ಹಾವೇರಿ: ಜಿಲ್ಲೆಯ ರಾಣೆಬೆನ್ನೂರಿನ ಹೃದಯ ಭಾಗದಲ್ಲಿರುವ ದೊಡ್ಡಕೆರೆಯನ್ನು ₹2 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಈ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಚಾಲನೆ ನೀಡಿದರು.

ರಾಣೆಬೆನ್ನೂರು ನಗರವನ್ನು ಪ್ರವಾಸೋದ್ಯಮ ತಾಣವನ್ನಾಗಿ ಮಾಡಲು ಈಗಾಗಲೇ ಹಲವು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಅದರ ಭಾಗವಾಗಿ ದೊಡ್ಡಕೆರೆಯನ್ನು ಅಭಿವೃದ್ಧಿಪಡಿಸಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಯೋಜನೆ ಹಾಕಿಕೊಳ್ಳಲಾಗಿದೆ.

ರಾಣೆಬೆನ್ನೂರು ನಗರಕ್ಕೆ ಭಾನುವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ದೊಡ್ಡಕೆರೆ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಭಾಗಿಯಾದರು. ಕೆರೆ ಅಭಿವೃದ್ಧಿ ಕಾಮಗಾರಿಯ ಶಿಲಾನ್ಯಾಸವನ್ನೂ ಬಿಡುಗಡೆ ಮಾಡಿದರು. ಗುದ್ದಲಿ ಪೂಜೆ ನೆರವೇರಿಸಿ, ಕಾಮಗಾರಿಗೆ ಚಾಲನೆ ಕೊಟ್ಟರು.

ತಾಲ್ಲೂಕಿನ ಹಲವು ಕಡೆಗಳಲ್ಲಿ ಕೈಗೊಳ್ಳಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೂ ಮುಖ್ಯಮಂತ್ರಿ ಶಂಕುಸ್ಥಾಪನೆ ನೆರವೇರಿಸಿದರು. ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ ಶಾಲೆಗಳಲ್ಲಿ ಅಳವಡಿಸಲಾದ ಡಿಜಿಟಲ್ ಗ್ರಂಥಾಲಯ, ಆರೋಗ್ಯ ಎಟಿಎಂ ಘಟಕಗಳ ಕಾರ್ಯಾರಂಭಕ್ಕೂ ಚಾಲನೆ ನೀಡಿದರು.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಟ್ಯಾಬ್ ನೀಡಿ ಪ್ರೋತ್ಸಾಹಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಶಾಸಕ ಪ್ರಕಾಶ ಕೋಳಿವಾಡ, ‘ಕ್ಷೇತ್ರದ 14 ಪ್ರೌಢಶಾಲೆಗಳಲ್ಲಿ ಈಗಾಗಲೇ ಎಐ (ಕೃತಕ ಬುದ್ದಿಮತ್ತೆ) ಟೀಚರ್ ವ್ಯವಸ್ಥೆ ಮಾಡಲಾಗಿದೆ. ಇದು ಮಕ್ಕಳ ಕಲಿಕೆಗೆ ಅನುಕೂಲವಾಗಿದೆ’ ಎಂದರು.

‘ಕ್ಷೇತ್ರದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ‘ಆರೋಗ್ಯ ಎಟಿಎಂ’ ಘಟಕ ಇರಿಸಲಾಗುತ್ತಿದೆ. ರೋಗಿಗಳು ತಮ್ಮ ಸಮಸ್ಯೆಗಳನ್ನು ಘಟಕದಲ್ಲಿ ನಮೂದಿಸಿದರೆ, ಸೂಕ್ತ ಸಲಹೆ ಹಾಗೂ ಪರಿಹಾರ ಕ್ರಮವನ್ನು ಘಟಕವೂ ನೀಡಲಿದೆ. ರೋಗ ನಿರ್ಣಯ ಹಾಗೂ ಚಿಕಿತ್ಸೆ ಒದಗಿಸಲು ಘಟಕವೂ ಸಹಾಯವಾಗಲಿದೆ. ಕ್ಷೇತ್ರದ 87 ಹಳ್ಳಿಗಳಲ್ಲಿ ಡಿಜಿಟಲ್ ಗ್ರಂಥಾಲಯ ಮಾಡಲಾಗಿದೆ. ಇದರ ಜೊತೆಯಲ್ಲಿ, ಯುವಕ– ಯುವತಿಯರಿಗಾಗಿ ಕುಶಲ ಅಭಿವೃದ್ಧಿ ತರಬೇತಿ ನೀಡಲಾಗುತ್ತಿದೆ’ ಎಂದು ಹೇಳಿದರು.

ಶಾಸಕರಾದ ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ, ಯು.ಬಿ. ಬಣಕಾರ, ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪೀರ ಖಾದ್ರಿ, ಗಡಿ ಪ್ರದೇಶದ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ, ಜಿ.ಪಂ. ಸಿಇಒ ರುಚಿ ಬಿಂದಲ್, ಜಿಲ್ಲಾ ಎಸ್.ಪಿ. ಯಶೋಧಾ ವಂಟಗೋಡಿ, ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ ಎಲ್., ಹೆಚ್ಚುವರಿ ಎಸ್.ಪಿ. ಲಕ್ಷ್ಮಣ ಶಿರಕೋಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-22-205444225

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.