ಹಾವೇರಿ: ಜಿಲ್ಲೆಯಾದ್ಯಂತ ಶನಿವಾರ ರಾತ್ರಿ ಸುರಿದ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಅವಘಡಗಳು ಸಂಭವಿಸಿವೆ. ಶಿಗ್ಗಾವಿ ತಾಲ್ಲೂಕಿನ ಶಿಡ್ಲಾಪೂರ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ತಗಡಿನ ಚಾವಣಿಗಳು ಹಾರಿಹೋಗಿದ್ದು, ಎರಡೂ ಕೊಠಡಿಗಳು ಹಾಳಾಗಿವೆ.

ಶಾಲೆಗೆ ಭಾನುವಾರ ಭೇಟಿ ನೀಡಿದ್ದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನ ದಂಡಿನ, ವಾಸ್ತವ ಸ್ಥಿತಿ ಅರಿತುಕೊಂಡರು. ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಮೂಲಕ ಮಾಹಿತಿ ಪಡೆದುಕೊಂಡರು.

‘ಶನಿವಾರ ಸಂಜೆಯಿಂದ ರಾತ್ರಿಯವರೆಗೂ ಸುರಿದ ಮಳೆಯಿಂದಾಗಿ ಶಿಡ್ಲಾಪೂರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎರಡೂ ಕೊಠಡಿಗಳ ಚಾವಣಿ ಹಾರಿ ಹೋಗಿದ್ದವು. ಅದರ ವಸ್ತುಗಳನ್ನು ಸಾರ್ವಜನಿಕರ ಸಹಾಯದಿಂದ ಒಂದು ಕಡೆ ಸೇರಿಸಿ ಇರಿಸಲಾಗಿದೆ’ ಎಂದು ಮೋಹನ ದಂಡಿನ್ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಶಾಲೆಯಲ್ಲಿ 32 ಮಕ್ಕಳು ದಾಖಲಾಗಿ, ಕೊಠಡಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಇಬ್ಬರು ಕಾಯಂ ಶಿಕ್ಷಕರಿದ್ದಾರೆ. ಆದರೆ, ಈಗ ರಜೆ ಇದ್ದಿದ್ದರಿಂದ ಕೊಠಡಿಯಲ್ಲಿ ಯಾರೂ ಇರಲಿಲ್ಲ. ಹೀಗಾಗಿ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ’ ಎಂದರು.

‘ಶಾಲೆಯ ಎರಡೂ ಕೊಠಡಿಗಳು ಸಂಪೂರ್ಣವಾಗಿ ಹಾಳಾಗಿವೆ. ತರಗತಿ ನಡೆಸಲು ಯೋಗ್ಯವಾಗಿಲ್ಲ. ಗ್ರಾಮಕ್ಕೆ ಹೊಂದಿಕೊಂಡಿರುವ ಸರ್ಕಾರಿ ಜಾಗದಲ್ಲಿ 2 ಕೊಠಡಿಗಳನ್ನು ವಿವಿಧ ಯೋಜನೆಗಳಡಿ ನಿರ್ಮಿಸಲಾಗಿದೆ. ಅದೇ ಕೊಠಡಿಗೆ ಶಾಲೆಯ ತರಗತಿಗಳನ್ನು ಸ್ಥಳಾಂತರಿಸಲಾಗುವುದು. ಅಲ್ಲಿಯೇ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಲಾಗುವುದು’ ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-22-1266503048

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.