆನ್ನೂರಿನಲ್ಲಿ 50 ಮನೆ ಹಾಗೂ 1005 ಹೆಕ್ಟೇರ್ ಭತ್ತ ಸೇರಿದಂತೆ ವಿವಿಧ ಬೆಳೆಗಳಿಗೆ ಹಾನಿಯಾಗಿದ್ದು, ಕಂದಾಯ, ತೋಟಗಾರಿಕೆ ಮತ್ತು ಸಹಾಯಕ ಕೃಷಿ ಇಲಾಖೆಯಿಂದ ಜಂಟಿ ಸಮೀಕ್ಷೆ ನಡೆಸಿ ಶೀರ್ಘದಲ್ಲಿ ಪರಿಹಾರ ನೀಡಲಾಗುವುದು’ ಎಂದು ಭರವಸೆ ನೀಡಿದರು.

ಜಿಲ್ಲೆಯಲ್ಲಿ 82.93ರಷ್ಟು ವಾಡಿಕೆ ಮಳೆ ಆಗಬೇಕಾಗಿದ್ದು, ಈಗಾಗಲೇ 108 ಮಿ.ಮೀ ಮಳೆಯಾಗಿದೆ. ರಾಣೆಬೆನ್ನೂರು ತಾಲ್ಲೂಕು ಸೇರಿದಂತೆ ಮನೆ, ಶಾಲೆ, ಕಚೇರಿ ಸೇರಿದಂತೆ ಮತ್ತಿತರ ಕಟ್ಟಡಗಳಿಗೆ ಸಾಕಷ್ಟು ಹಾನಿಯಾಗಿದೆ. ಸಂತ್ರಸ್ತರಿಗೆ ಪರಿಹಾರ ವಿತರಿಸುವ ಕಾರ್ಯ ಆರಂಭವಾಗಲಿದೆ. ಕಳಪೆ ಬೀಜ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಿಇಒ ದಲ್ಜಿತ್ ಕುಮಾರ್, ತಹಶೀಲ್ದಾರ್ ಆರ್.ಎಚ್. ಭಾಗವಾನ, ತಾಲ್ಲೂಕು ಪಂಚಾಯಿತಿ ಇಒ ವೆಂಕಟೇಶ್ ಸಣ್ಣಬಿದರಿ, ತೋಟಗಾರಿಕೆ ಇಲಾಖೆ ಅಧಿಕಾರಿ ಮಂಜುನಾಯಕ, ಸಹಾಯಕ ಕೃಷಿ ಅಧಿಕಾರಿ ಶಾಂತಮಣಿ ಜಿ, ರುದ್ರೇಶ, ವಾಗೀಶ ಮಳೇಮಠ, ತಿರುಪತಿ ಅಜ್ಜನವರ, ಇಕ್ಬಾಲ್ಸಾಬ ರಾಣೆಬೆನ್ನೂರು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-22-229863231

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.