ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ಪಟ್ಟಣದಲ್ಲಿಯೂ ಸರ್ಕಾರಿ ಜಾಗ ಹಾಗೂ ಸಾರ್ವಜನಿಕ ರಸ್ತೆಯಲ್ಲಿರುವ ಮರಗಳನ್ನು ಅಕ್ರಮವಾಗಿ ಕಡಿದು ಹಾಕಲಾಗುತ್ತಿದೆ. ಈ ಬಗ್ಗೆ ದೂರು ನೀಡಿದರೂ ಅರಣ್ಯ ಇಲಾಖೆ ಹಾಗೂ ನಗರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲವೆಂದು ಪರಿಸರ ಪ್ರೇಮಿಗಳು ದೂರುತ್ತಿದ್ದಾರೆ.

ರಾಣೆಬೆನ್ನೂರಿನ ವಾಗೀಶನಗರದ ಅಂಚೆ ಕಚೇರಿ ಬಳಿಯೇ ಬೃಹತ್ ಮರವೊಂದನ್ನು ಇತ್ತೀಚೆಗೆ ಕಡಿದು ಹಾಕಲಾಗಿದೆ. ಇದನ್ನು ಪ್ರಶ್ನಿಸಿದ್ದ ‘ಪರಿಸರಕ್ಕಾಗಿ ನಾವು’ ಪರಿಸರ ಕಾರ್ಯಕರ್ತರ ರಾಜ್ಯ ಸಂಘಟನೆಯ ಪದಾಧಿಕಾರಿಗಳು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಆದರೆ, ಇದುವರೆಗೂ ತಪ್ಪಿತಸ್ಥರ ವಿರುದ್ಧ ಕ್ರಮವಾಗಿಲ್ಲ.

‘ಹಾವೇರಿ ಜಿಲ್ಲೆಯ ಹಲವು ಕಡೆಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿರುವ ಮರಗಳನ್ನು ರಾಜಾರೋಷವಾಗಿ ಕಡಿಯುತ್ತಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳಾಗಲಿ, ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಾಗಲಿ ಪ್ರಶ್ನಿಸುತ್ತಿಲ್ಲ. ಮರ ಕಡಿದರೆ ತಪ್ಪಿತಸ್ಥರ ವಿರುದ್ಧ ₹ 1 ಲಕ್ಷದವರೆಗೂ ದಂಡ ವಿಧಿಸಲು ಅವಕಾಶವಿದೆ. ಆದರೆ, ಅಧಿಕಾರಿಗಳು ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ’ ಎಂದು ಸಂಘಟನೆಯ ಪದಾಧಿಕಾರಿಗಳು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.